Stampede: ಅವಸಾನೇಶ್ವರ ದೇವಾಲಯದ ಶೆಡ್ ಮೇಲೆ ಬಿದ್ದ ವಿದ್ಯುತ್ ತಂತಿ; ಇಬ್ಬರ ಸಾವು, ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣ
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಸ್ಥಾನವೊಂದರಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ ತಂತಿಯೊಂದು ತಗಡಿನ ಶೆಡ್ ಮೇಲೆ ಬಿದ್ದು, ಹಲವರಿಗೆ ಶಾಕ್ ತಗುಲಿದ ಪರಿಣಾಮ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


ಲಖನೌ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿರುವ ದೇವಸ್ಥಾನವೊಂದರಲ್ಲಿ ಸೋಮವಾರ ಬೆಳಗಿನ ಜಾವ ವಿದ್ಯುತ್ (Stampede) ತಂತಿಯೊಂದು ತಗಡಿನ ಶೆಡ್ ಮೇಲೆ ಬಿದ್ದು, ಹಲವರಿಗೆ ಶಾಕ್ ತಗುಲಿದ ಪರಿಣಾಮ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರಾಚೀನ ಅವಸಾನೇಶ್ವರ ಮಹಾದೇವ ದೇವಾಲಯದ ಆವರಣದಲ್ಲಿ ಈ ಘಟನೆ ಸಂಭವಿಸಿದೆ. ಶ್ರಾವಣ ಮಾಸದ ಮೂರನೇ ಸೋಮವಾರದಂದು ದರ್ಶನಕ್ಕಾಗಿ ಭಕ್ತರು ಸಾಲುಗಟ್ಟಿ ನಿಂತಿದ್ದಾಗ ಕಾಲ್ತುಳಿತ ಉಂಟಾಗಿದೆ. ಕೆಲವು ಮಂಗಗಳು ತಂತಿಗಳ ಮೇಲೆ ಹಾರಿದ ನಂತರ ವಿದ್ಯುತ್ ತಂತಿ ತುಂಡಾಗಿ ಟಿನ್ ಶೆಡ್ ಮೇಲೆ ಬಿದ್ದಿತು.
ಸರತಿ ಸಾಲಿನಲ್ಲಿ ನಿಂತಿದ್ದ ಹಲವು ಭಕ್ತರಿಗೆ ವಿದ್ಯುತ್ ಶಾಕ್ ತಗುಲಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ಹೇಳಿದ್ದಾರೆ. ಶ್ರಾವಣ ಮಾಸದ ಮೂರನೇ ಸೋಮವಾರದಂದು ದರ್ಶನಕ್ಕಾಗಿ ಭಕ್ತರು ಆಗಮಿಸಿದ್ದಾಗ ಈ ದುರ್ಘಟನೆ ನಡೆದಿದೆ. ಸುಮಾರು 19 ಜನರಿಗೆ ವಿದ್ಯುತ್ ಆಘಾತಗಳುಂಟಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಭಾನುವಾರವಾದ್ದರಿಂದ, 500 ಅಡಿಗಳಿಗಿಂತ ಹೆಚ್ಚು ಎತ್ತರದ ಶಿವಾಲಿಕ್ ಬೆಟ್ಟದ ತುದಿಯಲ್ಲಿರುವ ದೇವಾಲಯದಲ್ಲಿ ಭಕ್ತರ ದಂಡೇ ನೆರೆದಿತ್ತು.
ಈ ಸುದ್ದಿಯನ್ನೂ ಓದಿ: Haridwar Stampede: ಹರಿದ್ವಾರದಲ್ಲಿ ಕಾಲ್ತುಳಿತ- 6 ಬಲಿ; ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ
ಹರಿದ್ವಾರದ ಮಾನಸದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಕಾಲ್ತುಳಿತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿದ ನಂತರ ಉಂಟಾದ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಾರೆ. ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಭಾನುವಾರ ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದ ಮೇಲೆ ಹಠಾತ್ತನೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಬಿದ್ದ ಪರಿಣಾಮ ಜನರು ಚೆಲ್ಲಾಪಿಲ್ಲಿಯಾಗಿ ಓಡಲು ಶುರು ಮಾಡಿದರು. ಅಲ್ಲಿದ್ದ ಭಕ್ತರಲ್ಲಿ ಕಾಲ್ತುಳಿತ ಉಂಟಾಗಿತ್ತು.
ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ ಬಗ್ಗೆ ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಅವರು ಪ್ರತಿಕ್ರಿಯಿಸಿದ್ದು, ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಕಡೆಗೆ ಪಾದಚಾರಿ ರಸ್ತೆಯಲ್ಲಿ ಕಾಲ್ತುಳಿತ ಸಂಭವಿಸಿದೆ ಇಲ್ಲಿಯವರೆಗೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರಿಯಾದ ತನಿಖೆಯ ನಂತರ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.