ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭಯೋತ್ಪಾದನೆಗೆ ಪೋಷಣೆ ನೀಡುವವರಿಗೆ ಸಿಂಧೂ ನದಿ ನೀರು ಏಕೆ ಬೇಕು?: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ

ಭಾರತದ ಮೇಲೆ ದಾಳಿ ನಡೆಸುವ ಸಲುವಾಗಿಯೇ ಭಯೋತ್ಪಾದಕರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬೇಕಾಗಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶಾಂತಿಯ ಭಾಷೆಯನ್ನು ಅರ್ಥ ಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಗೊತ್ತಿದೆ ಎಂದು ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಕೊಡುವುದಿಲ್ಲ: ಭಾರತ ಎಚ್ಚರಿಕೆ

ಸಂಗ್ರಹ ಚಿತ್ರ -

ನವದೆಹಲಿ: ಭಯೋತ್ಪಾದನೆಯನ್ನೇ (terrorism) ಉದ್ದೇಶ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು (Sindhu river) ಏಕೆ ಬೇಕು. ಭಾರತದ ಮೇಲೆ ದಾಳಿ ನಡೆಸುವ ಸಲುವಾಗಿ ಭಯೋತ್ಪಾದಕರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಕೊಡುವುದಿಲ್ಲ. ಶಾಂತಿಯ ಭಾಷೆಯನ್ನು ಅರ್ಥ ಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಭಾರತಕ್ಕೆ ಗೊತ್ತಿದೆ. ಇದನ್ನು ನಾವು ಆಪರೇಷನ್ ಸಿಂದೂರ್ ಮೂಲಕ ಅವರಿಗೆ ತೋರಿಸಿಕೊಟ್ಟಿದ್ದೇವೆ. ಆದರೂ ಅವರು ಬುದ್ದಿ ಕಲಿತಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Defence Minister Rajnath Singh) ಖಡಕ್ ಮಾತುಗಳಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಶುಕ್ರವಾರ ತೆಲಂಗಾಣ ಬಿಜೆಪಿ ಆಯೋಜಿಸಿದ್ದ 'ಬುದ್ಧಿಜೀವಿಗಳ ಸಭೆ' ಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುವುದನ್ನು ಖಂಡಿಸಿ, ಎನ್‌ಡಿಎ ಸರ್ಕಾರವು ಸಿಂಧೂ ನದಿಯ ನೀರನ್ನು ಭಯೋತ್ಪಾದಕ ಪೋಷಕರಿಗೆ ತಲುಪಲು ಬಿಡುವುದಿಲ್ಲ ಎಂದು ಹೇಳಿದರು.

Model Arrested: ಕೇರಳ ಮಾಡೆಲ್ ಬ್ಯಾಗ್‌ನಲ್ಲಿ ಡ್ರಗ್ಸ್! ಮುಂಬೈ ಏರ್ಪೋರ್ಟ್‌ನಲ್ಲಿ ಅರೆಸ್ಟ್‌

ಕಳೆದ ವರ್ಷ ಭಾರತೀಯ ಸೇನೆಯು ನಡೆಸಿರುವ ಆಪರೇಷನ್ ಸಿಂದೂರ್ ಶಾಂತಿ ಮತ್ತು ಸಾಮರಸ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಭಾರತಕ್ಕೆ ತಿಳಿದಿದೆ ಎಂಬುದನ್ನು ಜಗತ್ತಿಗೆ ತೋರಿಸಿದೆ ಎಂದು ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಕಣ್ಣೀರು ಇಲ್ಲದವರು ನಮ್ಮಿಂದ ನೀರನ್ನು ನಿರೀಕ್ಷಿಸಬಾರದು. ಭಯೋತ್ಪಾದನೆಯನ್ನು ಪೋಷಿಸುವವರಿಗೆ ಮಾನವೀಯತೆಯೇ ಇಲ್ಲದವರಿಗೆ ಸಿಂಧೂ ನದಿಯ ನೀರು ತಲುಪಲು ಬಿಡುವುದಿಲ್ಲ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಅನಂತರ ಪ್ರಧಾನಿ ನರೇಂದ್ರ ಮೋದಿಯವರು ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ ಎಂದು ಹೇಳಿದ್ದಾರೆ ಎಂಬುದನ್ನು ಅವರು ಮತ್ತೆ ನೆನಪಿಕೊಂಡರು.

ಸಿಂಧೂ ನದಿ ನೀರು ಬಳಕೆ ಕುರಿತ ಒಪ್ಪಂದಕ್ಕೆ ಭಾರತ ಮತ್ತು ಪಾಕಿಸ್ತಾನದ ನಡುವೆ 1960ರ ಸೆಪ್ಟೆಂಬರ್ 19ರಂದು ಐಡಬ್ಲ್ಯೂಟಿ ಗೆ ಸಹಿ ಹಾಕಲಾಗಿತ್ತು. 2025ರ ಏಪ್ರಿಲ್ 22ರಂದು ಕಾಶ್ಮೀರದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಇದರ ಬಳಿಕ ಭಾರತವು ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಸಾರ್ವಭೌಮ ರಾಷ್ಟ್ರವಾಗಿ ತನ್ನ ಹಕ್ಕುಗಳನ್ನು ಚಲಾಯಿಸಿತು. ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನ ಇದನ್ನು ನಿಲ್ಲಿಸುವವರೆಗೆ ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿತ್ತು.

ಸದ್ಯ ಪಹಲ್ಗಾಮ್ ನಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದೂ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರಿದೆ. ಆದರೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಈ ನಡುವೆ ಭಾರತದ ಒಳ ನುಸುಳಲು ಅನೇಕ ಭಯೋತ್ಪಾದಕರು ಪ್ರಯತ್ನ ನಡೆಸಿದ್ದು, ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದರೊಂದಿಗೆ ಭಯೋತ್ಪಾದಕರೊಂದಿಗೆ ನಂಟು ಹೊಂದಿರುವ ದೇಶದೊಳಗಿರುವ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವಾರು ಮಂದಿಯನ್ನು ಬಂಧಿಸಲಾಗಿದೆ.

ಅಹಮದಾಬಾದ್ ವಿಮಾನ ದುರಂತಕ್ಕೆ ಒಂದು ವರ್ಷ: ಬದುಕುಳಿದ ಏಕೈಕ ವ್ಯಕ್ತಿ ಈಗ ಹೇಗಿದ್ದಾರೆ?

ಇದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ವಿಧಿಸಿದ್ದ 370 ನೇ ವಿಧಿಯನ್ನು ರದ್ದುಪಡಿಸುವುದು, ದೇಶವನ್ನು ನಕ್ಸಲ್ ಮುಕ್ತಗೊಳಿಸುವಲ್ಲಿ ಕೂಡ ದೇಶ ಪ್ರಗತಿ ಕಾಣುತ್ತಿದೆ ಎಂದು ಹೇಳಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜಿಎಸ್‌ಟಿ ಅನುಷ್ಠಾನ, ರಾಷ್ಟ್ರವ್ಯಾಪಿ ವಿದ್ಯುದೀಕರಣ ಮತ್ತು ನ್ಯಾಯ ವ್ಯವಸ್ಥೆಯಲ್ಲಿನ ಸುಧಾರಣೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.