ʼʼಮನಸ್ಸಿಗೆ ತುಂಬ ನೋವಾಗಿದೆʼʼ: ದೆಹಲಿ ಕಟ್ಟಡ ಕುಸಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ; ಮೂರಕ್ಕೇರಿದ ಮೃತರ ಸಂಖ್ಯೆ
PM Modi Expresses Condolences: “ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿದ ಪ್ರಕರಣ ತಿಳಿದು ಆಘಾತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಲಕರ ಪಿಜಿ ಹಾಸ್ಟೆಲ್‌ನ ಬಹುಮಹಡಿ ಕಟ್ಟಡ ಕುಸಿದು, ಮೂವರು ಮೃತಪಟ್ಟಿದ್ದಾರೆ. ಸುಮಾರು 40 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿ ಕಟ್ಟಡ ಕುಸಿದ ಸ್ಥಳದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ -
ದೆಹಲಿ, ಸೆ. 6: ಸತ್ಯ ನಿಕೇತನ ಪ್ರದೇಶದಲ್ಲಿ ಕಟ್ಟಡ ಕುಸಿದುಬಿದ್ದ (PG Building Collapse) ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಘಟನೆಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೃತರಿಗೆ ಸಂತಾಪ ಸೂಚಿಸಿದ್ದಾರೆ. “ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿದಿರುವ ಘಟನೆ ಬಗ್ಗೆ ಖವಾಗಿದೆ. ಆಳವಾದ ಸಂತಾಪ ಸೂಚಿಸುತ್ತೇನೆ” ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ಥಳದಲ್ಲಿ ಉಪಸ್ಥಿತರಿರುವ ಅಧಿಕಾರಿಗಳು ಅವಘಡದಲ್ಲಿ ಹಾನಿಗೊಳಗಾದವರಿಗೆ ಸಹಾಯ ಮಾಡಲು ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ.
ಭಾನುವಾರ (ಸೆಪ್ಟೆಂಬರ್ 6) ಮಧ್ಯಾಹ್ನ ಸತ್ಯ ನಿಕೇತನದಲ್ಲಿರುವ ಬಾಲಕರ ಪಿಜಿ ಹಾಸ್ಟೆಲ್‌ನ ಬಹುಮಹಡಿ ಕಟ್ಟಡ ಕುಸಿದು, ಮೂವರು ಮೃತಪಟ್ಟಿದ್ದಾರೆ. ಸುಮಾರು 40 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳಡಿಯಿಂದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮಾಹಿತಿ ನೀಡಿದ್ದಾರೆ.
ಪ್ರಧಾನಿ ಪೋಸ್ಟ್:
The collapse of a building at Satya Niketan, Delhi is distressing. Condolences to those who lost their loved ones. Praying for the speedy recovery of the injured. Authorities are working at the site and assisting those affected in the mishap: PM @narendramodi
— PMO India (@PMOIndia) September 6, 2026
ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಪರಿಸ್ಥಿತಿಯನ್ನು ಪರಿಶೀಲಿಸಲು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಚಿವ ಕಪಿಲ್ ಮಿಶ್ರಾ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದೆಹಲಿಯಲ್ಲಿ ಕುಸಿದ 6 ಅಂತಸ್ತಿನ ಕಟ್ಟಡ, ಓರ್ವ ಸಾವು; ಘಟನೆಯ ಭೀಕರತೆ ಬಿಚ್ಚಿಟ್ಟ ಸ್ಥಳೀಯರು
ಡಿಡಿಎಂಎ, ಎನ್‌ಡಿಆರ್‌ಎಫ್, ದೆಹಲಿ ಅಗ್ನಿಶಾಮಕ ಸೇವೆಗಳು, ದೆಹಲಿ ಪೊಲೀಸ್, ಎಂಸಿಡಿ, ಸಿಟಿಎಸ್ ಮತ್ತು ನಾಗರಿಕ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಮತ್ತು ತುರ್ತು ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ ಎಂದು ಸಿಎಂ ರೇಖಾ ಗುಪ್ತಾ ಹೇಳಿದ್ದಾರೆ.
ಅವಶೇಷಗಳಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅವರಲ್ಲಿ ಇಬ್ಬರನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಸಿಎಂ ಗುಪ್ತಾ, ಸಚಿವ ಕಪಿಲ್ ಮಿಶ್ರಾ ಏಮ್ಸ್ ಟ್ರಾಮಾ ಸೆಂಟರ್‌ಗೆ ಭೇಟಿ ನೀಡಿದರು.
ಕಟ್ಟಡ ಕುಸಿದ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಹೆಚ್ಚುವರಿ ಡಿಸಿಪಿ ಅಭಿಮನ್ಯು ಪೋಸ್ವಾಲ್ ಹೇಳಿದ್ದಾರೆ. ಇಲ್ಲಿಯವರೆಗೆ, ಒಂಬತ್ತು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದುರದೃಷ್ಟವಶಾತ್, ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೋಸ್ವಾಲ್ ಹೇಳಿದರು.
ಕೆಡವಿದ ಅಕ್ರಮ ಮಸೀದಿ ಅವಶೇಷಗಳಡಿ ಪತ್ತೆಯಾಯ್ತು ಪುರಾತನ ಬಾವಿ: ಈ ಪಾತಾಳ ದಾರಿಯ ರಹಸ್ಯವೇನು?
ಘಟನೆ ಹೇಗೆ ಮತ್ತು ಏನಾಯಿತು ಎಂಬುದರ ಕುರಿತು ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ಕಟ್ಟಡ ಮಾಲಕರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೆಚ್ಚುವರಿ ಡಿಸಿಪಿ ಹೇಳಿದರು. ಪೊಲೀಸರಿಗೆ ಎಲ್ಲ ಮಾಹಿತಿ ಇದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಂದಹಾಗೆ, 75 ಹಾಸಿಗೆಗಳ ಪಿಜಿ ಕಟ್ಟಡ ಮಧ್ಯಾಹ್ನ 1:30ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದ ಮಾಲಕರು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದಾರೆ. ಸ್ಥಳೀಯ ವಿಚಾರಣೆಯಿಂದ, ಇದು 40-50 ವರ್ಷ ಹಳೆಯ ಕಟ್ಟಡವಾಗಿದ್ದು, ಒಂದು ನೆಲಮಾಳಿಗೆ ಮತ್ತು ಐದು ಮೇಲಿನ ಮಹಡಿಗಳನ್ನು ಒಳಗೊಂಡಿತ್ತು. ಇದನ್ನು ಪಿಜಿ ವಸತಿ ಸೌಕರ್ಯವಾಗಿ ಬಳಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ನಡೆದಾಗ ನೆಲಮಾಳಿಗೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.