ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಐಐಟಿ ಬಾಂಬೆ ಪ್ರಾಧ್ಯಾಪಕ ಸೂರ್ಯನಾರಾಯಣ ಡೂಲ್ಲಾ ಅಮಾನತು

IIT Bombay professor suspended: ನಂತರ ಐಐಟಿ ಬಾಂಬೆ ಪ್ರಾಧ್ಯಾಪಕ ಮತ್ತು ಪರೀಕ್ಷಾ ಮೇಲ್ವಿಚಾರಕ ಸೂರ್ಯನಾರಾಯಣ ಡೂಲ್ಲಾ ಅವರನ್ನು ಡೀನ್ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಬಿ.ಟೆಕ್ ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಐಐಟಿ ಬಾಂಬೆ ಪ್ರಾಧ್ಯಾಪಕ ಸೂರ್ಯನಾರಾಯಣ ಡೂಲ್ಲಾ ಅಮಾನತು

ಐಐಟಿ ಬಾಂಬೆ ಪ್ರೊಫೆಸರ್ ಸೂರ್ಯನಾರಾಯಣ ದೂಲ್ಲಾ ಅಮಾನತು -

Priyanka P
Priyanka P Sep 21, 2026 5:19 PM

ಮುಂಬೈ, ಸೆ.21: ಎರಡನೇ ವರ್ಷದ ಬಿ.ಟೆಕ್ ವಿದ್ಯಾರ್ಥಿಯ ಸಾವಿನ ಹಿನ್ನೆಲೆಯಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯ ನಂತರ ಐಐಟಿ ಬಾಂಬೆ (IIT Bombay) ಪ್ರಾಧ್ಯಾಪಕ ಮತ್ತು ಪರೀಕ್ಷಾ ಮೇಲ್ವಿಚಾರಕ ಸೂರ್ಯನಾರಾಯಣ ಡೂಲ್ಲಾ (Suryanarayana Dulla) ಅವರನ್ನು ಡೀನ್ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಈ ಸಂಬಂಧ ಮುಂಬೈ ಪೊಲೀಸ್ ಅಪರಾಧ ವಿಭಾಗವು ಪ್ರಕರಣದ ತನಿಖೆ ನಡೆಸುತ್ತಿದೆ.

ಕ್ಯಾಂಪಸ್ ಅಧಿಕಾರಿಗಳು ಕಿರುಕುಳ ಮತ್ತು ಜಾತಿ ಆಧಾರಿತ ತಾರತಮ್ಯ ಮಾಡಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ ನಂತರ ದಾಖಲಾದ ಎಫ್‌ಐಆರ್‌ನಲ್ಲಿ ಡೂಲ್ಲಾನನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.

ವಿದ್ಯಾರ್ಥಿಯ ಸಾವಿಗೆ ಸಂಬಂಧಿಸಿದಂತೆ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ನಿರಂತರ ಒತ್ತಾಯದ ನಡುವೆಯೇ ಅಮಾನತು ಕ್ರಮ ಕೈಗೊಳ್ಳಲಾಗಿದೆ. ಮುಂಬೈ ಪೊಲೀಸರು ಶನಿವಾರ (ಸೆ.19) ರಾತ್ರಿ ಈ ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿದ್ದರು. ತನಿಖೆಯ ಭಾಗವಾಗಿ ಪ್ರಾಧ್ಯಾಪಕರು ಸೇರಿದಂತೆ ಇತರರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿ ಸಾವಿನ ಬಗ್ಗೆ ಹಿಂದಿನ ಹೇಳಿಕೆಗಳಿಗೆ ಕ್ಷಮೆಯಾಚಿಸಿದ ಐಐಟಿ ಬಾಂಬೆ: ನಿರ್ದೇಶಕರ ರಾಜೀನಾಮೆ ನಿರಾಕರಣೆ

ಮೃತ ವಿದ್ಯಾರ್ಥಿ ಐಐಟಿ ಬಾಂಬೆಯ ಎನರ್ಜಿ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ (ಸೆ.18) ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಇದಕ್ಕೂ ಕೆಲ ಗಂಟೆಗಳ ಮೊದಲು ಕ್ಯಾಂಪಸ್‌ನಲ್ಲಿ ಪರೀಕ್ಷೆಗೆ ಸಂಬಂಧಿಸಿದ ಘಟನೆ ನಡೆದಿತ್ತು. ಘಟನೆಯ ಬಳಿಕ ವಿದ್ಯಾರ್ಥಿಯ ತಂದೆ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದ್ದು, ಪ್ರಾಧ್ಯಾಪಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಆ ಪ್ರಾಧ್ಯಾಪಕರು ಕಳೆದ ಮೂರು ತಿಂಗಳ ಅವಧಿಯಲ್ಲಿ ಆ ವಿದ್ಯಾರ್ಥಿಗೆ ಜಾತಿ ಆಧಾರಿತ ಕಿರುಕುಳ ನೀಡುತ್ತಿದ್ದರು ಮತ್ತು ಆತನ ವಿರುದ್ಧ ಜಾತಿ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ನಂತರ ಪ್ರಕರಣವನ್ನು ಮುಂಬೈ ಅಪರಾಧ ಶಾಖೆಗೆ ವರ್ಗಾಯಿಸಲಾಯಿತು. ಅಪರಾಧ ವಿಭಾಗವು ಡೂಲ್ಲಾ ಮತ್ತು ಇತರರನ್ನು ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ. ತನಿಖೆಯನ್ನು ಸಹಾಯಕ ಪೊಲೀಸ್ ಆಯುಕ್ತರು ನಿರ್ವಹಿಸುತ್ತಿದ್ದರು.

ಪ್ರಾಧ್ಯಾಪಕರ ವಿರುದ್ಧದ ಆರೋಪಗಳು ತನಿಖೆಯ ಹಂತದಲ್ಲಿವೆ. ಸೆಪ್ಟೆಂಬರ್ 18 ರಂದು ಮಧ್ಯ ಸೆಮಿಸ್ಟರ್ ಪರೀಕ್ಷೆಯ ಸಮಯದಲ್ಲಿ ನಡೆದ ಘಟನೆಯ ನಂತರ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಹಾಲ್‌ನಲ್ಲಿ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸುತ್ತಿರುವುದು ಕಂಡುಬಂದಿದೆ. ಉತ್ತರಕ್ಕಾಗಿ ಆತ ಚಾಟ್‌ಜಿಪಿಟಿಯಲ್ಲಿ ಪ್ರಶ್ನೆ ಪತ್ರಿಕೆಯನ್ನು ಅಪ್‌ಲೋಡ್ ಮಾಡಿದ್ದಾನೆ ಎಂದು ಐಐಟಿ ಬಾಂಬೆ ಈ ಹಿಂದೆ ಹೇಳಿತ್ತು.