ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

‌VIral Video: ಭೀಕರ ಮಳೆ- ಗಾಳಿಗೆ ಮಕ್ಕಳ ಸಹಿತ ಹಾರಿ ಹೋದ ಮನೆಯ ಚಾವಣಿ-ವಿಡಿಯೊ ವೈರಲ್

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಮಕ್ಕಳು ಛಾವಣಿ ಹಿಡಿದುಕೊಂಡಿದ್ದರಿಂದ ಮಕ್ಕಳು ಕೂಡ ಹಾರಿ ಹೋಗಿ ಗಾಯಗೊಂಡಿದ್ದಾರೆ. ಈ ಭಯಾನಕ ದೃಶ್ಯದ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್(Viral Video)ಆಗಿದೆ.

ಭೋಪಾಲ್: ದೇಶಾದಾದ್ಯಂತ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ನೀರಿನಿಂದ ಆವರಿಸಿದ್ದರಿಂದ ಜನರು ಬೇರೆ ಕಡೆ ಹೋಗಲು ಆಗದೆ ತತ್ತರಿಸಿಹೋಗಿದ್ದಾರೆ. ಇದೀಗ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಧಾರಾಕಾರ ಮಳೆಯ(Heavy Rain) ಸಮಯದಲ್ಲಿ ಬೀಸಿದ ಭಾರೀ ಗಾಳಿಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಚಾವಣಿ ಹಿಡಿದುಕೊಂಡಿದ್ದ ಮಕ್ಕಳು ಕೂಡ ಹಾರಿ ಹೋಗಿದ್ದಾರೆ. ಈ ಭಯಾನಕ ದೃಶ್ಯದ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video) ಆಗಿದೆ.

ವೈರಲ್ ಆದ ವಿಡಿಯೊದಲ್ಲಿ, ಇಬ್ಬರು ಮಕ್ಕಳು ತಮ್ಮ ಮನೆಯನ್ನು ಕಾಪಾಡಿಕೊಳ್ಳಲು ಒದ್ದಾಡುತ್ತಿರುವುದು ಸೆರೆಯಾಗಿದೆ. ಇಬ್ಬರು ಹುಡುಗರು ತಗಡಿನ ಛಾವಣಿಯನ್ನು ಹಿಡಿದುಕೊಂಡಿದ್ದರು. ಇದ್ದಕ್ಕಿದ್ದಂತೆ, ಗಾಳಿ ಬೀಸಿದ್ದರಿಂದ ತಗಡಿನ ಚಾವಣಿ ಕಿತ್ತುಹೋಗಿ, ಮಕ್ಕಳನ್ನು ಹಾರಿಸಿಕೊಂಡು ಹೋಗಿದೆ. ಘಟನೆಯಲ್ಲಿ ಮಕ್ಕಳಿಬ್ಬರೂ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ವಿಡಿಯೊ ಇಲ್ಲಿದೆ ನೋಡಿ...



ವರದಿ ಪ್ರಕಾರ, ಈ ಘಟನೆ ಗೋರಾ ಖುರ್ದ್ ಗ್ರಾಮದಲ್ಲಿ ನಡೆದಿದ್ದು, ಆ ಮನೆ ಅಮೋಲ್ ನಾಗವಂಶಿ ಎಂಬುವವರಿಗೆ ಸೇರಿತ್ತಂತೆ. ಮನೆಯ ಛಾವಣಿ ಹಿಡಿದಿದ್ದ ಮಕ್ಕಳನ್ನು ಜ್ವಾಲಾ ಮತ್ತು ಸುನಿಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಆಘಾತಕಾರಿ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ವಿಡಿಯೊಗೆ ಹಲವಾರು ಕಾಮೆಂಟ್‌ಗಳು ಬಂದಿದ್ದು, ಅನೇಕರು ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶದ 20 ಕ್ಕೂ ಹೆಚ್ಚು ಜಿಲ್ಲೆಗಳು ಭಾರೀ ಮಳೆ ಮತ್ತು ಗಾಳಿಯ ರಭಸಕ್ಕೆ ತತ್ತರಿಸಿದ್ದು, ಸಾಕಷ್ಟು ಮನೆಗಳಿಗೆ ಹಾನಿಯಾಗಿದ್ದು, ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಜನರು ಮನೆಯೊಳಗೆ ಇರಬೇಕೆಂದು ಮತ್ತು ಇಂತಹ ಅಪಘಾತಗಳನ್ನು ತಪ್ಪಿಸಲು ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ನೀರಿನಲ್ಲಿ ಸಖತ್‌ ಆಗಿ ಸ್ವಿಮ್‌ ಮಾಡಿದ ಗೂಬೆ; ನೆಟ್ಟಿಗರು ಫುಲ್ ಶಾಕ್- ವಿಡಿಯೊ ನೋಡಿ

ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗೋವಾದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೂ ಮುನ್ನ, ಐಎಂಡಿ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿತ್ತು. ಮಳೆಯಿಂದಾಗಿ ದೈನಂದಿನ ಜೀವನ ಅಸ್ತವ್ಯಸ್ತವಾಗಿದ್ದು, ಜನರು ಕಳವಳಗೊಂಡಿದ್ದರು. ಅಷ್ಟೇ ಅಲ್ಲದೇ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ರಸ್ತೆ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಇದರಿಂದ ಪ್ರಯಾಣಿಕರು ಹಲವಾರು ತೊಂದರೆಗಳನ್ನು ಅನುಭವಿಸಿದ್ದರು. ಇದಕ್ಕೆ ಸಂಬಂಧಪಟ್ಟ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಸ್ಕೂಟಿಯಲ್ಲಿದ್ದ ವ್ಯಕ್ತಿಯೊಬ್ಬ ನೀರು ತುಂಬಿದ ರಸ್ತೆಯಲ್ಲಿ ಸಿಲುಕಿಕೊಂಡು ಸ್ಕೂಟಿ ಸಹಿತವಾಗಿ ಕೊಚ್ಚಿಕೊಂಡು ಹೋಗಿ ಚರಂಡಿಗೆ ಬಿದ್ದಿದ್ದನು. ಅವನನ್ನು ಸ್ಥಳೀಯರು ರಕ್ಷಿಸಿದ್ದರು.