Pahalgam Attack: ಕಳೆದ 25 ವರ್ಷಗಳಲ್ಲಿ ಕಾಶ್ಮೀರದಲ್ಲಿ ನಡೆದ ಭೀಕರ ಉಗ್ರರ ದಾಳಿಗಳು ಯಾವುವು ಗೊತ್ತಾ?
ಪಹಲ್ಗಾಮ್‌ನ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದು 2019 ರಲ್ಲಿ ಪುಲ್ವಾಮಾ ದಾಳಿಯ ಅನಂತರ ಕಣಿವೆಯಲ್ಲಿ ನಡೆದ ಅತ್ಯಂತ ದೊಡ್ಡ ದಾಳಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೊಸದೇನಲ್ಲ. ಕಳೆದ 25 ವರ್ಷಗಳಲ್ಲಿ ಕಾಶ್ಮೀರದಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಗಳು ಇಂತಿವೆ.


ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ (jammu and kashmir) ಉಗ್ರರ ದಾಳಿ (terrorists attack) ಹೊಸದೇನಲ್ಲ. ಸಾಮಾನ್ಯ ಜನರನ್ನು ಗುರಿಯಾಗಿಸಿಕೊಂಡು ಇವರ ದಾಳಿಗಳಿಗೆ ಹೆದರಿಯೇ ಇಲ್ಲಿ ಜನಜೀವನ ನಡೆಯುತ್ತಿದೆ. ದೇಶವನ್ನೇ ಬೆಚ್ಚಿ ಬೀಳಿಸಿದ ದಕ್ಷಿಣ ಕಾಶ್ಮೀರದ (southern Kashmir) ಪಹಲ್ಗಾಮ್‌ನಲ್ಲಿ (Pahalgam Attack) ನಡೆದ ದಾಳಿಯಲ್ಲಿ ಮಂಗಳವಾರ 26 ಪ್ರವಾಸಿಗರು ಸಾವನ್ನಪ್ಪಿದ್ದು ಇದು ಈ ವರ್ಷ ಪ್ರವಾಸಿಗರ ಮೇಲೆ ನಡೆದ ಅತಿ ದೊಡ್ಡ ದಾಳಿಯಾಗಿದೆ. ಲಷ್ಕರ್-ಎ-ತೈಬಾ (LeT) ಗೆ ಸಂಬಂಧಿಸಿದ ದಿ ರೆಸಿಸ್ಟೆನ್ಸ್ ಫ್ರಂಟ್ ( The Resistance Front ) ಎಂಬ ಭಯೋತ್ಪಾದಕ ಗುಂಪು (terrorist group ) ಇಲ್ಲಿ ದಾಳಿ ನಡೆಸಿದ್ದು, ದುಷ್ಕರ್ಮಿಗಳನ್ನು ಶಿಕ್ಷಿಸುವುದಾಗಿ ಕೇಂದ್ರ ಗೃಹ ಸಚಿವ (Union Home Minister) ಅಮಿತ್ ಶಾ ( Amit Shah) ಅವರು ಈಗಾಗಲೇ ಪ್ರತಿಜ್ಞೆ ಮಾಡಿದ್ದಾರೆ.
ಪಹಲ್ಗಾಮ್‌ನ ರೆಸಾರ್ಟ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಕ್ಕೆ ಬಂದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದು 2019 ರಲ್ಲಿ ಪುಲ್ವಾಮಾ ದಾಳಿಯ ಅನಂತರ ಕಣಿವೆಯಲ್ಲಿ ನಡೆದ ಅತ್ಯಂತ ದೊಡ್ಡ ದಾಳಿಯಾಗಿದೆ.
ಭಯೋತ್ಪಾದಕರು ದಾಳಿ ನಡೆಸಿರುವ ಪಹಲ್ಗಾಮ್ ನ ಈ ಸ್ಥಳವು ದಟ್ಟವಾದ ಪೈನ್ ಕಾಡುಗಳು ಮತ್ತು ಪರ್ವತಗಳಿಂದ ಸುತ್ತುವರೆದಿದೆ. ವಿಶಾಲವಾದ ಹುಲ್ಲುಗಾವಲು ಪ್ರವಾಸಿಗರ ನೆಚ್ಚಿನ ತಾಣವಾಗಿದೆ. 'ಮಿನಿ ಸ್ವಿಟ್ಜರ್ಲೆಂಡ್' ಎಂದು ಕರೆಯಲ್ಪಡುವ ಹುಲ್ಲುಗಾವಲು ಪ್ರದೇಶಕ್ಕೆ ಬಂದ ಭಯೋತ್ಪಾದಕರು ಅಲ್ಲಿ ಸುತ್ತಾಡುತ್ತಿದ್ದ ಪ್ರವಾಸಿಗರ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾರೆ ಎನ್ನುತ್ತಾರೆ ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೊಸದೇನಲ್ಲ. ಕಳೆದ 25 ವರ್ಷಗಳಲ್ಲಿ ಕಾಶ್ಮೀರದಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಗಳು ಇಂತಿವೆ.
