ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೊನೆಗೂ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಮುಂದಾದ ಸೋನಮ್ ವಾಂಗ್ಚುಕ್; ಕೇಂದ್ರ ಸರ್ಕಾರ ಕಂಡಿಷನ್ಸ್‌ ಒಪ್ಲೇ ಬೇಕು

Sonam Wangchuk: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಭರವಸೆ ನೀಡಿದರೆ ತಕ್ಷಣವೇ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಹೋರಾಟಗಾರ ಸೋನಮ್ ವಾಂಗ್ಚುಕ್ ತಿಳಿಸಿದ್ದಾರೆ. ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ವಿದ್ಯಾರ್ಥಿಗಳ ಹಕ್ಕುಗಳನ್ನು ಕಾಪಾಡುವಂತೆ ಹಾಗೂ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸದಂತೆ ಅವರು ಮನವಿ ಮಾಡಿದ್ದಾರೆ.

ಪ್ರತಿಭಟನಾ ವಿದ್ಯಾರ್ಥಿಗಳ ವಿರುದ್ಧ ಕೇಸ್‌ ಬೇಡ: ಸೋನಮ್‌ ವಾಂಗ್ಚುಕ್

ಸೋನಮ್ ವಾಂಗ್ಚುಕ್ -

Profile
Sushmitha Jain Jul 22, 2026 10:51 PM

ನವದೆಹಲಿ, ಜು. 22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ಪೂರ್ವಾಗ್ರಹ ಪೀಡಿತ ಶಿಕ್ಷೆಗಳನ್ನು ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದರೆ ತಕ್ಷಣವೇ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಪರಿಸರ ಹಾಗೂ ಶೈಕ್ಷಣಿಕ ಹೋರಾಟಗಾರ ಸೋನಮ್ ವಾಂಗ್ಚುಕ್ (Activist Sonam Wangchuk) ಪ್ರಕಟಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ಪೂರ್ವಾಗ್ರಹ ಪೀಡಿತ ಶಿಕ್ಷೆಗಳನ್ನು ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದರೆ ತಕ್ಷಣ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಪರಿಸರ ಹಾಗೂ ಶೈಕ್ಷಣಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಪ್ರಕಟಿಸಿದ್ದಾರೆ.

ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಬರೆದಿರುವ ಸುದೀರ್ಘ ಪತ್ರದಲ್ಲಿ ಈ ಕುರಿತು ವಿನಂತಿಸಿರುವ ಅವರು, ಒಂದು ವೇಳೆ ಸರ್ಕಾರದಿಂದ ಇಂತಹ ಸ್ಪಷ್ಟ ಭರವಸೆ ಬರದಿದ್ದರೆ ತಮಗೂ ಬೇರೆ ದಾರಿಯಿಲ್ಲದೆ ಅನಿರ್ದಿಷ್ಟಾವಧಿ ಉಪವಾಸವನ್ನು ಮುಂದುವರಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸೋನಮ್ ವಾಂಗ್ಚುಕ್ ಅವರ ಮನವಿ:



25ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಚಳವಳಿಯ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜೂನ್ 28ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ 59 ವರ್ಷದ ವಾಂಗ್ಚುಕ್ ಅವರನ್ನು ಕಳೆದ ಶನಿವಾರ ಜಂತರ್ ಮಂತರ್‌ನಿಂದ ದೆಹಲಿ ಪೊಲೀಸರು ತೆರವುಗೊಳಿಸಿದ್ದರು. ಪ್ರಸ್ತುತ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬುಧವಾರ ಅವರ ಉಪವಾಸ ಸತ್ಯಾಗ್ರಹ 25ನೇ ದಿನಕ್ಕೆ ಕಾಲಿಟ್ಟಿದೆ.

ಸೋನಮ್ ವಾಂಗ್‌ಚುಕ್‌ಗೆ ಜಯ; ಸಫ್ದರ್ಜಂಗ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ವಾಂಗ್ಚುಕ್ ಬರೆದ ಪತ್ರದಲ್ಲೇನಿದೆ?

ಸಚಿವರ ಭೇಟಿ ಹಾಗೂ ಭರವಸೆ: ಆಸ್ಪತ್ರೆಗೆ ಭೇಟಿ ನೀಡಿದ್ದ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ ವಾಂಗ್ಚುಕ್, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ, ಸಂಸತ್ತಿನಲ್ಲಿ ಚರ್ಚೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ಬೇಡಿಕೆಯ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದರು.

ವಿದ್ಯಾರ್ಥಿಗಳ ರಕ್ಷಣೆ ಮುಖ್ಯ: "ಸುಮಾರು 65 ಸಂಸದರು ಉಪವಾಸ ಅಂತ್ಯಗೊಳಿಸುವಂತೆ ವಿನಂತಿಸಿದ್ದಾರೆ. ನನಗೂ ನನ್ನ ಶಿಕ್ಷಣ ಕ್ಷೇತ್ರಕ್ಕೆ ಹಿಂತಿರುಗುವ ಆಸೆಯಿದೆ. ಆದರೆ ದೇಶದ ಭವಿಷ್ಯವಾಗಿರುವ ಯುವ ಪ್ರತಿಭಟನಾಕಾರರ ಹಿತಾಸಕ್ತಿಯನ್ನು ಬಲಿ ಕೊಟ್ಟು ನಾನು ಉಪವಾಸ ಅಂತ್ಯಗೊಳಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ನ್ಯಾಯಯುತ ವ್ಯವಸ್ಥೆಗಾಗಿ ಹೋರಾಡುತ್ತಿದ್ದಾರೆ ಹೊರತು ಅಪರಾಧ ಎಸಗಿಲ್ಲ" ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂಸಾಚಾರಕ್ಕೆ ಆಸ್ಪದ ಬೇಡ: ʼʼಸೋಮವಾರ ಸಂಸತ್ತಿಗೆ ನಡೆದ ಮೆರವಣಿಗೆ ಸಂಪೂರ್ಣ ಶಾಂತಿಯುತವಾಗಿತ್ತು. ವಿದ್ಯಾರ್ಥಿ ಸಮುದಾಯದ ಮೇಲಿನ ಬಲ ಪ್ರಯೋಗವನ್ನು ನಿಲ್ಲಿಸಬೇಕು ಮತ್ತು ಅವರ ಮೇಲೆ ಯಾವುದೇ ಪೊಲೀಸ್ ಕೇಸುಗಳನ್ನು ದಾಖಲಿಸಬಾರದುʼʼ ಎಂದು ವಾಂಗ್ಚುಕ್ ಮನವಿ ಮಾಡಿದ್ದಾರೆ.