ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ತಮಿಳುನಾಡು ಸಿಎಂ ವಿಜಯ್ ಇಂದು ಕೊಲ್ಲೂರು ಭೇಟಿ, ದೇವಾಲಯ ಸುತ್ತಮುತ್ತ ಬಿಗಿ ಭದ್ರತೆ: ಭಕ್ತರ ದರ್ಶನ ಸಮಯದಲ್ಲಿ ಬದಲಾವಣೆ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಹಾಗೂ ಅವರು ಸಾಗುವ ದಾರಿಯುದ್ದಕ್ಕೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅವರು ಭೇಟಿ ನೀಡುವ ಸಮಯದಲ್ಲಿ ದೇವಾಲಯದಲ್ಲಿ ಸಾರ್ವಜನಿಕರಿಗೆ ದರ್ಶನವನ್ನು ನಿರ್ಬಂಧಿಸಲಾಗಿದೆ.

ಸಂಗ್ರಹ ಚಿತ್ರ

ಕೊಲ್ಲೂರು: ತಮಿಳುನಾಡು ಮುಖ್ಯಮಂತ್ರಿ (Tamil Nadu Chief Minister) ಜೋಸೆಫ್ ವಿಜಯ್ (Joseph Vijay) ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Devi) ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ. ದೇವಸ್ಥಾನ ಸುತ್ತಮುತ್ತ ಹಾಗೂ ಅವರು ಸಾಗುವ ದಾರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿಎಂ ವಿಜಯ್ ಅವರು ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಲಿದ್ದಾರೆ. ಭದ್ರತೆಯ ಕಾರಣದಿಂದ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಹೀಗಾಗಿ ಭಕ್ತರು ಪೊಲೀಸರೊಂದಿಗೆ ಸಹಕರಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಪೆಟ್ರೋಲ್ ಪಂಪ್‌ಗಳಿಂದ ದೊಡ್ಡ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಗೆ ನಿಷೇಧ

ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಅವರು ಸಂಚರಿಸಲಿರುವ ದಾರಿಯುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಕೇವಲ ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಕೊಲ್ಲೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ. ಈ ಸಂದರ್ಭದಲ್ಲಿ ಅವರು ಯಾವುದೇ ಸಾರ್ವಜನಿಕ ಭೇಟಿ ಅಥವಾ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ.

ದೇವಾಲಯದಲ್ಲಿ ಶುಕ್ರವಾರ ವಿವಿಐಪಿ ಭೇಟಿ ಮತ್ತು ವಿಶೇಷ ಭದ್ರತಾ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಸಿಎಂ ಭೇಟಿಯ ಭದ್ರತಾ ತಪಾಸಣೆಗಳ ಕಾರಣದಿಂದಾಗಿ ಯಾವುದೇ ರೀತಿಯಲ್ಲಿ ಪ್ರವೇಶ ನಿಷೇಧಿಸಿಲ್ಲ. ಆದರೆ ವಿಳಂಬವಾಗುವ ಸಾಧ್ಯತೆ ಇದೆ. ಇದು ಭಕ್ತರಿಗೆ ತೀವ್ರ ಅನಾನುಕೂಲವನ್ನು ಉಂಟು ಮಾಡಬಹುದು.

ಕೋಟ್ಯಂತರ ರುಪಾಯಿ ನಗದು, ಮದ್ಯದ ಬಾಟಲಿ, ಕಾಂಡೋ, ಬೆಡ್‌ರೂಮ್: ಇದು ಯಾವುದೇ ಲಾಡ್ಜ್‌ ಅಲ್ಲ; ಪಶ್ಚಿಮ ಬಂಗಾಳದ ಶಾಲೆಯಲ್ಲಿ ಕಂಡುಬಂದ ದೃಶ್ಯ!

ದೇವಾಲಯದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳ ವಾಹನ ಸಾಗುವ ದಾರಿಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಗುಂಪು ಸೇರುವುದು ಅಥವಾ ಜನಸಂದಣಿ ಉಂಟು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author