ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ; ವಿಪಕ್ಷಗಳಿಗೆ ನೀಡಿದ ಖಡಕ್‌ ಸಂದೇಶದಲ್ಲಿ ಏನಿದೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ರಾಷ್ಟ್ರೀಯ ಜವಾಬ್ದಾರಿಯಾಗಿದೆ. ಇದರ ಸೋರಿಕೆಗೆ ಕಾರಣರಾದವರಿಗೆ ಸಾಧ್ಯವಾದಷ್ಟು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹೇಳಿದರು. ಎನ್‌ಡಿಎ ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯ ಬಳಿಕ ಅವರು ಈ ಮಾತುಗಳನ್ನು ಹೇಳಿದ್ದಾರೆ ಎಂದು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ರಾಷ್ಟ್ರೀಯ ಜವಾಬ್ದಾರಿಯಾಗಿದೆ. ಇದಕ್ಕಾಗಿ ಎಲ್ಲರ ಸಾಮೂಹಿಕ ಪ್ರಯತ್ನ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹೇಳಿದರು. ಮಂಗಳವಾರ ನಡೆದ ಎನ್‌ಡಿಎ (NDA) ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯ (Mangal Milan meeting) ಬಳಿಕ ಮಾತನಾಡಿದ ಅವರು, ನೀಟ್ ಪತ್ರಿಕೆ ಸೋರಿಕೆಯ (NEET Row) ವರದಿಗಳು ಹೊರಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಹಲವರನ್ನು ಬಂಧಿಸಲಾಗಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಮರು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.

ಸಚಿವ ಕಿರಣ್ ರಿಜಿಜು ಅವರು ಹೇಳಿರುವ ಮಾತುಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎನ್‌ಡಿಎ ಸಂಸದೀಯ ಪಕ್ಷದ 'ಮಂಗಲ್ ಮಿಲನ್' ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ರಾಷ್ಟ್ರೀಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಸಿಜೆಪಿ ಪ್ರತಿಭಟನೆ: 118 ಪೊಲೀಸರಿಗೆ ಗಾಯ, 70 ಮಂದಿ ವಶಕ್ಕೆ

ಪ್ರಶ್ನಾಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಸಾಮೂಹಿಕ ಪ್ರಯತ್ನಗಳನ್ನು ಮಾಡಬೇಕೆಂದು ತಿಳಿಸಿರುವ ಅವರು ಸಭೆಯಲ್ಲಿ ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎಲ್ಲರೂ ಒಗ್ಗಟ್ಟಿನಿಂದ ಇರುವಂತೆ ತಿಳಿಸಿದ್ದಾರೆ. ಸಂಸತ್ತಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡುವಂತೆ ವಿರೋಧ ಪಕ್ಷಗಳಿಗೂ ಅವರು ಮನವಿ ಮಾಡಿದರು ಎಂದರು.

ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಎಲ್ಲಾ ಸಂಸದರು ದೇಶದ ಭವಿಷ್ಯವಾಗಿರುವ ಯುವಕರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ತಿಳಿಸಿದರು ಎಂದು ಕಿರಣ್ ರಿಜಿಜು ತಿಳಿಸಿದರು.

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರನ್ನು ಸಂಸತ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಒಂದು ದಿನದ ಬಳಿಕ ಪ್ರಧಾನಿ ಮೋದಿ ಅವರು ಈ ಕುರಿತು ಮಾತನಾಡಿದರು. ಕಳೆದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ವಿಚಾರಣೆಯೊಂದರ ಸಂದರ್ಭದಲ್ಲಿ ಕೆಲವು ನಿರುದ್ಯೋಗಿ ಯುವಕರನ್ನು ಜಿರಳೆಗಳಿಗೆ ಹೋಲಿಸಿದ ಬಳಿಕ ವಿಡಂಬನಾತ್ಮಕ ಸಾಮಾಜಿಕ ಮಾಧ್ಯಮ ತಾಣದಲ್ಲಿ ಕಾಕ್ರೋಚ್ ಜನತಾ ಪಕ್ಷ ಹುಟ್ಟಿಕೊಂಡಿತ್ತು.

ಇದರ ಬಳಿಕ ನೀಟ್ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷದಿಂದ ಪ್ರತಿಭಟನೆಗಳು ಮುಂದುವರಿದಿದೆ.

ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಭಾಗಿಯಾಗಿ ಪರೀಕ್ಷೆ ಬರೆದಿದ್ದರು. ಇದರ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಆರೋಪ ಕೇಳಿ ಬಂದಿದ್ದರಿಂದ ಪರೀಕ್ಷೆ ರದ್ದುಗೊಂಡಿದ್ದು, ಜೂನ್ ನಲ್ಲಿ ಮರು ಪರೀಕ್ಷೆಯನ್ನು ನಡೆಸಲಾಯಿತು. ನೀಟ್ ಹಗರಣದೊಂದಿಗೆ ಸಿಬಿಎಸ್‌ಇ ವಿದ್ಯಾರ್ಥಿಗಳು ಆನ್‌ಲೈನ್ ಅಂಕ ವ್ಯವಸ್ಥೆಗೆ ಸಂಬಂಧಿಸಿದ ಅವ್ಯವಸ್ಥೆಗಳು ಬೆಳಕಿಗೆ ಬಂದಿದ್ದು, ಇದು ಸಿಜೆಪಿ ಪ್ರತಿಭಟನೆ ತೀವ್ರಗೊಳ್ಳಲು ಕಾರಣವಾಗಿತ್ತು.

ಸಿಜೆಪಿ ನಾಯಕರಿಗೆ ಬೆಂಬಲವಾಗಿ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಆಗ್ರಹಿಸಿ ಶಿಕ್ಷಕ ಸೋನಮ್ ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದರು. ಅವರನ್ನು ಶನಿವಾರ ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದರ ಬಳಿಕ ದೆಹಲಿಯ ಜಂತರ್ ಮಂತರ್ ನಲ್ಲಿ ಕೊಂಚ ಉದ್ವಿಗ್ನತೆ ಉಂಟಾಗಿತ್ತು. ಇದರ ಬಳಿಕ ಸೋಮವಾರ ಪ್ರತಿಭಟನಾಕಾರರು ಸಂಸತ್ತಿಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ಆದರೆ ಅವರ ಮೇಲೆ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್ ಮಾಡಿ ತಡೆಯಲಾಯಿತು.

ಆತ್ಮಹತ್ಯೆಗೆ ಶರಣಾದ ನೀಟ್ ಆಕಾಂಕ್ಷಿಗಳ ಮನೆಯವರಿಗೆ 1 ಕೋಟಿ ರುಪಾಯಿ ಪರಿಹಾರ, ವಾಂಗ್ಚುಕ್‌ ಬಿಡುಗಡೆ: ಕೇಂದ್ರದ ಮುಂದೆ ಸಿಜೆಪಿ ಇಟ್ಟ ಬೇಡಿಕೆಗಳಿವು

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಜೆಪಿಯ ಪ್ರತಿಭಟನೆ ಕುರಿತು ಉಲ್ಲೇಖ ಮಾಡಿಲ್ಲ. ಸಿಜೆಪಿಯ ಇಬ್ಬರು ನಾಯಕರು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ತಮ್ಮ ಬೇಡಿಕೆಗಳನ್ನು ವಿವರಿಸುವ ಪತ್ರವನ್ನು ಅವರಿಗೆ ಸಲ್ಲಿಸಿದರು.

ವಿದ್ಯಾ ಇರ್ವತ್ತೂರು

View all posts by this author