ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾಗ ಘೋರ ದುರಂತ: ವಿದ್ಯುತ್ ಸ್ಪರ್ಶಿಸಿ ಶಿಕ್ಷಕ ಸಾವು; ಮೂವರು ವಿದ್ಯಾರ್ಥಿಗಳಿಗೆ ಗಾಯ
Teacher electrocuted to death: ಖಾಸಗಿ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆ ವೇಳೆ ವಿದ್ಯುತ್ ತಂತಿ ತಗುಲಿ ಶಿಕ್ಷಕರೊಬ್ಬರು ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಧ್ವಜಾರೋಹಣ ಸ್ಥಂಭಕ್ಕೆ ಕಬ್ಬಿಣದ ಪೈಪ್ ಅಳವಡಿಸಲು ಪ್ರಯತ್ನಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಚಾಟ್‌ಜಿಪಿಟಿ ರಚಿತ ಚಿತ್ರ -
ಭುವನೇಶ್ವರ, ಆ. 15: ಸ್ವಾತಂತ್ರ್ಯ ದಿನಾಚರಣೆ ಸಂಭ್ರಾಮಚರಣೆ ವೇಳೆ ದುರಂತವೊಂದು ಸಂಭವಿಸಿದೆ (Tragedy during the Independence Day). ಖಾಸಗಿ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆ ವೇಳೆ ವಿದ್ಯುತ್ ತಂತಿ ತಗುಲಿ ಶಿಕ್ಷಕರೊಬ್ಬರು ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಒಡಿಶಾದ (Odisha) ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 14ರ ಸಂಜೆ ಸಂಭವಿಸಿದೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಿಯಬ್ರತ ಬೆಹೆರಾ ಮೃತರು.
ಧ್ವಜಾರೋಹಣ ಸ್ಥಂಭಕ್ಕೆ ಕಬ್ಬಿಣದ ಪೈಪ್ ಅಳವಡಿಸಲು ಪ್ರಯತ್ನಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೈಪ್ ಮೇಲಿನ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಆಘಾತ ಉಂಟಾಯಿತು ಎಂದು ಹೇಳಲಾಗಿದೆ. ಬೆಹೆರಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ವಿದ್ಯುತ್ ಆಘಾತದಿಂದ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡರು. ಅವರನ್ನು ಕೂಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ʼʼಬ್ರಿಟಿಷರಿಂದ ಮುಕ್ತಿಯಷ್ಟೇ ಸ್ವಾತಂತ್ರ್ಯವಲ್ಲʼʼ: ದೇಶದ ಸದ್ಯದ ಸ್ಥಿತಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕಳವಳ
ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯಂದು ಕರಾಚಿಯಲ್ಲಿ ದುರ್ಘಟನೆ
ಪಾಕಿಸ್ತಾನದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಶುಕ್ರವಾರ ಕರಾಚಿಯಲ್ಲಿ ವೈಮಾನಿಕ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟು, 94 ಜನರು ಗಾಯಗೊಂಡರು. ಪಾಕಿಸ್ತಾನ ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧತೆ ನಡೆಸುತ್ತಿರುವಾಗ ಈ ಘಟನೆ ನಡೆದವು. ಪಾಕ್ ಧ್ವಜವನ್ನು ಕೈಯಲ್ಲಿ ಹಿಡಿದ ಜನರು, ಪಟಾಕಿ ಸಿಡಿಸುತ್ತಾ ಆಚರಿಸಿದ್ದಾರೆ. ಕೆಲವರು ಬೈಕ್‌ಗಳನ್ನು ಚಲಾಯಿಸುತ್ತಾ ಬೀದಿಗಳಲ್ಲಿ ಸಂಭ್ರಮಿಸಿದ್ದಾರೆ. ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಇದರಿಂದ ಇಬ್ಬರು ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡರು.