ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tejashwi Yadav: ಬಿಹಾರ ಮತದಾರರ ಪಟ್ಟಿಯಿಂದ ನನ್ನ ಹೆಸರೇ ನಾಪತ್ತೆ; ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪ

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸುತ್ತಿರುವಾಗಲೇ ಬಿಹಾರದಲ್ಲಿ ಶುಕ್ರವಾರ ಪ್ರಕಟವಾದ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ಆರ್‌ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಶನಿವಾರ ಹೇಳಿದ್ದಾರೆ.

ಪಾಟ್ನಾ: ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸುತ್ತಿರುವಾಗಲೇ ಬಿಹಾರದಲ್ಲಿ ಶುಕ್ರವಾರ ಪ್ರಕಟವಾದ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ಆರ್‌ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಶನಿವಾರ ಹೇಳಿದ್ದಾರೆ. ಆದರೆ ಚುನಾವಣಾ ಆಯೋಗ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ಯಾದವ್ ಅವರ ಮತದಾರರ ಪಟ್ಟಿಯಿಂದ ವಿವರಗಳನ್ನು ಹಂಚಿಕೊಳ್ಳುವ ಮೂಲಕ ಆರೋಪವನ್ನು ತಕ್ಷಣವೇ ನಿರಾಕರಿಸಿದೆ.

ಪಾಟ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಯಾದವ್ ತಮ್ಮ ಚುನಾವಣಾ ಫೋಟೋ ಗುರುತಿನ ಚೀಟಿ (EPIC) ಸಂಖ್ಯೆಯನ್ನು ಪ್ರದರ್ಶಿಸಿ ಅದನ್ನು ಚುನಾವಣಾ ಸಂಸ್ಥೆಯ ಅಧಿಕೃತ ಮೊಬೈಲ್ ಅಪ್ಲಿಕೇಶನ್‌ನಲ್ಲಿ ನಮೂದಿಸಿದರು. ಆದರೆ ಯಾವುದೇ ದಾಖಲೆಗಳು ಕಂಡುಬರುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ನನ್ನ ಹೆಸರೂ ಮತದಾರರ ಪಟ್ಟಿಯಲ್ಲಿಲ್ಲ. ನಾನು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸುತ್ತೇನೆ?" ಎಂದು ಆರ್‌ಜೆಡಿ ನಾಯಕ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಯಾದವ್ ಅವರ ಹೇಳಿಕೆಯ ನಂತರ, ಚುನಾವಣಾ ಆಯೋಗವು ಅವರ ವಿವರಗಳನ್ನು ಒಳಗೊಂಡ ಮತದಾರರ ಪಟ್ಟಿಯ ಪ್ರತಿಯನ್ನು ಬಿಡುಗಡೆ ಮಾಡಿತು, ಇದು ಅವರು ಪಾಟ್ನಾದ ಪಶುವೈದ್ಯಕೀಯ ಕಾಲೇಜಿನ ಮತಗಟ್ಟೆಯಲ್ಲಿ ಪಟ್ಟಿ ಮಾಡಲ್ಪಟ್ಟಿದೆ ಎಂದು ವಿವರಗಳನ್ನು ಹಂಚಿಕೊಂಡಿದೆ. ತೇಜಸ್ವಿ ಯಾದವ್ ಅವರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂದು ದುರುದ್ದೇಶಪೂರಿತ ಹೇಳಿಕೆ ನೀಡಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಸರಣಿ ಸಂಖ್ಯೆ 416 ರಲ್ಲಿ ಪಟ್ಟಿಮಾಡಲಾಗಿದೆ. ಆದ್ದರಿಂದ, ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿಲ್ಲ ಎಂದು ಹೇಳುವುದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ. ಆದಾಗ್ಯೂ, ಚುನಾವಣಾ ಆಯೋಗ ಒದಗಿಸಿದ EPIC ಸಂಖ್ಯೆಯು ಯಾದವ್ ಹಂಚಿಕೊಂಡಿರುವ EPIC ಸಂಖ್ಯೆಗಿಂತ ಭಿನ್ನವಾಗಿದೆ.

ಈ ಸುದ್ದಿಯನ್ನೂ ಓದಿ: Rahul Gandhi: "ಸಾಕ್ಷಿ ಎದುರಿಟ್ಟು ಮಾತನಾಡಿ"; ಕಳ್ಳ ಮತ ಆರೋಪಕ್ಕೆ ರಾಹುಲ್‌ ಗಾಂಧಿಗೆ ತಿರುಗೇಟು ಕೊಟ್ಟ ಎಲೆಕ್ಷನ್‌ ಕಮಿಷನ್‌

ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಒಂದು ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವಿರೋಧ ಪಕ್ಷಗಳು ಚುನಾವಣಾ ಆಯೋಗದ ಮೇಲೆ ದೂರುತ್ತಿವೆ. ಚುನಾವಣಾ ಆಯೋಗವು ಶುಕ್ರವಾರ ಪರಿಷ್ಕೃತ ಕರಡು ಪಟ್ಟಿಯನ್ನು ಬಿಡುಗಡೆ ಮಾಡಿತು, ಅಕ್ರಮ ಮತದಾರರು ಎಂದು ಗುರುತಿಸಲಾದ 65 ಲಕ್ಷ ಹೆಸರುಗಳನ್ನು ತೆಗೆದು ಹಾಕಿದೆ ಎಂದು ಆಯೋಗ ಹೇಳಿದೆ.