ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

26 ದಿನಗಳ ಉಪವಾಸ ಕೊನೆಗೊಳಿಸಿದ ಸೋನಮ್ ವಾಂಗ್ಚುಕ್; ಕೊನೆಗೂ ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ

Sonam Wangchuk: ನೀಟ್‌-2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಸಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ 26 ದಿನಗಳ ಬಳಿಕ ಉಪವಾಸ ಕೊನೆಗೊಳಿಸಿದ್ದಾರೆ.

ಉಪವಾಸ ಅಂತ್ಯಗೊಳಿಸಿದ ಸೋನಮ್‌ ವಾಂಗ್ಚುಕ್‌

ಚಂಡೀಗಢ, ಜು. 24: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿ ಮತ್ತು ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ತಾರ್ಕಿಕ ಅಂತ್ಯದತ್ತ ಸಾಗುವ ಲಕ್ಷಣ ಕಾಣಿಸುತ್ತಿದೆ. ಅದರ ಸೂಚನೆ ಎಂಬಂತೆ 26 ದಿನಗಳಿಂದ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ (Sonam Wangchuk) ತಮ್ಮ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ಹರಿಯಾಣದ ಗುರುಗ್ರಾಮದ ಮೇದಾಂತ ಖಾಸಗಿ ಆಸ್ಪತ್ರೆಯಲ್ಲಿರುವ ಅವರನ್ನು ಭೇಟಿಯಾದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್‌ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ ಮಧ್ಯರಾತ್ರಿ ಕೇಂದ್ರ ಸಚಿವರ ಸಮ್ಮುಖದಲ್ಲಿ ಸೋನಮ್‌ ತಮ್ಮ ಅನಿರ್ದಿಷ್ಟಾವಧಿಯ ಉಪವಾಸವನ್ನು ಕೊನೆಗೊಳಿಸಿ ಜೆ.ಪಿ. ನಡ್ಡಾ ನೀಡಿದ ಪಾನೀಯ ಸ್ವೀಕರಿಸಿದರು. ಈ ವೇಳೆ ಸೋನಮ್‌ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಉಪಸ್ಥಿತರಿದ್ದರು.

ಉಪವಾಸ ಅಂತ್ಯಗೊಳಿಸಿದ ಸೋನಮ್‌ ವಾಂಗ್ಚುಕ್‌:



ಜೂನ್‌ 28ರಿಂದ ಸತ್ಯಾಗ್ರಹ

ನೀಟ್‌-2026 ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿಗೆ ಬೆಂಬಲ ಸೂಚಿಸಿ ಸೋನಮ್‌ ಜೂನ್‌ 28ರಂದು ಅನಿರ್ದಿಷ್ಟಾವಧಿಯ ಉಪವಾಸ ಆರಂಭಿಸಿದ್ದರು. ಸೂನಮ್‌ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದರಿಂದ ದೆಹಲಿ ಹೈಕೋರ್ಟ್‌ ಆದೇಶದಂತೆ ಅವರನ್ನು ಆರಂಭದಲ್ಲಿ ದೆಹಲಿಯ ಸಫ್ದರ್‌ಜಂಗ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಳಿಕ ಅವರ ಪತ್ನಿ ಗೀತಾಂಜಲಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಸೋನಮ್‌ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ತಂಡ ನಿರಂತರವಾಗಿ ಸೋನಮ್‌ ಆರೋಗ್ಯ ಪರಿಶೀಲಿಸುತ್ತಲೇ ಇದೆ. ಆರಂಭದಿಂದಲೂ ಕೇಂದ್ರ ಉಪವಾಸ ನಿಲ್ಲಿಸುವಂತೆ ಸೋನಮ್‌ ಅವರಲ್ಲಿ ಮನವಿ ಸಲ್ಲಿಸುತ್ತಲೇ ಬಂದಿತ್ತು. ಇದೀಗ ಕೊನೆಗೂ ಕೇಂದ್ರ ಸಚಿವರು ಮನವೊಲಿಸುವಲ್ಲಿ ಯಶಸ್ವಿಯಾಗಿಸದ್ದಾರೆ.

ಸೋನಮ್‌ ವಾಂಗ್ಚುಕ್‌ ಪೋಸ್ಟ್‌:



ಸೋನಮ್‌ ವಾಂಗ್ಚುಕ್‌ ಹೇಳಿದ್ದೇನು?

"ಇದೀಗ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಮತ್ತು ಲೇಹ್ ಲಡಾಖ್‌ನ ಅಪೆಕ್ಸ್ ಬಾಡಿ ಹಿರಿಯ ನಾಯಕರ ಸಮ್ಮುಖದಲ್ಲಿ ನಾನು 26 ದಿನಗಳ ಉಪವಾಸವನ್ನು ಕೊನೆಗೊಳಿಸಿದೆ" ಎಂದು ವಾಂಗ್ಚುಕ್‌ ತಿಳಿಸಿದ್ದಾರೆ.

"ವಿವಿಧ ವಿಚಾರಗಳ ಕುರಿತು ದೀರ್ಘ ಮಾತುಕತೆ ಮತ್ತು ದೇಶದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದೇನೆʼʼ ಎಂದಿದ್ದಾರೆ. ಈ ಕುರಿತಾದ ವಿವರವಾದ ಮಾಹಿತಿಯನ್ನು ವಿಡಿಯೊದಲ್ಲಿ ತಿಳಿಸುವುದಾಗಿ ಹೇಳಿದ್ದಾರೆ. ಖುಷಿಯಿಂದ ಉಪವಾಸ ಅಂತ್ಯಗೊಳಿಸುತ್ತಿದ್ದೇನೆ ಎಂದು ಹೇಳಿದ ಅವರು ತಮ್ಮ ಬೆಂಬಲವಾಗಿ ನಿಂತ ಪತ್ನಿ ಗೀತಾಂಜಲಿ ಅವರಿಗೆ ಧನ್ಯವಾದ ಅರ್ಪಿಸಿದರು.

ಸೋನಮ್ ವಾಂಗ್‌ಚುಕ್ ಭೇಟಿಗೆ ತೆರಳಿದ ವಿರೋಧ ಪಕ್ಷದ ನಾಯಕರನ್ನು ತಡೆದ ಪೊಲೀಸರು

ಕೇಂದ್ರದಿಂದ ಕಠಿಣ ಕ್ರಮ

ನೀಟ್‌ ಅಕ್ರಮದಲ್ಲಿ ಪಾಲ್ಗೊಂಡವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈಗಾಗಲೇ ಕೇಂದ್ರ 1994ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ವಿನೀತ್ ಜೋಶಿ ಅವರ ಸ್ಥಾನವನ್ನು ನರೇಶ್ ಪಾಲ್ ಗಂಗ್ವಾರ್ ವಹಿಸಿಕೊಂಡಿದ್ದಾರೆ.

ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author