ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Thunderstorms: ಭಾರೀ ಸಿಡಿಲು ಮಳೆಗೆ ಯುಪಿ, ಬಿಹಾರದಲ್ಲಿ ಸುಮಾರು 50 ಮಂದಿ ಬಲಿ

ಭಾರಿ ಸಿಡಿಲು ಮಳೆಯಿಂದಾಗಿ (Rain) ಬಿಹಾರ (Thunderstorms) ಮತ್ತು ಉತ್ತರ ಪ್ರದೇಶದಾದ್ಯಂತ ಗುರುವಾರ ಸುಮಾರು 47 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಗುರುವಾರ ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದ್ದು, ಸುಮಾರು 25 ಜನರು ಬಲಿಯಾಗಿದ್ದಾರೆ.

ಭಾರೀ ಸಿಡಿಲು ಮಳೆಗೆ ಸುಮಾರು 50 ಮಂದಿ ಬಲಿ

ಪಟನಾ: ಭಾರಿ ಸಿಡಿಲು ಮಳೆಯಿಂದಾಗಿ (Rain News) ಬಿಹಾರ (Bihar) ಮತ್ತು ಉತ್ತರ ಪ್ರದೇಶದಾದ್ಯಂತಗುರುವಾರ ಸುಮಾರು 47 ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಗುರುವಾರ ಸಿಡಿಲು (Thunderstorms) ಸಹಿತ ಆಲಿಕಲ್ಲು ಮಳೆಯಾಗಿದ್ದು, ಸುಮಾರು 25 ಜನರು ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಲ್ಲಿ ಭಾರೀ ಮಳೆ, ಭೀಕರ ಗಾಳಿ, ಆಲಿಕಲ್ಲು ಸಹಿತ ಮಳೆ (Hailstorms), ಸಿಡಿಲು ವ್ಯಾಪಕ ವಿನಾಶಕ್ಕೆ ಕಾರಣವಾಗಿದೆ. ಅನೇಕ ಭಾಗಗಲ್ಲಿ ಆಸ್ತಿ, ಬೆಳೆ ನಷ್ಟವಾಗಿದ್ದು, ಜಾನುವಾರುಗಳು ಸಾವನ್ನಪ್ಪಿವೆ. ಇದಕ್ಕೆ ತುರ್ತಾಗಿ ಸ್ಪಂದಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್(Nithish Kumar) ಸಂತಾಪ ಸೂಚಿಸಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು.

ಬಿಹಾರ ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ ನಳಂದಾದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಸಿವಾನ್‌ನಲ್ಲಿ ಇಬ್ಬರು, ಕತಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬುಧವಾರ ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು 13 ಮಂದಿ ಸಾವನ್ನಪ್ಪಿದ್ದಾರೆ.

bihar (1)

ಜಿಲ್ಲೆಯಾದ್ಯಂತ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದು, ತೆರವು ಕಾರ್ಯಾಚರಣೆ, ಹಾನಿಯ ಮೌಲ್ಯಮಾಪನಗಳಿಗೆ ಸಹಾಯ ಮಾಡಲು ಪೀಡಿತ ಪ್ರದೇಶಗಳಲ್ಲಿ 42 ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Pre Wedding Photoshoot : ಉಡುಪಿ ಕೃಷ್ಣ ಮಠ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೊಶೂಟ್ ನಿಷೇಧ

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ರಾಜ್ಯಾದ್ಯಂತ ಮಳೆ ಸಂಬಂಧಿತ ಘಟನೆಗಳಲ್ಲಿ 50 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.



ಬಿಹಾರದಲ್ಲಿ ಬಿರುಗಾಳಿ, ಮಳೆ, ಸಿಡಿಲು, ಮರ ಮತ್ತು ಗೋಡೆ ಕುಸಿದು 50 ಕ್ಕೂ ಹೆಚ್ಚು ಜನರ ದುರಂತ ಸಾವುಗಳಿಂದ ನಾನು ತೀವ್ರವಾಗಿ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ವಿಪತ್ತಿನಿಂದ ಹಾನಿಗೊಳಗಾದ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿಎಂದು ಅವರು ಬರೆದಿದ್ದಾರೆ.



ಭಾರತೀಯ ಹವಾಮಾನ ಇಲಾಖೆ ದರ್ಭಾಂಗ, ಪೂರ್ವ ಚಂಪಾರಣ್, ಗೋಪಾಲ್‌ಗಂಜ್, ಪಶ್ಚಿಮ ಚಂಪಾರಣ್, ಕಿಶನ್‌ಗಂಜ್, ಅರಾರಿಯಾ, ಸುಪೌಲ್, ಗಯಾ, ಸಿತಾಮರ್ಹಿ, ಶೆಯೋಹರ್, ನಳಂದಾ, ನಾವಡಾ ಮತ್ತು ಪಾಟ್ನಾ ಸೇರಿದಂತೆ ಹಲವಾರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ನೀಡಿದೆ. ಈ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ನಡುವೆ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯು ಬಿರುಗಾಳಿಯಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಮನೆಯೊಳಗೆ ಇರಬೇಕು. ತುರ್ತು ಸೇವೆಗಳು ಇದ್ದರೂ ಹೆಚ್ಚಿನ ಎಚ್ಚರಿಕೆಯನ್ನು ಜನರು ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.