ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪೆಲೆಟ್ ಗನ್ ಬಳಕೆ ನಿಯಮ ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೂಚನೆ

ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಭದ್ರತಾ ಸಿಬ್ಬಂದಿ ಬಳಸುವ ಪೆಲೆಟ್ ಗನ್ ಬಳಕೆ ಮೇಲೆ ನಿಯಂತ್ರಣ ಹೇರಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. ಪೆಲೆಟ್ ಗನ್ ಬಳಕೆ ಬಗ್ಗೆ ಇರುವ ನಿಯಮಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿರುವ ನ್ಯಾಯಾಲಯ, ಇದರ ಬಳಕೆ ನಿಯಂತ್ರಣಕ್ಕೆ ನಿಯಮ ರೂಪಿಸಬೇಕು ಎಂದು ತಿಳಿಸಿದೆ.

ಸಂಗ್ರಹ ಚಿತ್ರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Paper leak) ವಿರೋಧಿಸಿ ಜುಲೈ 20ರಂದು ನಡೆದ ಪ್ರತಿಭಟನೆ ವೇಳೆ ಆಗಿರುವ ಹಿಂಸಾಚಾರಕ್ಕೆ ಸಂಬಂಧಿಸಿ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ (Supreme Court), ಜನಸಂದಣಿ ನಿಯಂತ್ರಣಕ್ಕಾಗಿ ಭದ್ರತಾ ಸಿಬ್ಬಂದಿ ಬಳಸುವ ಪೆಲೆಟ್ ಗನ್‌ಗಳ (Use of pellet guns) ಬಳಕೆಯ ಕುರಿತಾದ ನಿಯಮಾವಳಿಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ. ಪೆಲೆಟ್ ಗನ್ ಗಳಲ್ಲಿ ಬಳಸುವ ಲೋಹದ ಗುಂಡುಗಳ ಮೇಲೆ ಸಂಪೂರ್ಣ ನಿಷೇಧ ಹೇರುವ ಕುರಿತು ನಿಯಮ ರೂಪಿಸಬೇಕಿದೆ ಎಂದು ನ್ಯಾಯಾಲಯ ಗುರುವಾರ ಹೇಳಿದೆ.

ಜನದಟ್ಟಣೆ ನಿಯಂತ್ರಣಕ್ಕಾಗಿ ಪೆಲೆಟ್ ಗನ್‌ಗಳ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಲು ನಿರ್ಧರಿಸಿರುವ ಸುಪ್ರೀಂ ಕೋರ್ಟ್, ಇದಕ್ಕಾಗಿ ನಿಯಮಾವಳಿ ರೂಪಿಸಬೇಕಿದೆ ಎಂದು ತಿಳಿಸಿದೆ.

11 ವರ್ಷ ಅಮೆರಿಕದಲ್ಲಿದ್ದ ಮಹಿಳೆ ಭಾರತಕ್ಕೆ ಬಂದಾಗ ಎದುರಿಸಿದ ಸಂಕಷ್ಟಗಳೇನು? ವೈರಲ್‌ ಆದ ಪೋಸ್ಟ್‌ನಲ್ಲೇನಿದೆ?

ಜುಲೈ 20ರಂದು ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾದ ಕ್ಷಿಪ್ರ ಕಾರ್ಯ ಪಡೆ ಬಳಕೆ ಮಾಡಿರುವ ಮದ್ದುಗುಂಡುಗಳನ್ನೂ ಸಂರಕ್ಷಿಸಿಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಇದರ ದಾಳಿಯಿಂದ ಗಾಯಗೊಂಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡಬೇಕೆಂದು ಕೂಡ ಸೂಚಿಸಿದೆ.

