" ಧನ್ಯವಾದಗಳು ಫ್ರೆಂಡ್ಸ್"; 24 ಗಂಟೆಗಳಲ್ಲೇ 2ನೇ ವಿಡಿಯೋ ಶೇರ್ ಮಾಡಿದ ಪ್ರಧಾನಿ ಮೋದಿ ಹೇಳಿದ್ದೇನು?
PM Modi: ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮಧ್ಯರಾತ್ರಿ ಮತ್ತೊಂದು ವಿಡಿಯೋ ಸಂದೇಶ ಕಳಿಸಿದ್ದಾರೆ. ಕಳೆದ 24 ಗಂಟೆಗಳ ಒಳಗೆ ಎರಡನೇ ವಿಡಿಯೋ ಇದಾಗಿದೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರುವ ಮೋದಿ, ಒಳ್ಳೊಳ್ಳೆಯ ಸಲಹೆ ಸೂಚನೆಗಳನ್ನು ನನಗೆ ಕೊಟ್ಟಿದ್ದೀರಿ. ಅದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನಿನ್ನೆ ಮಧ್ಯರಾತ್ರಿ ಮತ್ತೊಂದು ವಿಡಿಯೋ ಸಂದೇಶ ಕಳಿಸಿದ್ದಾರೆ. ಕಳೆದ 24 ಗಂಟೆಗಳ ಒಳಗೆ ಎರಡನೇ ವಿಡಿಯೋ ಇದಾಗಿದೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರುವ ಮೋದಿ, ಒಳ್ಳೊಳ್ಳೆಯ ಸಲಹೆ ಸೂಚನೆಗಳನ್ನು ನನಗೆ ಕೊಟ್ಟಿದ್ದೀರಿ. ಅದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಜನರು ನೀಡಿದ ಪ್ರೀತಿ ಮತ್ತು ಸಕಾರಾತ್ಮಕ ಸಲಹೆಗಳು ತಮ್ಮೊಂದಿಗಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿವೆ ಎಂದು ಅವರು ಹೇಳಿದ್ದಾರೆ.
ರೀಲ್ಸ್ ವಿಡಿಯೋ ಹಂಚಿಕೊಂಡ ಮೋದಿ, ನಿಮ್ಮ ಅತ್ಯಮೂಲ್ಯ ಸಲಹೆಗಳಿಗಾಗಿ ಧನ್ಯವಾದಗಳು ಅಂತ ಯುವ ಜನತೆಗೆ ಮೋದಿ ಧನ್ಯವಾದ ಅರ್ಪಿಸಿದ್ದಾರೆ. "ಧನ್ಯವಾದಗಳು ಸ್ನೇಹಿತರೇ. ನಿನ್ನೆ ರಾತ್ರಿ ನಿಮ್ಮೊಂದಿಗೆ ಸಂಪರ್ಕ ಸಾಧಿಸಲು ನನಗೆ ಅವಕಾಶ ಸಿಕ್ಕಿತು. ನಾನು ಹಂಚಿಕೊಂಡ ವೀಡಿಯೋಗೆ ನೀವು ನೀಡಿದ ಪ್ರತಿಕ್ರಿಯೆ ಹಾಗೂ ಸಕಾರಾತ್ಮಕ ಸಲಹೆಗಳಿಗೆ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ಹೀಗೆ ಮುಂದುವರಿಯಲಿ. ನಮ್ಮ ಸಂಬಂಧ ಇನ್ನಷ್ಟು ಬಲಗೊಳ್ಳಲಿ. ಧನ್ಯವಾದಗಳು, ಎಂದು ಪ್ರಧಾನಿ ಹೇಳಿದ್ದಾರೆ.
ಮಧ್ಯರಾತ್ರಿಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಸ್ಪಂದನೆ ಪಡೆದಿದ್ದು, ಪೋಸ್ಟ್ ಮಾಡಿದ ಕೇವಲ ಎಂಟು ನಿಮಿಷಗಳಲ್ಲಿ 2.5 ಮಿಲಿಯನ್ಗಿಂತ ಹೆಚ್ಚು ವೀಕ್ಷಣೆಗಳನ್ನು ದಾಖಲಿಸಿದೆ. ಇನ್‌ಸ್ಟಾಗ್ರಾಂನಲ್ಲಿ 20 ನಿಮಿಷಗಳಲ್ಲೇ 1 ಮಿಲಿಯನ್ಗಿಂತ ಹೆಚ್ಚು ಲೈಕ್ಗಳನ್ನು ಪಡೆದಿದೆ. ಗುರುವಾರ ಮಧ್ಯರಾತ್ರಿ ವಿಡಿಯೋ ಹಂಚಿಕೊಂಡಿದ್ದ ಪ್ರಧಾನಿ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕರಡು ಕಾನೂನು ಹಾಗೂ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಕುರಿತು ಕೇಂದ್ರ ಸಚಿವ ಸಂಪುಟ ಚರ್ಚಿಸಲಿದೆ ಎಂದು ಘೋಷಿಸಿದ್ದರು. ಮಳೆಗಾಲದ ಅಧಿವೇಶನದಲ್ಲೇ ಈ ಮಸೂದೆಯನ್ನು ಸಂಸತ್ತಿನಲ್ಲಿ ಸಾಧ್ಯವಾದಷ್ಟು ಬೇಗ ಅಂಗೀಕರಿಸಲು ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದೂ ಅವರು ತಿಳಿಸಿದ್ದರು.
'ಯುವಕರ ಭವಿಷ್ಯಕ್ಕೆ ಆದ್ಯತೆ' ಪ್ರತಿಜ್ಞೆ ಮುರಿದಿದ್ದಾರೆ ಪ್ರಧಾನಿ ನರೇಂದ್ರ ಮೋದಿ: ರಾಹುಲ್ ಗಾಂಧಿ ಟೀಕೆ
ಪ್ರಶ್ನೆಪತ್ರಿಕೆ ಸೋರಿಕೆ ಎಂಬುದು ಸಾಧಾರಣ ವಿಷಯವಲ್ಲ ಎಂಬುದು ಗೊತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಇದೊಂದು ನೋವಿನ ಸಂಗತಿ. ಪ್ರಶ್ನೆಪತ್ರಿಕೆ ಸೋರಿಕೆಯಾದ ಬಳಿಕ ಎರಡೂವರೆ ತಿಂಗಳಿನಲ್ಲಿ ಹಲವಾರು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ತಪ್ಪು ಮಾಡಿದವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ಸರ್ಕಾರ ತನ್ನ ಎಲ್ಲ ಸಾಮರ್ಥ್ಯ ಬಳಸಿ 22 ಲಕ್ಷ ವಿದ್ಯಾರ್ಥಿಗಳು ಅತ್ಯಂತ ಅಲ್ಪಾವಧಿಯಲ್ಲಿ ಮರುಪರೀಕ್ಷೆ ಬರೆಯುವಂತೆ ನೋಡಿಕೊಂಡಿದೆ ಎಂದು ಅವರು ತಿಳಿಸಿದ್ದರು.