ನವದೆಹಲಿ: ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕಾಕ್ರೋಚ್ ಜನತಾ ಪಕ್ಷದ (Cockroach Janta Party) ಹೋರಾಟದಲ್ಲಿ ಅವರ ಪಾತ್ರ ಬಹುದೊಡ್ಡದಾಗಿದೆ. ಅವರು ಮಾಡಿರುವ ತ್ಯಾಗ ಮರೆಯಲು ಸಾಧ್ಯವಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ (Abhijeet Deepke) ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಸೋನಮ್ ವಾಂಗ್ಚುಕ್ ಅವರೊಂದಿಗಿನ ಭಿನ್ನಾಭಿಪ್ರಾಯದ ಊಹಾಪೋಹವನ್ನು ತಿರಸ್ಕರಿಸಿದರು.
ವಾಂಗ್ಚುಕ್ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾದ ಬಳಿಕ ಅವರು ನಡೆಸಿರುವ 26 ದಿನಗಳ ಉಪವಾಸ ಸತ್ಯಾಗ್ರಹವು ಶಿಕ್ಷಣ ಸಚಿವರು ರಾಜೀನಾಮೆ ನೀಡುವಲ್ಲಿ ನಿರ್ಣಾಯಕವಾಗಿತ್ತು ಎಂದರು.
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾಗೆ ಸುಪ್ರೀಂ ಕೋರ್ಟ್‌ನಿಂದ ವಿಚ್ಛೇದನ ಮಂಜೂರು
ವಿದ್ಯಾರ್ಥಿಗಳ ಪ್ರತಿಭಟನೆ ಕೊನೆಗೊಳಿಸುವಾಗ ಕಾಕ್ರೋಚ್ ಜನತಾ ಪಕ್ಷವು ವಾಂಗ್ಚುಕ್ ಅವರ ಬಗ್ಗೆ ಉಲ್ಲೇಖಿಸದ ಕಾರಣ ಸಿಜೆಪಿ ಮತ್ತು ಅವರ ನಡುವೆ ಬಿರುಕು ಉಂಟಾಗಿದೆ ಎನ್ನುವ ವದಂತಿಗಳು ಹಬ್ಬಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅಭಿಜೀತ್ ದಿಪ್ಕೆ, ನಾವು ಒಂದಾಗಿಯೇ ಇದ್ದೇವೆ. ಅವರೊಂದಿಗೆ ನಾನು ಮಾತನಾಡಿದ್ದೇನೆ ಎಂದು ಹೇಳಿದರು.
ಜುಲೈ 20ರಂದು ನಡೆದ ಪ್ರತಿಭಟನೆಯ ಸಮಯದಲ್ಲಿ ಪೊಲೀಸರನ್ನು ಎದುರಿಸಿದ ವಿದ್ಯಾರ್ಥಿಗಳಿಗೆ ಧನ್ಯವಾದ ಹೇಳಿದ್ದೇನೆ. ಪ್ರತಿಭಟನೆ ಸಮಯದಲ್ಲಿ ವಾಂಗ್ಚುಕ್ ಅವರ ಕೊಡುಗೆ ಅಭಿಯಾನದ ಕೇಂದ್ರಬಿಂದುವಾಗಿದೆ ಎಂದ ಅವರು, ಸೋನಮ್ ವಾಂಗ್ಚುಕ್ ಅವರು ತಮ್ಮ ಜೀವವನ್ನು ಪಣಕ್ಕಿಟ್ಟು, ರಾಷ್ಟ್ರವನ್ನು ಜಾಗೃತಗೊಳಿಸಿದ್ದಾರೆ. ಸರ್ಕಾರವನ್ನು ಪ್ರಶ್ನಿಸಲು ಅವರು ಈ ರಾಷ್ಟ್ರವನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಅವರ ಉಪವಾಸ ಸತ್ಯಾಗ್ರಹವಿಲ್ಲದೆ ಶಿಕ್ಷಣ ಸಚಿವರು ರಾಜೀನಾಮೆ ನೀಡುತ್ತಿರಲಿಲ್ಲ ಎಂದರು.
ಅವರು ಉಪವಾಸ ಸತ್ಯಾಗ್ರಹ ಕೊನೆಗೊಳಿಸುವಂತೆ ನಾನು ವೈಯಕ್ತಿಕವಾಗಿ ವಿನಂತಿಸುತ್ತಿದ್ದೆ. ದಯವಿಟ್ಟು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿ. ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಹೇಳುತ್ತಿದ್ದೆ. ಕೊನೆಗೂ ಅವರು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ ದಿನ ನನಗೆ ತುಂಬಾ ಸಮಾಧಾನವಾಯಿತು ಎಂದು ಹೇಳಿದರು.
ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ವಾಂಗ್ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರಿಂದ ನನಗೆ ಯಾವುದೇ ಅಸಮಾಧಾನವಾಗಿಲ್ಲ ಎಂದ ಅವರು, ನಾನು ಇಲ್ಲದೇ ಇದ್ದಾಗ ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಲು ಬಂದಿದ್ದು ನಿರಾಶೆಯಾಗಿತ್ತು. ನಾನು ಅವರನ್ನು ಭೇಟಿ ಮಾಡಲು ಬಯಸಿದ್ದೆ. ನನಗೆ ಅವರನ್ನು ಭೇಟಿ ಮಾಡುವ ಅವಕಾಶ ನೀಡಲಿಲ್ಲ. ವಿರೋಧ ಪಕ್ಷದ ಸಂಸದರು ವಾಂಗ್ಚುಕ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಿದ್ದರು. ಆದರೆ ಅವರಿಗೆ ಅವಕಾಶ ನೀಡಿರಲಿಲ್ಲ. ವಾಂಗ್ಚುಕ್ ಅವರನ್ನು ಸರ್ಕಾರ ಅಪಹರಣ ಮಾಡಿತ್ತು. ಬೇರೆ ಯಾರಿಗೂ ಅವರನ್ನು ಭೇಟಿ ಮಾಡಲು ಅನುಮತಿ ನೀಡಲಿಲ್ಲ ಎಂದರು.
ಕಾಕ್ರೋಚ್ ಜನತಾ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ. ಅದು ರಾಜಕೀಯ ಪಕ್ಷವಾಗಿ ರೂಪಾಂತರಗೊಳ್ಳುವುದಿಲ್ಲ. ಚುನಾವಣೆಗಳಲ್ಲಿ ಸ್ಪರ್ಧಿಸುವ ಬದಲು ಸಂಘಟನೆಯಾಗಿ ಮುಂದುವರಿಯುತ್ತದೆ ಎಂದ ಅವರು, ಪ್ರತಿಭಟನೆಯ ಸಮಯದಲ್ಲಿ ನಡೆದ ಹಿಂಸಾಚಾರ ಬಿಜೆಪಿ ಗೂಂಡಾಗಳಿಂದ ಆಗಿರುವುದು. ಅವರು ಚಳುವಳಿಯ ಹಳಿ ತಪ್ಪಿಸಲು ಪ್ರಯತ್ನಿಸಿದರೂ ಎಂದರು.
ಇದು ನನಗೆ ಮೊದಲೇ ಗೊತ್ತಿತ್ತು. ಅವರು ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ನನಗೆ ವಿಷಾದವಿದೆ. ಆದರೆ ಕೆಲವು ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿಗಳಿಂದ ಕ್ರೂರವಾಗಿ ಥಳಿಸಲ್ಪಟ್ಟಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳ ಮೇಲೆ ನಡೆದಿರುವ ದಾಳಿಯ ಹಿಂದೆ ಒಂದು ಪಿತೂರಿ ಇದೆ. ಅವರು ಸರ್ಕಾರವನ್ನು ಪ್ರಶ್ನಿಸಲು ಅಥವಾ ಮತ್ತೆ ಪ್ರತಿಭಟನೆಗೆ ಬರಲು ಧೈರ್ಯ ಮಾಡಬಾರದು ಎಂದು ಬೆದರಿಸಲು ಇದನ್ನು ಮಾಡಲಾಗಿದೆ. ಸಿಜೆಪಿಯ ಭವಿಷ್ಯದ ಅಭಿಯಾನಗಳು ಶಿಕ್ಷಣವನ್ನು ಮೀರಿ ವಿಸ್ತರಿಸುತ್ತವೆ. ದೇಶದಲ್ಲಿ ನಿರುದ್ಯೋಗ ಮತ್ತು ಹೆಚ್ಚುತ್ತಿರುವ ಆರ್ಥಿಕ ವಿಭಜನೆಯ ಮೇಲೆ ಕೇಂದ್ರೀಕರಿಸುತ್ತವೆ ಎಂದರು.
ಬರೋಬ್ಬರಿ 20 ವರ್ಷಗಳ ಬಳಿಕ ಕೊಲ್ಕತ್ತಾಗೆ ಮರಳಿದ ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್; ಕಾರಣವೇನು?
ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಜನರ ನಂಬಿಕೆಯನ್ನು ಪುನಃಸ್ಥಾಪಿಸುವುದು ಅತ್ಯಗತ್ಯ. ಈ ನಂಬಿಕೆಯ ನಷ್ಟವು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲು. ನಾನು ರಾಜಕಾರಣಿಗಳು ಬಯಸುವುದಿಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಅರ್ಥಪೂರ್ಣ ಬದಲಾವಣೆಯು ರಾಜಕೀಯಕ್ಕಿಂತ ಹೆಚ್ಚಾಗಿ ಸಾರ್ವಜನಿಕ ಚಳುವಳಿಗಳ ಮೂಲಕ ಮಾತ್ರ ಸಾಧಿಸಬಹುದು ಎಂದು ಹೇಳಿದರು.