ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Killed: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೋಸ್ಟ್‌ ವಾಂಟೆಡ್‌ ಉಗ್ರ ಫಿನೀಶ್‌!

Terrorist Killed: ಕಿಶ್ತ್ವಾರ್‌ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಉಗ್ರನೋರ್ವನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

ಮೋಸ್ಟ್‌ ವಾಂಟೆಡ್‌ ಉಗ್ರ ಎನ್‌ಕೌಂಟರ್‌ಗೆ ಬಲಿ

Profile Rakshita Karkera Apr 11, 2025 4:32 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಮೋಸ್ಟ್‌ ವಾಂಟೆಡ್‌ ಉಗ್ರನೋರ್ವನನ್ನು(Terrorist Killed) ಹೊಡೆದುರುಳಿಸಲಾಗಿದೆ. ಕಿಶ್ತ್ವಾರ್‌ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಉಗ್ರನೋರ್ವನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ ಉಧಂಪುರ ಜಿಲ್ಲೆಯಲ್ಲೂ ಪ್ರತ್ಯೇಕ ಸೇನಾ ಕಾರ್ಯಾಚರಣೆ ನಡೆದಿದ್ದು, ಮೂವರು ಉಗ್ರರು ಟ್ರ್ಯಾಪ್‌ ಆಗಿದ್ದಾರೆ ಎನ್ನಲಾಗಿದೆ.

ಕಿಶ್ತ್ವಾರ್‌ನಲ್ಲಿ ಹತ್ಯೆಗೀಡಾದ ಉಗ್ರನನ್ನು ಪಾಕಿಸ್ತಾನ ಮೂಲದ ಸೈಫುಲ್ಲಾ ಮಾಡ್ಯೂಲ್‌ನ ಕಾರ್ಯಕರ್ತ ಎನ್ನಲಾಗಿದೆ. ವರದಿಯಾಗಿದೆ. ಈ ಸಂಘಟನೆ ಉಗ್ರರು ಜುಲೈ 15, 2024 ರಂದು ದೋಡಾದಲ್ಲಿ ಸೇನಾ ತಂಡವನ್ನು ಹೊಂಚು ಹಾಕಿ ದಾಳಿ ನಡೆಸಿದ್ದರು. ಇದರ ಪರಿಣಾಮವಾಗಿ ಒಬ್ಬ ಅಧಿಕಾರಿ ಮತ್ತು ಯೋಧ ಹುತಾತ್ಮರಾಗಿದ್ದರು.



ಈ ಸುದ್ದಿಯನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ; ಉಧಂಪುರದಲ್ಲಿ ಮೂವರು ಉಗ್ರರು ಅಡಗಿರುವ ಶಂಕೆ

ಮಾರ್ಚ್ ಕೊನೆಯಲ್ಲಿ , ಕಥುವಾ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ದಿನವಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದರೆ, ಮೂವರು ಪೊಲೀಸರು ಹುತಾತ್ಮರಾಗಿದ್ದರು. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ನೇತೃತ್ವದ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೆರವಿನಿಂದ ನಡೆದ ಎನ್‌ಕೌಂಟರ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಏಳು ಮಂದಿ ಪೊಲೀಸರು ಗಾಯಗೊಂಡಿದ್ದರು.

ಇತ್ತೀಚೆಗೆ ಜಮ್ಮು- ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಬುಧವಾರ ಉಗ್ರರ ಅಡಗುತಾಣಗಳನ್ನು ಪತ್ತೆ ಹಚ್ಚಿದ್ದವು. ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆಯಲ್ಲಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ಸಂಗ್ರಹವನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.