ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ
ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶಸ್ತ್ರಚಿಕಿತ್ಸೆಗಾಗಿ ಗುರುಗ್ರಾಮ್‌ನ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರು ಜನವರಿಯ ಆರಂಭದಲ್ಲಿ ಮತ್ತು ಕಳೆದ ಮಾರ್ಚ್ ನಲ್ಲಿ ಕೆಲಕಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಸಂಗ್ರಹ ಚಿತ್ರ -
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ( Senior Congress leader), ರಾಜ್ಯಸಭಾ ಸಂಸದೆ (Rajya Sabha MP) ಸೋನಿಯಾ ಗಾಂಧಿ (Sonia Gandhi) ಅವರು ಸಣ್ಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಅವರನ್ನು ಗುರುಗ್ರಾಮ್‌ನ (Gurugram) ಉನ್ನತ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಬುಧವಾರ ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ಬಳಿಕ ಕಳೆದ ಮಾರ್ಚ್ ತಿಂಗಳಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ ಎನ್ನಲಾಗಿದೆ.
ಸೋನಿಯಾ ಗಾಂಧಿ ಅವರಿಗೆ 79 ವರ್ಷವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಜನವರಿ ಆರಂಭದಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಅವರನ್ನು ಗುರುಗ್ರಾಮ್‌ನ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವ ರೀತಿಯ ಶಸ್ತ್ರಚಿಕಿತ್ಸೆ, ಯಾಕಾಗಿ ಮಾಡಲಾಗುತ್ತಿದೆ ಎನ್ನುವುದನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ.
ವಿಶ್ವಾಸ ಮತ ಅಗ್ನಿ ಪರೀಕ್ಷೆ ಗೆದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್; ಪರ ಮತ ಚಲಾಯಿಸಿದ್ದು ಯಾರೆಲ್ಲ?
ರಾಜಸ್ಥಾನದ ರಾಜ್ಯಸಭಾ ಸಂಸದರಾಗಿರುವ ಅವರು ದೆಹಲಿ ಮತ್ತು ಇತರ ಕೆಲವು ಆಸ್ಪತ್ರೆಗಳಲ್ಲಿ ಹಲವಾರು ಬಾರಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭದಲ್ಲಿ ಅವರೊಂದಿಗೆ ಅವರ ಮಕ್ಕಳಾದ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಆಸ್ಪತ್ರೆಯಲ್ಲಿದ್ದರು.
ಜನವರಿಯ ಆರಂಭದಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರ ಸ್ಥಿತಿಗೆ ದೆಹಲಿಯ ಚಳಿಗಾಲದ ತೊಂದರೆಗಳು, ಹೆಚ್ಚುತ್ತಿರುವ ಮಾಲಿನ್ಯ ಕಾರಣ. ಚಳಿ ಮತ್ತು ಮಾಲಿನ್ಯದ ಕಾರಣದಿಂದ ಅವರಿಗೆ ಶ್ವಾಸನಾಳದ ಆಸ್ತಮಾ ಸ್ವಲ್ಪ ಉಲ್ಬಣಗೊಂಡಿದೆ ಎಂದು ವೈದ್ಯರು ಹೇಳಿದ್ದರು.
ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ ಪ್ರತೀಕ್ ಯಾದವ್ ನಿಧನ; ಯಾರಿವರು? ಏನಿವರ ಹಿನ್ನೆಲೆ?
ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ 2025ರಲ್ಲೂ ಸುಮಾರು ಮೂರು ಬಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಮ್ಲಾ ಮತ್ತು ದೆಹಲಿಯ ಆಸ್ಪತ್ರೆಗಳಲ್ಲಿ ಅವರನ್ನು ನಿಯಮಿತವಾಗಿ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗುತ್ತಿದೆ.