National Herald Case: ನ್ಯಾಶನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಚಾರ್ಜ್‌ಶೀಟ್
National Herald Money Laundering Case: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ಮಂಗಳವಾರ (ಏ. 15) ಜಾರಿ ನಿರ್ದೇಶನಾಲಯ ಚಾರ್ಚ್‌ಶೀಟ್ ಸಲ್ಲಿಸಿದೆ.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ.

ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣ (National Herald money laundering case)ದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಮತ್ತು ಸ್ಯಾಮ್ ಪಿತ್ರೋಡಾ (Sam Pitroda) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ (ಏ. 15) ಜಾರಿ ನಿರ್ದೇಶನಾಲಯ (Enforcement Directorate) ಈ ಮೂವರು ನಾಯಕ ವಿರುದ್ಧ ಚಾರ್ಚ್‌ಶೀಟ್ ಸಲ್ಲಿಸಿದೆ. ವಿಶೇಷ ನ್ಯಾಯಾಲಯದಲ್ಲಿ ಏ. 25ರಂದು ವಿಚಾರಣೆ ನಡೆಯಲಿದೆ. ಸೋನಿಯಾ ಗಾಂಧಿ ಎ1 ಆರೋಪಿ ಆಗಿದ್ದರೆ, ರಾಹುಲ್ ಗಾಂಧಿ ಎ2 ಆರೋಪಿ.
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವುದು ಇದೇ ಮೊದಲು. 661 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ (ಏ. 12) ನೋಟಿಸ್ ನೀಡಿತ್ತು. ದಿಲ್ಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬೈಯ ಬಾಂದ್ರಾ ಮತ್ತು ಲಖನೌ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಕಾಂಗ್ರೆಸ್ ನಿಯಂತ್ರಣದಲ್ಲಿರುವ ಎಜೆಎಲ್ (Associated Journals Limited) ಕಟ್ಟಡದಲ್ಲಿ ನೋಟಿಸ್ ಲಗತ್ತಿಸಲಾಗಿತ್ತು. ಅದರ ಬೆನ್ನಲ್ಲೇ ಇದೀಗ ಜಾರ್ಚ್‌ಶೀಟ್ ಸಲ್ಲಿಸಲಾಗಿದೆ.
2023ರ ನವೆಂಬರ್‌ನಲ್ಲಿ ಇಡಿ ದಿಲ್ಲಿ, ಮುಂಬೈ ಮತ್ತು ಲಖನೌದಲ್ಲಿರುವ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮತ್ತು 90.2 ಕೋಟಿ ರೂ.ಗಳ ಮೌಲ್ಯದ ಎಜೆಎಲ್ ಷೇರುಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿತ್ತು.
ಸುಬ್ರಮಣಿಯನ್ ಸ್ವಾಮಿ ಅವರ ಎಕ್ಸ್ ಪೋಸ್ಟ್:
ED files chargesheet against Sonia & Rahul Gandhi in money laundering case linked to National Herald based on complaint by Dr Subramanian Swamy. #NationalHerald pic.twitter.com/ziyPasEwLK
— Subramanian Swamy (@Swamy39) April 15, 2025
ಈ ಸುದ್ದಿಯನ್ನೂ ಓದಿ: Sonia Gandhi: ನ್ಯಾಷನಲ್ ಹೆರಾಲ್ಡ್ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್ ಗಾಂಧಿಯ ಆಸ್ತಿ ಇಡಿ ವಶಕ್ಕೆ
ಏನಿದು ಪ್ರಕರಣ?
ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದ್ದರು. ಸದ್ಯ ಇದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕಂಪನಿಯ ಯಂಗ್ ಇಂಡಿಯಾ ಲಿಮಿಟೆಡ್ ಒಡೆತನದಲ್ಲಿದೆ.
ನ್ಯಾಶನಲ್ ಹೆರಾಲ್ಡ್‌ನಲ್ಲಿ ಅವ್ಯವಹಾರ ನಡೆದಿದೆ ಅಂತ ಮೊದಲು ಆರೋಪಿಸಿದ್ದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ. 2012ರಲ್ಲಿ ಅವರು ಸೋನಿಯಾ, ರಾಹುಲ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2,000 ಕೋಟಿ ರೂ. ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಎಜೆಎಲ್‌ನ ಸ್ವಾಧೀನದ ಸಮಯದಲ್ಲಿ ಯಂಗ್ ಇಂಡಿಯಾ ಕಾಂಗ್ರೆಸ್‌ಗೆ ನೀಡಬೇಕಾದ 90.25 ಕೋಟಿ ರೂ.ಯಲ್ಲಿ 50 ಲಕ್ಷ ರೂ. ಮಾತ್ರ ಪಾವತಿಸಲಾಗಿದೆ ಎಂದು ಸ್ವಾಮಿ ದೂರಿದ್ದರು. ಹೀಗಾಗಿ ಯಂಗ್ ಇಂಡಿಯಾ ಪ್ರಮುಖ ಸ್ಥಾನದಲ್ಲಿರುವ ರಾಹುಲ್, ಸೋನಿಯಾ ವಿರುದ್ಧ ತನಿಖೆ ನಡೆಸುವಂತೆ ಸ್ವಾಮಿ ಮನವಿ ಮಾಡಿದ್ದರು. ಈ ಪ್ರಕರಣ ರಾಜಕೀಯವಾಗಿ ಸಾಕಷ್ಟು ಸಂಚಲನ ಮೂಡಿಸಿತ್ತು. ಕಾಂಗ್ರೆಸ್ ನಾಯಕರು ಈ ಆರೋಪಗಳನ್ನು ನಿರಾಕರಿಸಿ, ಬಿಜೆಪಿ ಸುಳ್ಳು ದೂರು ದಾಖಲಿಸಿದೆ ಎಂದು ತಿಳಿಸಿತ್ತು.