ವಿಕಸಿತ ಭಾರತ ನಿರ್ಮಿಸುವ ಸಂಕಲ್ಪ; ಶಕ್ತಿ, ಉತ್ಸಾಹ ತುಂಬಲು ಪ್ರಧಾನಿ ಮೋದಿ ಕರೆ
ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಗಣರಾಜ್ಯೋತ್ಸವದ ಶುಭಾಯಶಗಳನ್ನು ಹಾರೈಸಿ ವಿಕಸಿತ ಭಾರತ ನಿರ್ಮಿಸುವ ಸಾಮೂಹಿಕ ಸಂಕಲ್ಪಕ್ಕೆ ಶಕ್ತಿ, ಉತ್ಸಾಹ ತುಂಬುವಂತೆ ಕರೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಅವರು ಸಂದೇಶವನ್ನು ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಜನತೆಗೆ ಗಣರಾಜ್ಯೋತ್ಸವದ ಶುಭ ಹಾರೈಸಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ವಿಕಸಿತ ಭಾರತದ ಸಾಮೂಹಿಕ ನವೀಕೃತ ಶಕ್ತಿ ಮತ್ತು ಉತ್ಸಾಹವನ್ನು ತುಂಬುವಂತೆ ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಈ ಕುರಿತುಅವರು ತಮ್ಮ ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಯಶಗಳನ್ನು ಹಾರೈಸಿ, ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಸೇರಿಸಿ ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದ ಅತಿಥಿಗಳಾದ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷೆ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಕರ್ತವ್ಯ ಪಥದಲ್ಲಿ ನಡೆಯಲಿರುವ ಭವ್ಯ ಆಚರಣೆಗೂ ಮೊದಲು ಭಾನುವಾರ ದೂರದರ್ಶನದ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಬಜೆಟ್ 2026: ಇಂಗ್ಲಿಷ್‌ನಿಂದ ಹಿಂದಿಗೆ, 1955ರಲ್ಲಿ ಬಜೆಟ್ ಹೇಗೆ ಬದಲಾಯಿತು? ಇಲ್ಲಿದೆ ಮಾಹಿತಿ
Best wishes on Republic Day.
— Narendra Modi (@narendramodi) January 26, 2026
May this occasion add renewed energy and enthusiasm in our collective resolve to build a Viksit Bharat.
ವಿಕಸಿತ ಭಾರತ ನಿರ್ಮಾದಲ್ಲಿ ಮಹಿಳೆಯರ ಪಾತ್ರವನ್ನು ಶ್ಲಾಘಿಸಿದ ಮುರ್ಮು, ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ ವಿಶ್ವದಲ್ಲೇ ಭಾರತದ ಆರ್ಥಿಕತೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದ ಆರ್ಥಿಕ ಭವಿಷ್ಯವು ಸ್ವಾವಲಂಬನೆಯಿಂದ ರೂಪುಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯತ್ತ ದೇಶ ಸಾಗುತ್ತಿದೆ ಎಂದು ಅವರು ತಿಳಿಸಿದರು.
Republic Day 2026: ವಂದೇ ಮಾತರಂ ಗೀತೆಯ ಐತಿಹಾಸಿಕ ಮಹತ್ವ ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮಹಿಳಾ ಕ್ರಿಕೆಟ್ ತಂಡ, ಸ್ವಸಹಾಯ ಗುಂಪುಗಳು, ಕೃಷಿ, ಬಾಹ್ಯಾಕಾಶ, ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಾಧನೆಗಳ ಬಗ್ಗೆ ಉಲ್ಲೇಖಿಸಿದ ಅವರು, ದೇಶದ ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದ್ದಾರೆ ಎಂದರು.
ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮುರಿದು ಮಹಿಳೆಯರು ಮುನ್ನಡೆ ಸಾಧಿಸುತ್ತಿದ್ದಾರೆ. ದೇಶದ ಒಟ್ಟಾರೆ ಅಭಿವೃದ್ಧಿಗೆ ತಮ್ಮ ಸಕ್ರಿಯ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು, ಪಂಚಾಯತ್ ರಾಜ್ ಗಳಲ್ಲೂ ಮಹಿಳಾ ಪ್ರಾತಿನಿಧ್ಯವು ಹೆಚ್ಚಾಗಿರುವುದನ್ನು ಉಲ್ಲೇಖಿಸಿದರು.