Mahua Moitra: ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮೇಲೆ ಬಿತ್ತು FIR
ಕೇಂದ್ರ ಗೃಹಸಚಿವ ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದಿತ ಹೇಳಿಕೆ ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯ ಬಗ್ಗೆ ಪ್ರಶ್ನೆ ಕೇಳಲಾದ ಸಂದರ್ಭದಲ್ಲಿ ಶಾ ವಿರುದ್ಧ ಅವಹೇಳನಕಾರಿ ಅವರು ಈ ಹೇಳಿಕೆ ನೀಡಿದ್ದರು.

ಸಂಸದೆ ಮಹುವಾ ಮೊಯಿತ್ರಾ-ಅಮಿತ್ ಶಾ -

ಕೋಲ್ಕತಾ: ಕೇಂದ್ರ ಗೃಹ ಸಚಿವ (Central Home Minister) ಅಮಿತ್ ಶಾ (Amith Sha) ವಿರುದ್ಧ ಅವಹೇಳನಕಾರಿ (Deformity) ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಸಂಸದೆ ಮಹುವಾಗೆ ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ಮಾಧ್ಯಮ ವರದಿಗಾರರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಂಸದೆ ಮಹುವಾ ಗಡಿ ಕಾಯಲು, ನುಸುಳುವಿಕೆ ತಡೆಯಲು ನಮ್ಮ ಗೃಹ ಸಚಿವರು ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಭಾರತದ ಗಡಿಗಳನ್ನು ರಕ್ಷಿಸಲು ಯಾರೂ ಇಲ್ಲದಿದ್ದರೆ, ಇತರ ದೇಶಗಳ ಜನರು ಪ್ರತಿದಿನ ನೂರಾರು, ಸಾವಿರಾರು ಮತ್ತು ಲಕ್ಷಗಳಲ್ಲಿ ಒಳ ನುಸುಳುತ್ತಿದ್ದರೆ ಮತ್ತು ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ಕಣ್ಣಿಟ್ಟು, ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತಿದ್ದರೆ, ಮೊದಲು ನೀವು ಅಮಿತ್ ಶಾ ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು. ಗೃಹ ಸಚಿವರು ಮತ್ತು ಗೃಹ ಸಚಿವಾಲಯವು ಭಾರತದ ಗಡಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ಮತ್ತು ಹೊರಗಿನಿಂದ ಬಂದ ಜನರು ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ಕಣ್ಣಿಟ್ಟು ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ನಾವು ಕೂಡ ಅವರ ಭಯದಲ್ಲಿ ಬದುಕುತ್ತೇವೆ ಎಂದು ಹೇಳಿದ್ದಾರೆ. ಒಂದು ವೇಳೆ ಭಾರತದ ಗಡಿಯನ್ನ (Indian Border) ರಕ್ಷಣೆ ಮಾಡಲು ಸಾಧ್ಯವಾಗದಿದ್ರೆ, ಅಮಿತ್ ಶಾ (Amit Shah) ಅವರ ತಲೆ ಕತ್ತರಿಸಿ ಟೇಬಲ್ ಮೇಲೆ ಪ್ರದರ್ಶನಕ್ಕಿಡುವುದು ನಿಮ್ಮ ಕರ್ತವ್ಯ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಛತ್ತೀಸಗಢದ ರಾಯ್‌ಪುರದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಓದಿ: Viral News: ಗೆಳತಿ ಫೋನ್ ಬ್ಯುಸಿ ಬಂದಿದ್ದಕ್ಕೆ ಗ್ರಾಮದ ವಿದ್ಯುತ್ ಅನ್ನೇ ಕಡಿತಗೊಳಿಸಿದ
ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) ಮತ್ತು 197 (ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತವಾದ ಆರೋಪಗಳು, ಪ್ರತಿಪಾದನೆಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಹುವಾ ಮೊಯಿತ್ರಾ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಟಿಎಂಸಿ ಹೀನ ಮನಸ್ಥಿತಿಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಬಂಗಾಳವನ್ನು ಅಭಿವೃದ್ಧಿಪಡಿಸಲು ಬಿಡುತ್ತಿಲ್ಲ ಎಂಬುದಕ್ಕೆ ಈ ಹೇಳಿಕೆ ಪುರಾವೆ ಎಂದು ತಿರುಗೇಟು ನೀಡಿದ್ದು, ಈ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ, ನಾಡಿಯಾ ಜಿಲ್ಲೆಯ ಕೃಷ್ಣನಗರದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಮಹುವಾ ಮೊಯಿತ್ರಾ ವಿರುದ್ಧ ದೂರು ದಾಖಲಿಸಿದೆ.