ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tirupati Theft: ತಿರುಪತಿ ದೇವಸ್ಥಾನದಿಂದ 100 ಕೋಟಿ ರೂ. ಕಳ್ಳತನ ಆಗಿತ್ತಾ?

ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಕಾಣಿಕೆ ಹುಂಡಿಯಿಂದ 100 ಕೋಟಿ ರೂ. ಗೂ ಹೆಚ್ಚಿನ ಹಣ ಕಳ್ಳತನವಾಗಿದೆ ಎಂದು ಟಿಟಿಡಿ ಸದಸ್ಯರೂ ಆಗಿರುವ ಬಿಜೆಪಿ ನಾಯಕ ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದು, ಇದಕ್ಕೆ ದಾಖಲೆಯಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ತಿರುಪತಿ: ಜಗನ್ ಮೋಹನ್ ರೆಡ್ಡಿ ( Jagan Mohan Reddy) ನೇತೃತ್ವದಲ್ಲಿ ವೈಎಸ್ಆರ್ ಕಾಂಗ್ರೆಸ್ (YSR Congress) ಆಡಳಿತ ನಡೆಸುತ್ತಿದ್ದಾಗ ತಿರುಪತಿ ದೇವಸ್ಥಾನದ (Tirupati temple) ಕಾಣಿಕೆ ಹುಂಡಿಯಿಂದ 100 ಕೋಟಿ ರೂ. ಗೂ ಹೆಚ್ಚು ಹಣ ಕಳ್ಳತನವಾಗಿದೆ (Tirupati Theft) ಎಂದು ಟಿಟಿಡಿ (TTD) ಸದಸ್ಯ, ಬಿಜೆಪಿ ನಾಯಕ ಭಾನು ಪ್ರಕಾಶ್ ರೆಡ್ಡಿ (BJP leader Bhanu Prakash Reddy) ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ. ತಿರುಪತಿ ದೇವಸ್ಥಾನದ ಹುಂಡಿಯಿಂದ ಹಲವಾರು ವೈಎಸ್ಆರ್ ಸಿಪಿ ನಾಯಕರು ಮತ್ತು ಅಧಿಕಾರಿಗಳು ಅಪಾರ ಹಣ ಲೂಟಿ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾನು ಪ್ರಕಾಶ್ ರೆಡ್ಡಿ, ವೈಎಸ್ಆರ್ ಜಗನ್ ಮೋಹನ್ ರೆಡ್ಡಿ ಅಧಿಕಾರದಲ್ಲಿದ್ದಾಗ ತಿರುಪತಿ ದೇವಸ್ಥಾನದ ದೇಣಿಗೆ ಪೆಟ್ಟಿಗೆಯಿಂದ 100 ಕೋಟಿ ರೂ. ಗೂ ಹೆಚ್ಚು ಕಳ್ಳತನವಾಗಿದೆ. ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ದೇಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ದೂರಿದ್ದಾರೆ.

ದೇವಸ್ಥಾನದ ಹುಂಡಿಯಿಂದ ಲೂಟಿ ಮಾಡಿದ ಹಣದಿಂದಲೇ ಕೋಟ್ಯಂತರ ರೂಪಾಯಿಗಳನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ತಾಡೇಪಲ್ಲಿ ಮನೆಗೆ ಕಳುಹಿಸಲಾಗಿದೆ ಮತ್ತು ಹಗರಣದ ಅನಂತರ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ. 2019 ರಿಂದ 2024 ರವರೆಗೆ ನಡೆದ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ 100 ಕೋಟಿ ರೂಪಾಯಿಗಳ ಕಳ್ಳತನವು ಅತ್ಯಂತ ದೊಡ್ಡ ಲೂಟಿ ಎಂದು ಅವರು ಹೇಳಿದ್ದಾರೆ.



ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸಿಸಿಟಿವಿ ದೃಶ್ಯಗಳನ್ನು ಎನ್‌ಡಿಎಗೆ ಸೇರಿದ ಟಿಡಿಪಿ ನಾಯಕ ನಾರಾ ಲೋಕೇಶ್ ಹಂಚಿಕೊಂಡಿದ್ದು, ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಭಕ್ತರು ತಮ್ಮ ಕಾಣಿಕೆಗಳನ್ನು ದೇಣಿಗೆ ಪೆಟ್ಟಿಗೆಗೆ ಹಾಕಿದರೆ ಅದನ್ನು ಲೂಟಿ ಮಾಡಲಾಗುತ್ತದೆ. ಈ ಪ್ರಕರಣವನ್ನು ಹೈಕೋರ್ಟ್ ಸಿಐಡಿಗೆ ವರ್ಗಾಯಿಸಿದೆ. ಒಂದು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನು ಹಂಚಿಕೊಂಡಿರುವ ರೆಡ್ಡಿ, ಟಿಟಿಡಿ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲು ಸಹ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Saudi-Pakistan: ಸೌದಿ- ಪಾಕಿಸ್ತಾನದ ಒಪ್ಪಂದ; ಭಾರತಕ್ಕಿದು ಎಚ್ಚರಿಕೆಯ ಗಂಟೆಯಾ?

ಲೋಕ ಅದಾಲತ್ ಈ ಪ್ರಕರಣವನ್ನು ಈ ಹಿಂದೆ ಇತ್ಯರ್ಥಪಡಿಸಲಾಗಿತ್ತು. ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮತ್ತು ಉನ್ನತ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ತಿರುಪತಿ ದೇವಸ್ಥಾನದ ಸಂಪತ್ತನ್ನು ಲೂಟಿ ಮಾಡಲು ಪ್ರಮುಖ ಪೊಲೀಸ್ ಅಧಿಕಾರಿಯೊಬ್ಬರು ಸಹಕರಿಸಿದ್ದಾರೆ. ಕದ್ದಿರುವ ಹಣವನ್ನು ಅಧಿಕಾರಿಗಳು ಮತ್ತು ನಾಯಕರು ಹಂಚಿಕೊಂಡಿದ್ದರು ಎಂದು ಅವರು ದೂರಿದರು. ಆಗ ಭೂಮನ ಕರುಣಾಕರ್ ರೆಡ್ಡಿ ಟಿಟಿಡಿ ಅಧ್ಯಕ್ಷರಾಗಿದ್ದು, ಇವರು ಉತ್ತರ ನೀಡುವಂತೆ ಬಿಜೆಪಿ ನಾಯಕ ಒತ್ತಾಯಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author