ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಧಿಕಾರಕ್ಕೆ ಬರುತ್ತಿದ್ದಂತೆ ಕರ್ನಾಟಕ ವಿರುದ್ಧ ಸಮರ ಸಾರಿದ ದಳಪತಿ ವಿಜಯ್‌; ಮೇಕೆದಾಟು ಯೋಜನೆ ಸ್ಥಗಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ

ಕರ್ನಾಟಕದ ಮೇಕೆದಾಟು ಯೋಜನೆಯನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಿದ್ಧಪಡಿಸಿರುವ ಡಿಪಿಆರ್ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್‌ನ 2018ರ ಅಂತರ್ ರಾಜ್ಯ ಜಲ ವಿವಾದದ ತೀರ್ಪಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಸಂಗ್ರಹ ಚಿತ್ರ

ಚೆನ್ನೈ: ಕರ್ನಾಟಕದ ಮೇಕೆದಾಟು (Karnataka’s Mekedatu Project) ಅಣೆಕಟ್ಟು ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (tamil nadu CM Vijay) ಅವರು ಇದಕ್ಕೆ ಸಂಬಂಧಿಸಿ ಸಲ್ಲಿಸಿರುವ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಿರಸ್ಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Narendra modi) ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಲ್ಲಿಸಿರುವ ಡಿಪಿಆರ್ (Detailed Project Report) ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್‌ನ 2018ರ ಅಂತರ್ ರಾಜ್ಯ ಜಲ ವಿವಾದದ ತೀರ್ಪಿಗೆ ವಿರುದ್ಧವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗಯು ತಮಿಳುನಾಡಿನ ಆಕ್ಷೇಪಗಳನ್ನು ಪರಿಗಣಿಸದೆ ಕೇವಲ ಕರ್ನಾಟಕದ ಪ್ರಸ್ತಾವನೆಯನ್ನು ಮಾತ್ರ ಪರಿಗಣಿಸಿದೆ. ಇದು ಆಶ್ಚರ್ಯಕರ ಸಂಗತಿ ಎಂದು ಅವರು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಶ್ರೀರಾಮ್ ಜನರಲ್ ಇನ್ಷುರನ್ಸ್ ಮತ್ತು ಪಿರಮಲ್ ಫೈನಾನ್ಸ್ ತಂತ್ರಾತ್ಮಕ ಸಹಭಾಗಿತ್ವಕ್ಕೆ ಕೈಜೋಡಿಕೆ

ಕರ್ನಾಟಕ ಸಿದ್ಧಪಡಿಸಿರುವ ಡಿಪಿಆರ್ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಮತ್ತು ಸುಪ್ರೀಂ ಕೋರ್ಟ್‌ 2018ರ ಫೆಬ್ರವರಿ 16ರಂದು ನೀಡಿರುವ ಅಂತರ್ ರಾಜ್ಯ ಜಲ ವಿವಾದದ ತೀರ್ಪಿಗೆ ವಿರುದ್ಧವಾಗಿದೆ. ಆದ್ದರಿನ ಈ ವರದಿಯನ್ನು ತಿರಸ್ಕರಿಸಬೇಕು. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅವರು ಪ್ರಧಾನಿ ಬಳಿ ಒತ್ತಾಯಿಸಿದ್ದಾರೆ.

ಕಾವೇರಿ ಜಲವನ್ನು ಅವಲಂಬಿಸಿರುವ ರಾಜ್ಯಗಳ ಒಪ್ಪಿಗೆಯಿಲ್ಲದೆ ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು. ಅಂತಹ ಕ್ರಮಗಳನ್ನು ಕೈಗೆತ್ತಿಕೊಳ್ಳುವಾಗ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಬಾರದು ಎಂದು ಅವರು ತಿಳಿಸಿದ್ದಾರೆ.

ಮೇಕೆದಾಟು ಜಲಾಶಯಕ್ಕೆ ಭೂಮಿ ಪೂಜೆ ಘೋಷಣೆ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳು ತಮಿಳುನಾಡಿನ ರೈತರಲ್ಲಿ ಕಳವಳ ಉಂಟು ಮಾಡಿದೆ. ಸುಮಾರು ಮೂರು ದಶಕಗಳ ಕಾಲ ನಡೆದ ದೀರ್ಘ ಕಾನೂನು ಹೋರಾಟದ ಬಳಿಕ ಕಾವೇರಿ ನೀರಿನ ವಿವಾದ ಪರಿಹಾರವಾಗಿತ್ತು ಎಂದು ಹೇಳಿರುವ ಅವರು ಪ್ರಸ್ತುತ ಜಾರಿಯಲ್ಲಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಸಿಎಂ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಮೇಕೆದಾಟುವ ಯೋಜನೆಯನ್ನು ನಾವು ಕೂಡ ವಿರೋಧಿಸುತ್ತೇವೆ. ವಿಜಯ್ ಅವರೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರು ಪ್ರಧಾನಿಯನ್ನು ಭೇಟಿಯಾಗಲಿದ್ದು, ಅವರ ಈ ಭೇಟಿ ಯಶಸ್ವಿಯಾಗಲಿ ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದೆ.

Karnataka CM Row: ಕರ್ನಾಟಕ ಸಿಎಂ ಬದಲಾವಣೆ ಚರ್ಚೆ; ದೆಹಲಿ ಸಭೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಏನು?

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಂಟಾಗಿರುವ ವಿವಾದದಲ್ಲಿ ಮೇಕೆದಾಟು ಯೋಜನೆಯು ಕೂಡ ಒಂದಾಗಿದೆ. ಇದನ್ನು ನಿರಂತರವಾಗಿ ತಮಿಳುನಾಡು ವಿರೋಧಿಸುತ್ತಿದ್ದು, ಇದು ಕೆಳಮಟ್ಟದ ನೀರಿನ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ವಾದಿಸಿದೆ. ಇದನ್ನು ಪ್ರಶ್ನಿಸಿ 2018 ಮತ್ತು 2022ರಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿಗಳನ್ನು ಕೂಡ ಸಲ್ಲಿಸಿದೆ.

ವಿದ್ಯಾ ಇರ್ವತ್ತೂರು

View all posts by this author