ಪ್ರತಿಭಟನೆಯಂತಹ ಸಂದರ್ಭದಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಬಳಸುವ ಪಂಪ್ ಆಕ್ಷನ್ ರೈಫಲ್‌ಗಳು ಅಥವಾ ಪ್ರೊಜೆಕ್ಟೈಲ್ ಆಕ್ಷನ್ ಗನ್‌ಗಳಿಂದ ಹರಿಸಲಾಗುವ ಲೋಹದ ಮದ್ದು ಗುಂಡುಗಳನ್ನು ನಿಷೇಧಿಸಲು ಅಥವಾ ರದ್ದುಗೊಳಿಸಲು ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಪೆಲೆಟ್ ಗನ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು ನಿಯಂತ್ರಿಸುವತ್ತ ಗಮನಹರಿಸಲು ಸೂಚಿಸಿದರು.

ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರು, ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಯಂತ್ರಿಸುವ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಶೀಲಿಸಬೇಕಿದೆ ಎಂದು ಹೇಳಿದರು. ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ವೃಂದಾ ಗ್ರೋವರ್, ರಬ್ಬರ್ ಮತ್ತು ಪ್ಲಾಸ್ಟಿಕ್ ಗುಂಡುಗಳು ಲಭ್ಯವಿದ್ದರೂ ಜುಲೈ 20 ರ ಪ್ರತಿಭಟನೆಯ ಸಮಯದಲ್ಲಿ ಲೋಹದ ಗುಂಡುಗಳಿಂದ ದಾಳಿ ನಡೆಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬಾಗ್ಚಿ, ಗುಂಡುಗಳ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಗುಂಡುಗಳ ಬಳಕೆಗೆ ಸಂಬಂಧಿಸಿ ಇರುವ ನಿಯಮಗಳನ್ನು ನಾವು ಪರಿಶೀಲಿಸಬೇಕಿದೆ ಎಂದು ಅರ್ಜಿದಾರರಿಗೆ ತಿಳಿಸಿದರು.

ಅರ್ಜಿಯಲ್ಲಿ ಏನಿದೆ?

ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್, ಪ್ರಶಾಂತ್ ಕುಮಾರ್ ಮತ್ತು ಶೇಖ್ ಇರ್ಷಾದ್ ಮನ್ಸೂರಿ ಅವರು ವಕೀಲೆ ವೃಂದಾ ಗ್ರೋವರ್ ಮೂಲಕ ಈ ಅರ್ಜಿ ಸಲ್ಲಿಸಿದ್ದು, ಜುಲೈ 20 ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ತಮಗೆ ಪೆಲೆಟ್ ಗುಂಡುಗಳಿಂದ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ.

ಕ್ಷಿಪ್ರ ಕಾರ್ಯಪಡೆಯು ಎಚ್ಚರಿಕೆ ನೀಡದೆ ಅಶ್ರುವಾಯು ಶೆಲ್‌ಗಳು ಮತ್ತು ಲಾಠಿ ಚಾರ್ಜ್‌ಗಳನ್ನು ನಡೆಸಿದ್ದಾರೆ. ಇದಕ್ಕೂ ಮೊದಲು ಯಾವುದೇ ನೀರಿನ ಫಿರಂಗಿ ಅಥವಾ ಸಾರ್ವಜನಿಕ ಘೋಷಣೆಗಳನ್ನು ಮಾಡಲಾಗಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇರಾನ್ ಮೇಲೆ ಜೋರ್ಡಾನ್ ಪ್ರತೀಕಾರದ ದಾಳಿ ಆರಂಭಿಸಿದ ಅಮೆರಿಕ; ಹೊರ್ಮುಜ್‌ನಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಳ

ಪ್ರತಿಭಟನಾಕಾರರು ಶರಣಾಗತಿಯಾಗಿ ಕೈ ಎತ್ತಿದರೂ ಅವರ ಮೇಲೆ ಲೋಹದ ಪೆಲೆಟ್ ಗನ್‌ಗಳಿಂದ ದಾಳಿ ನಡೆಸಲಾಗಿದೆ. ಇದರಲ್ಲಿ ಇಬ್ಬರು ಅರ್ಜಿದಾರರು ಗಾಯಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author