ನವದೆಹಲಿ: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಮತದಾರರ ಪಟ್ಟಿಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಅಳಿಸುವಿಕೆ ಮತ್ತು ಅಕ್ರಮಗಳ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ಭಾರತೀಯ ಚುನಾವಣಾ ಆಯೋಗ (ECI) ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ . ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಹಮ್ಮಿಕೊಂಡಿರುವ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಮತ್ತು ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿದೆ ಎಂದು ಆರೋಪಿಸಿ ಈ ಅರ್ಜಿಯನ್ನು ದಾಖಲಿಸಲಾಗಿತ್ತು.
ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್, ಎನ್ಸಿಪಿ (ಶರದ್ ಪವಾರ್) ನಾಯಕಿ ಸುಪ್ರಿಯಾ ಸುಳೆ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಸೇರಿದಂತೆ 13 ಪ್ರಮುಖ ವಿರೋಧ ಪಕ್ಷದ ನಾಯಕರು ಈ ಅರ್ಜಿಯನ್ನು ಸಲ್ಲಿಸಿದ್ದರು.
ಆರೋಪವೇನಿತ್ತು?
ಚುನಾವಣಾ ಆಯೋಗವು ಹಮ್ಮಿಕೊಂಡಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ದೇಶಾದ್ಯಂತ ಕೋಟ್ಯಂತರ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಮತ್ತು ಏಕಪಕ್ಷೀಯವಾಗಿ ತೆಗೆದುಹಾಕಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ನಿಯಮಾವಳಿಗಳ ಪ್ರಕಾರ ಯಾವುದೇ ಮತದಾರನಿಗೆ ಮುಂಚಿತವಾಗಿ ನೋಟಿಸ್ ನೀಡದೆ ಅಥವಾ ಅವರ ಅಹವಾಲನ್ನು ಕೇಳದೆ ಹೆಸರನ್ನು ಕೈಬಿಡಬಾರದು, ಆದರೆ ಆಯೋಗವು ಈ ನಿಯಮವನ್ನು ಉಲ್ಲಂಘಿಸಿದೆ ಎಂದು ದೂರಲಾಗಿದೆ. ಮುಖ್ಯ ಚುನಾವಣಾ ಆಯುಕ್ತರಾದ (CEC) ಜ್ಞಾನೇಶ್ ಕುಮಾರ್ ಅವರು ಇತರ ಇಬ್ಬರು ಚುನಾವಣಾ ಆಯುಕ್ತರಾದ ಒಪ್ಪಿಗೆ ಅಥವಾ ಗಮನಕ್ಕೆ ತರದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಕಾಂಗ್ರೆಸ್ ನಾಯಕರು ಸಲ್ಲಿಸಿದ ಅರ್ಜಿ ಪರಿಶೀಲನೆ ನಡೆಸಿದ್ದು, ಇದೀಗ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ಸೇರಿ ಹಲವರಿಗೆ ನೋಟೀಸ್ ಜಾರಿ ಮಾಡಲಾಗಿದೆ.
ರಾಹುಲ್, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ನತ್ತ ಇಂಡಿಯಾ ಮೈತ್ರಿಕೂಟದ ಮೆರವಣಿಗೆ: ಪೊಲೀಸರಿಂದ ತಡೆ
ನೋಟಿಸ್ ಜಾರಿ ಮಾಡುವ ಸಂದರ್ಭದಲ್ಲೇ, ಸುಪ್ರೀಂ ಕೋರ್ಟ್ ಆವರಣಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದ ಅರ್ಜಿದಾರರೊಬ್ಬರ ನಡವಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದ ನ್ಯಾಯಪೀಠವು, "ನ್ಯಾಯಾಂಗವನ್ನು ಯಾರೊಬ್ಬರೂ ಹೆದರಿಸಲು ಸಾಧ್ಯವಿಲ್ಲ, ಮುಂದಿನ ವಿಚಾರಣೆಯ ದಿನದಂದು ಈ ನಡವಳಿಕೆಯ ಬಗ್ಗೆ ವಿವರಣೆ ಕೇಳಲಾಗುವುದು" ಎಂದು ಎಚ್ಚರಿಸಿದೆ.
ನೋಟಿಸ್ ಜಾರಿ ಮಾಡುವ ಸಂದರ್ಭದಲ್ಲೇ, ಸುಪ್ರೀಂ ಕೋರ್ಟ್ ಆವರಣಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದ ಅರ್ಜಿದಾರರೊಬ್ಬರ ನಡವಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದ ನ್ಯಾಯಪೀಠವು, "ನ್ಯಾಯಾಂಗವನ್ನು ಯಾರೊಬ್ಬರೂ ಹೆದರಿಸಲು ಸಾಧ್ಯವಿಲ್ಲ, ಮುಂದಿನ ವಿಚಾರಣೆಯ ದಿನದಂದು ಈ ನಡವಳಿಕೆಯ ಬಗ್ಗೆ ವಿವರಣೆ ಕೇಳಲಾಗುವುದು" ಎಂದು ಎಚ್ಚರಿಸಿದೆ.