ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಆಸ್ಟ್ರೇಲಿಯಾದಲ್ಲಿ ಭಯೋತ್ಪಾದಕ ದಾಳಿ: ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಮಹಾನಗರಗಳಲ್ಲಿ ಹೈ ಅಲರ್ಟ್‌

ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಹನುಕ್ಕಾ ಕಾರ್ಯಕ್ರಮದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಭಾರತದ ಮಹಾನಗರಗಳಲ್ಲೂ ಎಚ್ಚರಿಕೆ ನೀಡಲಾಗಿದೆ. ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ಎಲ್ಲ ಪ್ರಮುಖ ನಗರಗಳಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.

ಭಯೋತ್ಪಾದಕ ದಾಳಿ ಎಚ್ಚರಿಕೆ

(ಸಂಗ್ರಹ ಚಿತ್ರ) -

ನವದೆಹಲಿ: ಯಹೂದಿ ಹನುಕ್ಕಾ ( Jewish festival Hanukkah) ಸಮಯದಲ್ಲಿ ಆಸ್ಟ್ರೇಲಿಯಾದಲ್ಲಿ (Australia) ಭಯೋತ್ಪಾದಕ ದಾಳಿ (Terror attack) ನಡೆದಿರುವ ಹಿನ್ನೆಲೆಯಲ್ಲಿ ಇದೀಗ ದೆಹಲಿ (Delhi), ಮುಂಬೈ (Mumbai), ಬೆಂಗಳೂರು (Bengaluru) ಸೇರಿದಂತೆ ಭಾರತದ ಮಹಾನಗರಗಳಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ. ಆಸ್ಟ್ರೇಲಿಯಾದ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ (Bondi Beach) ಭಾನುವಾರ ಸಂಜೆ ನಡೆದ ಯಹೂದಿ ಹನುಕ್ಕಾ ಕಾರ್ಯಕ್ರಮದಲ್ಲಿ ಬಂದೂಕುಧಾರಿಗಳಿಬ್ಬರು ದಾಳಿ ನಡೆಸಿ ಹತ್ತು ಮಂದಿಯನ್ನು ಕೊಂದು ಹಾಕಿದ್ದಾರೆ. ಇವರಲ್ಲಿ ಮಕ್ಕಳು, ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ. ಈ ಘಟನೆಯಲ್ಲಿ 190ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಯಹೂದಿ ಹಬ್ಬದ ಹಿನ್ನೆಲೆಯಲ್ಲಿ ಇದೀಗ ದೆಹಲಿ, ಬೆಂಗಳೂರು ಮತ್ತು ಮುಂಬೈ ಸೇರಿದಂತೆ ಮಹಾನಗರಗಳಲ್ಲಿ ಭಯೋತ್ಪಾದಕ ದಾಳಿಯ ಬಗ್ಗೆ ಉನ್ನತ ಮಟ್ಟದ ಎಚ್ಚರಿಕೆಯನ್ನು ನೀಡಲಾಗಿದೆ.

ಮಕ್ಕಳನ್ನೂ ಬಿಡದ ದುಷ್ಕರ್ಮಿಗಳು... ಆಸ್ಟ್ರೇಲಿಯಾ ಬೀಚ್‌ನಲ್ಲಿ ಗುಂಡಿನ ದಾಳಿಗೆ 10 ಬಲಿ

ಭಾರತದಲ್ಲಿ ಯಹೂದಿ ಹಬ್ಬ ಹನುಕ್ಕಾ ಮೇಲೆ ಭಯೋತ್ಪಾದಕ ದಾಳಿಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮಟ್ಟದ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳ ಮೇಲೆ ಭಯೋತ್ಪಾದಕ ಸಂಘಟನೆಗಳು ದಾಳಿಗಳನ್ನು ನಡೆಸಲು ಯೋಜನೆ ರೂಪಿಸಿವೆ ಎಂಬ ಗುಪ್ತಚರ ಮಾಹಿತಿ ತಿಳಿಸಿದೆ.

ಕ್ರಿಸ್ಮಸ್ ಗೆ ಮೊದಲು ಪ್ರಾರಂಭವಾಗುವ ಯಹೂದಿ ಹಬ್ಬ ಹನುಕ್ಕಾ ಭಾನುವಾರದಿಂದ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ. ಇದು ತುಂಬಾ ಗಂಭೀರ ವಿಷಯವಾದ್ದರಿಂದ ನಿರ್ದಿಷ್ಟ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.



ಯಹೂದಿ ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡು ಹಾರಿಸಿದ್ದರು. ಯಹೂದಿ ಹಬ್ಬದ ಆರಂಭವನ್ನು ಗುರುತಿಸಲು ಕಡಲತೀರದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಾವಿರಾರು ಜನರು ಬೀಚ್‌ನಲ್ಲಿ ಸೇರಿದ್ದರು. ಭಯೋತ್ಪಾದಕ ದಾಳಿಯಲ್ಲಿ ಮಕ್ಕಳು, ಪೊಲೀಸರು ಸೇರಿದಂತೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಓರ್ವ ಬಂದೂಕುಧಾರಿ ಕೂಡ ಮೃತಪಟ್ಟಿರುವುದಾಗಿ ಆಸ್ಟ್ರೇಲಿಯಾ ಪೊಲೀಸರು ತಿಳಿಸಿದ್ದಾರೆ. ಈ ದಾಳಿಯನ್ನು ಭಯೋತ್ಪಾದಕ ಘಟನೆ ಎಂದು ನ್ಯೂ ಸೌತ್ ವೇಲ್ಸ್ ಪೊಲೀಸ್ ಆಯುಕ್ತ ಮಾಲ್ ಲ್ಯಾನ್ಯನ್ ಘೋಷಿಸಿದ್ದಾರೆ.

ಉದ್ವಿಗ್ನಗೊಂಡ ಉತ್ತರಾಖಂಡ: ಗುಂಪು ಘರ್ಷಣೆಯಿಂದ ಓರ್ವ ಸಾವು, ಇಬ್ಬರು ಗಂಭೀರ

ಬೋಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಆಯೋಜಿಸಲಾದ ಯಹೂದಿ ಹನುಕ್ಕಾ ಕಾರ್ಯಕ್ರಮದಲ್ಲಿ ಬಂದೂಕುಧಾರಿಗಳಿಬ್ಬರು ಗುಂಡಿನ ದಾಳಿ ನಡೆಸಿದ್ದು, ಮಕ್ಕಳು ಮತ್ತು ಪೊಲೀಸ್ ಅಧಿಕಾರಿ ಸೇರಿದಂತೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 190ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಒಬ್ಬ ಬಂದೂಕುಧಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗುಂಡು ಹಾರಿಸಲಾಗಿದೆ. ಆತನಿಗೆ ತುರ್ತು ಸೇವೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.