ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚೆನ್ನೈಯಿಂದ ಅಬುಧಾಬಿಗೆ ಹೊರಟಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ದುರಂತ

Chennai-Abu Dhabi flight: ಚೆನ್ನೈಯಿಂದ ಅಬುಧಾಬಿಗೆ ಹೊರಟಿದ್ದ ಸುಮಾರು 280 ಪ್ರಯಾಣಿಕರಿದ್ದ ಎತಿಹಾದ್ ಏರ್‌ವೇಸ್ ವಿಮಾನದಲ್ಲಿ ಮಂಗಳವಾರ (ಮೇ 12) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದ ಟೇಕ್-ಆಫ್ ಆಗಲು ಸಾಧ್ಯವಾಗಲಿಲ್ಲ. ವಿಮಾನವು ಟೇಕ್ ಆಫ್ ಆಗಲು ಸಿದ್ಧತೆಯಲ್ಲಿದ್ದಾಗ ಎಡ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತಂದರು. ಅದೃಷ್ಟವಶಾತ್‌ ಯಾರಿಗೂ ಗಾಯವಾಗಿಲ್ಲ.

ಚೆನ್ನೈನಿಂದ ಅಬುಧಾಬಿಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಅಬುಧಾಬಿಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ -

Priyanka P
Priyanka P May 12, 2026 4:47 PM

ಚೆನ್ನೈ, ಮೇ 12: ಸುಮಾರು 280 ಪ್ರಯಾಣಿಕರನ್ನು ಅಬುಧಾಬಿಗೆ (Abu Dhabi) ಹೊತ್ತೊಯ್ಯುತ್ತಿದ್ದ ಎತಿಹಾದ್ ಏರ್‌ವೇಸ್ ವಿಮಾನವು ಹೈಡ್ರಾಲಿಕ್ ಸೋರಿಕೆಯಿಂದಾಗಿ ಟೇಕ್‌ಆಫ್ ಆಗಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಎಂಜಿನಿಯರಿಂಗ್ ತಂಡವು ಏರ್‌ಕ್ರಾಫ್ಟ್ ಆನ್ ಗ್ರೌಂಡ್ (ವಿಮಾನವು ನಿಲ್ದಾಣದಲ್ಲೇ ಇದೆ) ಎಂದು ಘೋಷಿಸಿತು. ಏರ್‌ಬಸ್ A320 (A6-EIT) ನಿರ್ವಹಿಸುತ್ತಿದ್ದ ಎತಿಹಾದ್‌ನ ಚೆನ್ನೈ-ಅಬುಧಾಬಿ (Chennai-Abu Dhabi) ವಿಮಾನವನ್ನು ತಾಂತ್ರಿಕ ಸಮಸ್ಯೆ ಪತ್ತೆಯಾದ ನಂತರ ಟೇಕ್ ಆಫ್ ಆಗುವ ಮೊದಲು ರದ್ದುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಾದ ನಂತರ, ಪ್ರಯಾಣಿಕರನ್ನು ಕೆಳಗಿಳಿಸಿ ವಿಮಾನವನ್ನು ಮತ್ತೆ ನಿಲ್ದಾಣಕ್ಕೆ ತಂದು ನಿಲ್ಲಿಸಲಾಯಿತು. ಈ ಘಟನೆಯಲ್ಲಿ ವಿಮಾನದ ಮಾರ್ಗ ಬದಲಾವಣೆ ಅಥವಾ ಬೆಂಕಿ ಅವಘಡದಂತಹ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನವು ಟೇಕ್ ಆಫ್ ಆಗಲು ಸಿದ್ಧತೆಯಲ್ಲಿದ್ದಾಗ ಎಡ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತಂದರು. ನಂತರ ವಿಮಾನ ಹಾರಾಟವನ್ನು ರದ್ದುಗೊಳಿಸಲಾಯಿತು ಎಂದು ಅವರು ಹೇಳಿದರು.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಾಕಿಯಾದ ಎತಿಹಾದ್ ಏರ್‌ವೇಸ್:



ವಿಮಾನ ಲ್ಯಾಂಡಿಂಗ್ ವೇಳೆ ಟೈರ್‌ನಲ್ಲಿ ಹೊತ್ತಿಕೊಂಡ ಬೆಂಕಿ

ಟರ್ಕಿಶ್ ಏರ್‌ಲೈನ್ಸ್‌ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಅದರ ಟೈರ್‌ಗೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೇ 11ರ ಬೆಳಗ್ಗೆ ಈ ಘಟನೆ ನಡೆದಿದ್ದು, ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ಸೇವೆ ಮೂರು ವರ್ಷಕ್ಕೆ ಸ್ಥಗಿತ?

ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ತ್ವರಿತವಾಗಿ ನಿಯಂತ್ರಣಕ್ಕೆ ತರಲಾಯಿತು. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ದೃಢಪಡಿಸಿದರು. ಇಸ್ತಾನ್‌ಬುಲ್‌ನಿಂದ ಕಠ್ಮಂಡುವಿಗೆ ಆಗಮಿಸುತ್ತಿದ್ದ ಟರ್ಕಿಶ್ ಏರ್ಲೈನ್ಸ್ ಟಿಕೆ 726 ವಿಮಾನದ ಟೈರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಲ್ಯಾಂಡಿಂಗ್ ಸಮಯದಲ್ಲಿ ಟೈರ್‌ಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾದವು.

ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌

ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು 'ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ.

ವಿಮಾನ ನಿಲ್ದಾಣದೊಳಗೆ 'ಕ್ರಾಸ್ ಸರ್ವಿಸ್ ರಸ್ತೆ'ಗಳಿರುತ್ತವೆ. ಇಲ್ಲಿ ವಿಮಾನಗಳು ಮತ್ತು ಸಿಬ್ಬಂದಿಯ ವಾಹನಗಳು ಒಟ್ಟೊಟ್ಟಿಗೆ ಓಡಾಡುತ್ತಿರುತ್ತವೆ. ಹೀಗಾಗಿ ಇಲ್ಲಿ ಅಪಘಾತ ಆಗುವ ಸಾಧ್ಯತೆ ಇರುತ್ತದೆ. ಹಿಂದೆ, ಇಲ್ಲಿ ವಾಹನಗಳನ್ನು ನಿಯಂತ್ರಿಸುವ ಲೈಟ್‌ಗಳನ್ನು ಸಿಬ್ಬಂದಿಯೇ ಖುದ್ದಾಗಿ ಆನ್/ಆಫ್ ಮಾಡುತ್ತಿದ್ದರು. ಇದರಲ್ಲಿ ಕೆಲವೊಮ್ಮೆ ತಪ್ಪುಗಳಾಗಿ, ವಿಮಾನಗಳ ಹಾರಾಟ ತಡವಾಗುವ ಘಟನೆಗಳೂ ನಡೆಯುತ್ತಿದ್ದವು. ಇದನ್ನು ತಪ್ಪಿಸಲು ಈಗ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.