ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಉಗ್ರರ ದಾಳಿಗೆ ತಿರುಗೇಟು ನೀಡುತ್ತಾ ಭಾರತ? ಕೆಲವೇ ಕ್ಷಣಗಳಲ್ಲಿ ಮೋದಿ ಹೈವೋಲ್ಟೇಜ್‌ ಮೀಟಿಂಗ್‌

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜೀವಗಳನ್ನು ಬಲಿ ಪಡೆದ ಆಘಾತಕಾರಿ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಶೀಘ್ರದಲ್ಲೇ ಭದ್ರತಾ ಸಂಪುಟ ಸಮಿತಿ ಅಥವಾ ