ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಸ್ತೆ ಮಧ್ಯೆ ನಮಾಜ್ ಮಾಡಿದ ಎಸ್‌ಪಿ ನಾಯಕ ಹಾಜಿ ಮೊಹಮ್ಮದ್ ಉಸ್ಮಾನ್ ವಿರುದ್ಧ ಎಫ್ಐಆರ್

SP leader booked for offering namaz: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಸರ್ಕಾರಿ ಸರ್ಕ್ಯೂಟ್ ಹೌಸ್ ಆವರಣದ ರಸ್ತೆಯಲ್ಲಿ ನಮಾಜ್ (ಪ್ರಾರ್ಥನೆ) ಸಲ್ಲಿಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಹಾಜಿ ಮೊಹಮ್ಮದ್ ಉಸ್ಮಾನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ರಸ್ತೆಯಲ್ಲಿ ನಮಾಜ್ ಮಾಡಿದ ಎಸ್‌ಪಿ ನಾಯಕ: ಎಫ್ಐಆರ್ ದಾಖಲು

ಲಖನೌ, ಸೆ. 5: ಸರ್ಕಾರಿ ಸರ್ಕ್ಯೂಟ್ ಹೌಸ್ ಆವರಣದ ರಸ್ತೆಯಲ್ಲಿ ನಮಾಜ್ (ಪ್ರಾರ್ಥನೆ) ಸಲ್ಲಿಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಹಾಜಿ ಮೊಹಮ್ಮದ್ ಉಸ್ಮಾನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ. ಉತ್ತರ ಪ್ರದೇಶದ (Uttar Pradesh) ಮೊರಾದಾಬಾದ್‌ನಲ್ಲಿ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೊ ವೈರಲ್ (viral video) ಆದ ಬೆನ್ನಲ್ಲೇ ಹಿಂದೂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಂತರ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 3ರಂದು ಸರ್ಕ್ಯೂಟ್ ಹೌಸ್‌ನಲ್ಲಿ ಎಸ್‌ಪಿ ನಾಯಕರ ಪರಿಶೀಲನಾ ಸಭೆಯ ನಂತರ ಈ ಘಟನೆ ನಡೆದಿದೆ. ಉಸ್ಮಾನ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು ಮುಸ್ಲಿಂ ಎಂಬ ಕಾರಣಕ್ಕಾಗಿ ಅವರನ್ನು ಗುರಿಯಾಗಿಸಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. “ಹಾಜಿ ಮೊಹಮ್ಮದ್ ಉಸ್ಮಾನ್ - ಸಮಾಜವಾದಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮತ್ತು ಬಿಲಾರಿ ಶಾಸಕ ಮೊಹಮ್ಮದ್ ಫಹೀಮ್ ಇರ್ಫಾನ್ ಅವರ ಮಾವ. ಅವರೊಬ್ಬ ಮುಸ್ಲಿಂ. ಅದಕ್ಕಾಗಿಯೇ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂತಹ ನಾಚಿಕೆಗೇಡು” ಎಂದು ಖೇರಾ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇಲ್ಲಿದೆ ವಿಡಿಯೊ:



ನಮಾಜ್ ಗಲಾಟೆ

ಸಭೆ ಮುಗಿದ ನಂತರ, ಉಸ್ಮಾನ್ ಹೊರಗೆ ಬಂದು ಪ್ರಾರ್ಥನೆ ಸಲ್ಲಿಸಿದರು. ಎಸ್‌ಪಿ ಕಾರ್ಯಕರ್ತನೊಬ್ಬ ರೆಕಾರ್ಡ್ ಮಾಡಿದ ವಿಡಿಯೊದಲ್ಲಿ ನಿಲ್ಲಿಸಿದ್ದ ಕಾರಿನ ಪಕ್ಕದಲ್ಲಿ ಅವರು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು.

ಹಿಂದೂ ಕುಟುಂಬಕ್ಕಾಗಿ ಗಣಪತಿ ವಿಗ್ರಹ ತಯಾರಿಸಿದ ಪಾಕಿಸ್ತಾನದ ಮುಸ್ಲಿಂ ಕಲಾವಿದ!

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಸರ್ಕಾರಿ ಆವರಣದಲ್ಲಿ ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡಬೇಕೇ ಎಂಬ ಚರ್ಚೆಗೆ ನಾಂದಿ ಹಾಡಿದೆ. ಕೆಲವು ಬಳಕೆದಾರರು ಈ ಘಟನೆಯನ್ನು ವ್ಯಕ್ತಿಯೊಬ್ಬರ ಧಾರ್ಮಿಕ ನಂಬಿಕೆಯ ಆಚರಣೆ ಎಂದು ಬಣ್ಣಿಸಿದರೆ, ಇನ್ನು ಕೆಲವರು ಸರ್ಕಾರಿ ಆಸ್ತಿಯಲ್ಲಿ ಪ್ರಾರ್ಥನೆ ಸಲ್ಲಿಸಿರುವುದನ್ನು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕ್ಯೂಟ್ ಹೌಸ್‌ನ ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕಾಗಿ ಸಮಾಜವಾದಿ ಪಕ್ಷದ ನಾಯಕ ಹಾಜಿ ಮೊಹಮ್ಮದ್ ಉಸ್ಮಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಲಾರಿ ಶಾಸಕ ಮೊಹಮ್ಮದ್ ಫಹೀಮ್ ಇರ್ಫಾನ್ ಅವರ ಮಾವ ಮತ್ತು ಜಿಲ್ಲಾ ಉಪಾಧ್ಯಕ್ಷರಾಗಿರುವ ಉಸ್ಮಾನ್ ವಿರುದ್ಧ ದುರು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿಲ್ಲಿಸಿದ್ದ ಕಾರಿನ ಬಳಿ ಉಸ್ಮಾನ್ ನಮಾಜ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.