ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸೆಪ್ಟೆಂಬರ್ 5ರ ಸಿಜೆಪಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ; ಮಹತ್ವದ ಆದೇಶದಲ್ಲಿ ಏನಿದೆ?

SC Refuses to Stop CJP’s Protest: ಸೆಪ್ಟೆಂಬರ್ 5ರಂದು ನಡೆಯಲಿರುವ ಸಿಜೆಪಿ ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸರದ್ದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)

ನವದೆಹಲಿ, ಆ. 31: ಸೆಪ್ಟೆಂಬರ್ 5ರಂದು ನಡೆಯಲಿರುವ ಸಿಜೆಪಿ ಪ್ರತಿಭಟನಾ (CJP protest) ಮೆರವಣಿಗೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಇಂಡಿಯಾ ಗೇಟ್‌ನಿಂದ ನವದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ನಡೆಸಲು ಉದ್ದೇಶಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನಾ ಮೆರವಣಿಗೆಯ ವಿರುದ್ಧ ತಕ್ಷಣದ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪ್ರತಿಭಟನೆಯು ಅಹಿತಕರ ಘಟನೆಗೆ ಕಾರಣವಾಗುತ್ತದೆ ಎಂದು ಹೇಳಲು ಯಾವುದೇ ಆಧಾರವಿಲ್ಲ ಎಂದು ಹೇಳಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸರದ್ದಾಗಿದೆ ಎಂದು ಹೇಳಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ಅರ್ಜಿದಾರರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹೇಳಿತು.

ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಶಾಂತಿಯುತ ಮತ್ತು ಕಾನೂನುಬದ್ಧ ರೀತಿಯಲ್ಲಿ ನಡೆದುಕೊಳ್ಳುತ್ತಾರೆ ಮತ್ತು ವರ್ತಿಸುತ್ತಾರೆ ಎಂದು ಭಾವಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (CJI) ತಿಳಿಸಿದ್ದಾರೆ. ಈ ವಿಷಯವು ಕಾನೂನು ಮತ್ತು ಸುವ್ಯವಸ್ಥೆ ಹಾಗೂ ನೀತಿ ಪರಿಗಣನೆಗಳು ಎಂಬ ಎರಡು ಅಂಶಗಳನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಿಜೆಪಿ ಪ್ರತಿಭಟನೆ ಬೆಂಬಲಿಸಲು ಪೊಲೀಸರು ರಜೆ ಹಾಕಿ ಮುಖವಾಡ ಧರಿಸಿ ಬಂದಿದ್ದರು: ಹೊಸ ಬಾಂಬ್‌ ಸಿಡಿಸಿದ ಅಭಿಜಿತ್‌ ದೀಪ್ಕೆ

ಕಾನೂನು ಚೌಕಟ್ಟಿನೊಳಗೆ ಅವರು ಕಾರ್ಯನಿರ್ವಹಿಸುತ್ತಾರೆ ಎನ್ನುವುದು ಖಚಿತವಾಗಿದೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಕೇಂದ್ರ ಮತ್ತು ದೆಹಲಿ ಸರ್ಕಾರದ ಜವಾಬ್ದಾರಿಯ ಎಂದು ಸ್ಪಷ್ಟಪಡಿಸಿದರು. ಈ ಪ್ರಕರಣದ ವಿಚಾರಣೆ ಸೆಪ್ಟೆಂಬರ್ 10ರಂದು ನಡೆಯಲಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಜುಲೈ 25ರಂದು ದೇಶಾದ್ಯಂತ ನಡೆಸಲಾಗಿದ್ದ ಬೃಹತ್ ಆಂದೋಲನವನ್ನು ಹಿಂತೆಗೆದುಕೊಂಡಾಗ ನೀಡಿದ ಭರವಸೆಗಳನ್ನು ಪೂರೈಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಆರೋಪಿಸಿ, ಆಗಸ್ಟ್ 24ರಂದು ಸಿಜೆಪಿಯು ಮತ್ತೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿತು. ಸೆಪ್ಟೆಂಬರ್ 5ರ ಪ್ರತಿಭಟನೆ ಶಾಂತಿಯುತವಾಗಿರಲಿದೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಹೇಳಿದರು.

ಜುಲೈ 25ರಂದು ಭಾರತ ಸರ್ಕಾರ ಯುವ ಪೀಳಿಗೆಗೆ ನೀಡಿದ ಬದ್ಧತೆಗಳನ್ನು ಪೂರೈಸಲು ಉದ್ದೇಶಿಸಿದೆಯೇ ಎಂಬುದರ ಕುರಿತು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿದೆ. ಆದ್ದರಿಂದ ಇಂಡಿಯಾ ಗೇಟ್‌ನಿಂದ ಪ್ರಾರಂಭವಾಗಿ ಹೊಸ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಲಾಗಿದೆ. ಜುಲೈ 20ರ ಪೊಲೀಸ್ ದೌರ್ಜನ್ಯಕ್ಕೆ ಬಲಿಯಾದ ಮತ್ತು ಆತ್ಮಹತ್ಯೆಯಿಂದ ಮೃತಪಟ್ಟ ನೀಟ್ ವಿದ್ಯಾರ್ಥಿಗಳ ಕುಟುಂಬಗಳು ಈ ಪ್ರತಿಭಟನೆಯ ನೇತೃತ್ವ ವಹಿಸಲಿವೆ ಎಂದು ಅವರು ಹೇಳಿದರು.