ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terror Link: ಭಯೋತ್ಪಾದಕರ ಜೊತೆ ಸಂಪರ್ಕ- ಮೂವರ ಬಂಧನ

Terror sympathizers Arrest: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ನಡೆಸಿ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿವೆ. ಗುಪ್ತಚರ ಮಾಹಿತಿಯ ಆಧಾರದಲ್ಲಿ ಖಲಾಮಾಬಾದ್‌ನಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿವೆ.

ಹಂದ್ವಾರ: ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ (Pakistan link) ಮೂವರು ಭಯೋತ್ಪಾದಕ (terrorist) ಸಹಚರರನ್ನು (terror link) ಜಮ್ಮು ಮತ್ತು ಕಾಶ್ಮೀರದ (Jammu and kashmir) ಹಂದ್ವಾರದಲ್ಲಿ (Handwara) ಬಂಧಿಸಲಾಗಿದೆ. ಗುಪ್ತಚರ ಮಾಹಿತಿಯ (Intelligence information) ಆಧಾರದಲ್ಲಿ ಖಲಾಮಾಬಾದ್‌ನಲ್ಲಿ(Qalamabad) ಭದ್ರತಾ ಪಡೆಗಳು ( Security forces) ಜಂಟಿ ಕಾರ್ಯಾಚರಣೆ ನಡೆಸಿ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿವೆ. ಮೊಹಮ್ಮದ್ ಇಕ್ಬಾಲ್ ಪಂಡಿತ್ (23), ಸಜಾದ್ ಅಹ್ಮದ್ ಶಾ (26) ಮತ್ತು ಇಶ್ಫಾಕ್ ಅಹ್ಮದ್ ಮಲಿಕ್ (22) ಬಂಧಿತರು.

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿಯಾಗಿ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ನಡೆಸಿ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಿವೆ.

ಗುಪ್ತಚರ ಮಾಹಿತಿ ಆಧಾರದ ಮೇರೆಗೆ ಖಲಾಮಾಬಾದ್‌ನ ವಾಜಿಹಾಮಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ವೇಳೆ ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ಹ್ಯಾಂಡ್ವಾರದೊಂದಿಗೆ ಸಂಪರ್ಕ ಹೊಂದಿದ್ದ ಮೂವರು ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಮೊಹಮ್ಮದ್ ಇಕ್ಬಾಲ್ ಪಂಡಿತ್, ಸಜಾದ್ ಅಹ್ಮದ್ ಶಾ, ಇಶ್ಫಾಕ್ ಅಹ್ಮದ್ ಮಲಿಕ್ ಎಂಬವರನ್ನು ಬಂಧಿಸಿರುವ ಭದ್ರತಾ ಪಡೆಗಳು ಭಯೋತ್ಪಾದನಾ ಸಹಚರರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿವೆ.

ಈ ಕುರಿತು ಕಲಾಮಾಬಾದ್‌ನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇತರ ಸಹಚರರನ್ನು ಬಂಧಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೈನಿಕನೊಬ್ಬ ಸಾವನ್ನಪ್ಪಿದ್ದನು. ಬಳಿಕ ಈ ಕಾರ್ಯಾಚರಣೆ ನಡೆಸಲಾಗಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹವಾಲ್ದಾರ್ ಅಂಕಿತ್ ಸಾವನ್ನಪ್ಪಿದ್ದರು.

ಇದನ್ನೂ ಓದಿ: Pavitra Gowda: ಬೇಲ್‌ ಕ್ಯಾನ್ಸಲ್‌... ಪವಿತ್ರಾ ಗೌಡ ಅರೆಸ್ಟ್‌!

ಸೋಮವಾರ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದ ಭೂಪ್ರದೇಶದೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ನುಸುಳುಕೋರನ ಮೇಲೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡಿನ ದಾಳಿ ನಡೆಸಿ ಹಿಮ್ಮೆಟ್ಟಿಸಿದೆ.

ವಿದ್ಯಾ ಇರ್ವತ್ತೂರು

View all posts by this author