ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನತೆ: ಸೌದಿ ಕ್ರೌನ್ ಪ್ರಿನ್ಸ್, ಬಹ್ರೇನ್ ಕಿಂಗ್ ಜೊತೆ ಪ್ರಧಾನಿ ಮೋದಿ ಮಾತುಕತೆ
ಯುಎಸ್ ಮತ್ತು ಇಸ್ರೇಲ್ ಸೇನಾ ಪಡೆಯು ಇರಾನ್ ಮೇಲೆ ನಡೆಸಿರುವ ದಾಳಿಗೆ ಪ್ರತಿಯಾಗಿ ಸೌದಿ ಅರೇಬಿಯಾದ ಮೇಲೆ ಇರಾನ್ ದಾಳಿ ನಡೆಸಿದೆ. ಇದರಿಂದ ಗಲ್ಫ್ ರಾಷ್ಟ್ರಗಳಲ್ಲಿನ ಉದ್ವಿಗ್ನತೆಯ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ನಡುವೆ ನರೇಂದ್ರ ಮೋದಿ ಅವರು ಸೌದಿ ಕ್ರೌನ್ ಪ್ರಿನ್ಸ್, ಬಹ್ರೇನ್ ರಾಜರೊಂದಿಗೆ ಮಾತುಕತೆ ನಡೆಸಿ, ಇರಾನ್ ದಾಳಿಗೆ ಖಂಡನೆ ವ್ಯಕ್ತಪಡಿಸಿದರು.
ಸಂಗ್ರಹ ಚಿತ್ರ -
ನವದೆಹಲಿ: ಇಸ್ರೇಲ್ ಮತ್ತು ಯುಎಸ್ ಮಿಲಿಟರಿ ನೆಲೆಗಳನ್ನು (Israel and US military bases) ಗುರಿಯಾಗಿಸಿಕೊಂಡು ಯುಎಇ (UAE), ಬಹ್ರೇನ್ (bahrain) ಮತ್ತು ಸೌದಿ ಅರೇಬಿಯಾ (saudi arebia) ಸೇರಿದಂತೆ ಹಲವಾರು ಗಲ್ಫ್ ಪ್ರದೇಶಗಳ ಮೇಲೆ ಇರಾನ್ ಪ್ರತೀಕಾರದ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಕ್ರೌನ್ ಪ್ರಿನ್ಸ್ ಮತ್ತು ಬಹ್ರೇನ್ ರಾಜರೊಂದಿಗೆ ಮಾತುಕತೆ ನಡೆಸಿದರು. ಸೌದಿ ಅರೇಬಿಯಾದ ಮೇಲೆ ಇತ್ತೀಚಿನ ಇರಾನ್ ದಾಳಿಯನ್ನು ಈ ಸಂದರ್ಭದಲ್ಲಿ ಅವರು ಖಂಡಿಸಿದರು.
ಈ ಕುರಿತು ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಪರಿಸ್ಥಿತಿ ಬಗ್ಗೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೇ ಬಹ್ರೇನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಕರೆ ಮಾಡಿ ಮಾತನಾಡಿರುವುದಾಗಿ ಹೇಳಿದರು.
ಸೌದಿ ರಾಜಕುಮಾರನೊಂದಿಗಿನ ದೂರವಾಣಿ ಮೂಲಕ ಸಂಭಾಷಣೆ ನಡೆಸಿರುವ ಪ್ರಧಾನಿ ಮೋದಿ, ಸೌದಿ ಅರೇಬಿಯಾದ ಮೇಲಿನ ಇತ್ತೀಚಿನ ದಾಳಿಗಳನ್ನು ಭಾರತ ಖಂಡಿಸುತ್ತದೆ. ಇದು ಅದರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.
ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಪುನಃಸ್ಥಾಪನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಾವು ಒಪ್ಪಿಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ಭಾರತೀಯ ಸಮುದಾಯದ ಯೋಗಕ್ಷೇಮವನ್ನು ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದ ಹೇಳಿರುವುದಾಗಿ ಮೋದಿ ತಿಳಿಸಿದ್ದಾರೆ.
Discussed the evolving situation in West Asia with Crown Prince and PM of Saudi Arabia, HRH Prince Mohammed bin Salman. India condemns the recent attacks on Saudi Arabia in violation of its sovereignty and territorial integrity. We agreed that earliest restoration of regional…
— Narendra Modi (@narendramodi) March 2, 2026
ಅಲ್ ಖಲೀಫಾ ಅವರೊಂದಿಗಿನ ಸಂಭಾಷಣೆಯಲ್ಲಿ, ಈ ಕಷ್ಟದ ಸಮಯದಲ್ಲಿ ಭಾರತವು ಬಹ್ರೇನ್ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. ಭಾರತವು ಬಹ್ರೇನ್ ಮೇಲಿನ ದಾಳಿಗಳನ್ನು ಖಂಡಿಸುತ್ತದೆ. ಬಹ್ರೇನ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ದೃಢ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಿರುವುದಾಗಿ ತಿಳಿಸಿದ್ದಾರೆ.
Had a productive telephone conversation with the King of Bahrain, His Majesty King Hamad Bin Isa Al Khalifa. India condemns the attacks on Bahrain and stands in solidarity with its people in this difficult hour. I thank him for the steadfast support extended to the Indian…
— Narendra Modi (@narendramodi) March 2, 2026
ಪ್ರಧಾನಿ ಮೋದಿ ಅವರು ಭಾನುವಾರ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಮತ್ತು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ.
"ಇದು ಅಂತ್ಯವಿಲ್ಲದ ಯುದ್ಧವಲ್ಲ"; ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಸ್ಪಷ್ಟನೆ
ಯುಎಸ್ ಮತ್ತು ಇಸ್ರೇಲ್ ಸೇನಾ ಪಡೆಯು ಶನಿವಾರ ಇರಾನ್ ಮೇಲೆ ದಾಳಿ ನಡೆಸಿ ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇಮಿ ಅವರನ್ನು ಹತ್ಯೆ ಮಾಡಿದ ಬಳಿಕ ಇರಾನ್ ಅದಕ್ಕೆ ಪ್ರತಿಯಾಗಿ ಯುಎಇ, ಬಹ್ರೇನ್, ಕುವೈತ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಗಲ್ಫ್ ದೇಶಗಳ ಮೇಲೆ ದಾಳಿ ನಡೆಸುತ್ತಿದೆ.