ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡುವ ಗೌರವ ಇದೇನಾ? ಸಾವರ್ಕರ್‌ ವಿರುದ್ಧದ ಹೇಳಿಕೆಗೆ ರಾಹುಲ್‌ಗಾಂಧಿಗೆ ಸುಪ್ರೀಂ ಕ್ಲಾಸ್‌

Supreme Court Slams Rahul Gandhi:ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ ಆಗಿದೆ. ಈ ವರ್ತನೆ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

ಸಾವರ್ಕರ್‌ಗೆ ಅಪಮಾನ;  ರಾಹುಲ್‌ಗಾಂಧಿಗೆ ಸುಪ್ರೀಂ ಕ್ಲಾಸ್‌

Profile Rakshita Karkera Apr 25, 2025 12:36 PM

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌(VD Savarkar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ರಾಹುಲ್‌ ಗಾಂಧಿ( Rahul Gandhi) ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ಮೇಲೆ ತಡೆಯಾಜ್ಞೆ ಘೋಷಿಸಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ನೀವು ಕೊಡುವ ಬೆಲೆ ಇದೆನಾ ಎಂದು ಕೋರ್ಟ್‌ ಗರಂ ಆಗಿ ಪ್ರಶ್ನಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ವರ್ತನೆ ಮುಂದಯವರೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಸಾವರ್ಕರ್ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಲಕ್ನೋ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ನ್ಯಾಯಾಲಯ ತಡೆ ನೀಡಿದ ಸುಪ್ರೀಂ ಕೋರ್ಟ್‌, ಭವಿಷ್ಯದಲ್ಲಿ ಅವರು ಅಂತಹ ಯಾವುದೇ ಹೇಳಿಕೆಗಳನ್ನು ನೀಡಿದರೆ, ಅವರ ವಿರುದ್ಧ "ಸ್ವಯಂ ಪ್ರೇರಿತ ಮೊಕದ್ದಮೆ" ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದೆ

ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಪ್ರಕರಣ ಕೈಗೆತ್ತಿಕೊಂಡ ತಕ್ಷಣ, ನ್ಯಾಯಮೂರ್ತಿ ದತ್ತ ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು. ವೈಸ್‌ರಾಯ್‌ಗೆ ಬರೆದ ಪತ್ರಗಳಲ್ಲಿ "ನಿಮ್ಮ ನಿಷ್ಠಾವಂತ ಸೇವಕ" ಎಂಬ ಪದವನ್ನು ಬಳಸಿದ್ದಕ್ಕಾಗಿ ಮಹಾತ್ಮ ಗಾಂಧಿಯವರನ್ನು ಬ್ರಿಟಿಷರ ಸೇವಕ ಎಂದು ಕರೆಯಬಹುದೇ ಎಂದು ನ್ಯಾಯಮೂರ್ತಿ ದತ್ತ ಖಡಕ್‌ ಆಗಿ ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ: National Herald Case: ನ್ಯಾಶನಲ್‌ ಹೆರಾಲ್ಡ್‌ ಪ್ರಕರಣ; ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್‌

ರಾಹುಲ್‌ ಗಾಂಧಿ ವಿವಾದಾತ್ಮಕ ಹೇಳಿಕೆ ಏನು?

ಕಳೆದ ವರ್ಷ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಾ,ಸಾವರ್ಕರ್ ಅವರು ಬ್ರಿಟಿಷ್ ಆಡಳಿತಗಾರರಿಗೆ ಸಹಾಯ ಮಾಡಿದರು ಮತ್ತು ಭಯದಿಂದ ಅವರಿಗೆ ಕ್ಷಮಾದಾನ ಪತ್ರ ಬರೆದುಕೊಟ್ಟಿದ್ದರು. ಆ ಮೂಲಕ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರು ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಬಗೆದಿದ್ದರು' ಎಂದು ಹೇಳಿದರು. ಸಾವರ್ಕರ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಚಿಹ್ನೆ. ಎರಡು-ಮೂರು ವರ್ಷಗಳ ಕಾಲ ಅಂಡಮಾನ್ ಜೈಲಿನಲ್ಲಿದ್ದ ಸಾವರ್ಕರ್ ಅವರು ಕ್ಷಮಾದಾನ ಅರ್ಜಿಗಳನ್ನು ಬರೆಯಲು ಪ್ರಾರಂಭಿಸಿದ್ದರು. ಅಲ್ಲದೇ ಸಾವರ್ಕರ್ ಬ್ರಿಟಿಷರ ಸೇವಕ ಮತ್ತು ಅವರು ಬ್ರಿಟಿಷರಿಂದ ಪಿಂಚಣಿ ಪಡೆದಿದ್ದರು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ವಕೀಲ ನೃಪೇಂದ್ರ ಪಾಂಡೆ ರಾಹುಲ್‌ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಏಪ್ರಿಲ್ 4 ರಂದು ಅಲಹಾಬಾದ್ ಹೈಕೋರ್ಟ್ ಪ್ರಕರಣದ ಮೇಲೆ ತಡೆ ಹೇರಲು ನಿರಾಕರಿಸಿದ ನಂತರ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.