ಮತ್ತೊಂದು ಸೈಕ್ಲೋನ್; ನ.17ರಿಂದ 5 ದಿನ ಭಾರಿ ಮಳೆ ಸಂಭವ
Akvan cyclone: ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು, ನ,16ರ ಸಂಜೆಯ ವೇಳೆಗೆ ‘ಚಂಡಮಾರುತ’ವಾಗಿ ಬದಲಾಗುವ ಸಾಧ್ಯತೆಯಿದೆ. ನ.17ರಂದು ‘ತೀವ್ರ ಚಂಡಮಾರುತ’ವಾಗಿ ಮತ್ತು. ನ.19ರ ವೇಳೆಗೆ ‘ಅತಿ ತೀವ್ರ ಚಂಡಮಾರುತ’ವಾಗಿ ಬಲಗೊಳ್ಳುವ ಮುನ್ಸೂಚನೆ ಇದೆ.
cyclone File Photo -
ನವದೆಹಲಿ, ನ.16: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹೊಸ ವಾಯುಭಾರ ಕುಸಿತವು ಮಂಗಳವಾರದ ವೇಳೆಗೆ 'ಅಕ್ವಾನ್' (Akvan) ಎಂಬ ತೀವ್ರ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದಾಗಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಇದು ನ.17ರಿಂದ ನ.19ರ ಅವಧಿಯಲ್ಲಿ ತೀವ್ರ ಸ್ವರೂಪ ಪಡೆದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಪ.ಬಂಗಾಳ, ಒಡಿಶಾ, ಆಂಧ್ರಪ್ರದೇಶ, ಪುದುಚೇರಿ ಹಾಗೂ ತಮಿಳುನಾಡು ಕರಾವಳಿಗಳಲ್ಲಿ ಕಟ್ಟೆಚ್ಚರ ಸಾರಲಾಗಿದೆ. ಕೇವಲ ಮೂರು ವಾರಗಳ ಅಂತರದಲ್ಲಿ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಮೂರನೇ ಚಂಡಮಾರುತ ಇದಾಗಿದೆ.
ತಮಿಳುನಾಡಿನಲ್ಲಿ, ವಿಶೇಷವಾಗಿ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸಮುದ್ರವು ಪ್ರಕ್ಷುಬ್ಧವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಡಿಸೆಂಬರ್ 2ನೇ ವಾರ ಸಂಸತ್ತಿನ ಚಳಿಗಾಲದ ಅಧಿವೇಶನ; ಕ್ಷೇತ್ರ ಮರುವಿಂಗಡಣೆ ಮಸೂದೆಯತ್ತ ಗಮನ
ಒಡಿಶಾದಲ್ಲಿ, ಸಂಭವನೀಯ ಪ್ರವಾಹ ಪರಿಸ್ಥಿತಿಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ತನ್ನ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು, ನ,16ರ ಸಂಜೆಯ ವೇಳೆಗೆ ‘ಚಂಡಮಾರುತ’ವಾಗಿ ಬದಲಾಗುವ ಸಾಧ್ಯತೆಯಿದೆ. ನ.17ರಂದು ‘ತೀವ್ರ ಚಂಡಮಾರುತ’ವಾಗಿ ಮತ್ತು. ನ.19ರ ವೇಳೆಗೆ ‘ಅತಿ ತೀವ್ರ ಚಂಡಮಾರುತ’ವಾಗಿ ಬಲಗೊಳ್ಳುವ ಮುನ್ಸೂಚನೆ ಇದೆ. ಆಂಧ್ರ ಕರಾವಳಿಗೆ ಇದು 19ರ ಸುಮಾರಿಗೆ ಅಪ್ಪಳಿಸುವ ಸಾಧ್ಯತೆ ಇದೆ. ನ,19ರಿಂದ 21ರವರೆಗೆ ಮಳೆ ತೀವ್ರ ಸ್ವರೂಪಿಯಾಗಿರಲಿದೆ ಎಂದು ಹವಾಮಾನ ಮೂಲಗಳು ಹೇಳಿವೆ.
ರಾಜ್ಯದಲ್ಲಿ ತೀವ್ರಗೊಂಡ ಚಳಿ
ರಾಜ್ಯದಲ್ಲಿ ಒಣಹವೆ ಮುಂದುವರಿಯುತ್ತಿದ್ದು, ಚಳಿ ಪ್ರಾರಂಭವಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದೆ. ಮುಂಜಾನೆ ಮಂಜು ಕವಿದ ವಾತಾವರಣ ಕಂಡುಬಂದಿತು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದಿದೆ.
ಬೆಂಗಳೂರು ನಗರದಲ್ಲಿ ಮಂಗಳವಾರ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಗರಿಷ್ಠ ತಾಪಮಾನ 27°C ಹಾಗೂ ಕನಿಷ್ಠ ತಾಪಮಾನ 18°C ದಾಖಲಾಗುವ ನಿರೀಕ್ಷೆಯಿದೆ.