- ಅನಂತ್‌ನಾಗ್ ಜಿಲ್ಲೆಯ ಚಟ್ಟಿಸಿಂಗ್‌ಪೋರಾ ಗ್ರಾಮದಲ್ಲಿಅಲ್ಪಸಂಖ್ಯಾತ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು 2000ದ ಮಾರ್ಚ್ 21ರಂದು ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ ಸುಮಾರು 36 ಜನರು ಸಾವನ್ನಪ್ಪಿದ್ದರು.
- ನುನ್ವಾನ್ ಬೇಸ್ ಕ್ಯಾಂಪ್ ಮೇಲೆ 2000ದ ಆಗಸ್ಟ್ ತಿಂಗಳಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 32 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ 24 ಮಂದಿ ಅಮರನಾಥಕ್ಕೆ ಹೋಗುತ್ತಿದ್ದ ಯಾತ್ರಿಕರಾಗಿದ್ದಾರೆ.
- ಅನಂತ್‌ನಾಗ್‌ನ ಶೇಷ್ನಾಗ್ ಬೇಸ್ ಕ್ಯಾಂಪ್‌ನಲ್ಲಿ 2001ರ ಜುಲೈ ತಿಂಗಳಲ್ಲಿ ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 13 ಜನರು ಸಾವನ್ನಪ್ಪಿದ್ದರು.
- 2001ರ ಅಕ್ಟೋಬರ್ 1ರಂದು ಶ್ರೀನಗರದ ಜಮ್ಮು ಮತ್ತು ಕಾಶ್ಮೀರ ರಾಜ್ಯ ಶಾಸಕಾಂಗ ಸಂಕೀರ್ಣದಲ್ಲಿ ನಡೆದ ಆತ್ಮಹತ್ಯಾ ದಾಳಿಯಲ್ಲಿ 36 ಮಂದಿ ಮೃತಪಟ್ಟಿದ್ದಾರೆ.
- ಚಂದನ್ವಾರಿ ಬೇಸ್ ಕ್ಯಾಂಪ್‌ನಲ್ಲಿ ಅಮರನಾಥ ಯಾತ್ರಿಕರ ಮೇಲೆ 2002ರಲ್ಲಿ ಮತ್ತೆ ದಾಳಿ ನಡೆಸಲಾಯಿತು. ಈ ಬಾರಿ 11 ಮಂದಿ ಪ್ರಾಣತೆತ್ತರು.
- ದಕ್ಷಿಣ ಕಾಶ್ಮೀರದ ಲೋವರ್ ಮುಂಡಾದಲ್ಲಿ 2002ರ ನವೆಂಬರ್ 23ರಂದು ನಡೆದ ದಾಳಿಯಲ್ಲಿ ಒಂಬತ್ತು ಭದ್ರತಾ ಪಡೆ ಸಿಬ್ಬಂದಿ ಸೇರಿದಂತೆ 19 ಮಂದಿ ಸಾವನ್ನಪ್ಪಿದರು.
- 2003ರ ಮಾರ್ಚ್ 23ರಂದು ಪುಲ್ವಾಮಾ ಜಿಲ್ಲೆಯ ನಂದಿಮಾರ್ಗ್ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 11 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿ ಸುಮಾರು 24 ಕಾಶ್ಮೀರಿ ಪಂಡಿತರು ಸಾವನ್ನಪ್ಪಿದರು.

8. ಪುಲ್ವಾಮಾದ ಜನದಟ್ಟಣೆಯ ಮಾರುಕಟ್ಟೆಯಲ್ಲಿ 2005ರ ಜೂನ್ 13ರಂದು ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡು 13 ಜನರು ಮತ್ತು ಮೂವರು ಸಿಆರ್‌ಪಿಎಫ್ ಅಧಿಕಾರಿಗಳು ಮೃತಪಟ್ಟಿದ್ದರು. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
9. ಉರಿಯಲ್ಲಿರುವ ಭಾರತೀಯ ಸೇನಾ ಬ್ರಿಗೇಡ್ ಪ್ರಧಾನ ಕಚೇರಿಯ ಮೇಲೆ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು 2016ರ ಸೆಪ್ಟೆಂಬರ್ 18ರಂದು ನಡೆಸಿದ ದಾಳಿಯಲ್ಲಿ 19 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
10. ಕುಲ್ಗಾಮ್‌ನಲ್ಲಿ ಅಮರನಾಥ ಯಾತ್ರಾ ಬಸ್ ಮೇಲೆ 2017ರ ಜುಲೈ 10ರಂದು ನಡೆದ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದರು.
11. 2019ರ ಫೆಬ್ರವರಿ 14ರಂದು ಪುಲ್ವಾಮಾ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಲೆಥಪೋರಾದಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನಗಳ ಬೆಂಗಾವಲು ಪಡೆಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿಯಾಗಿದ್ದು, ಈ ಘಟನೆಯಲ್ಲಿ 40 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.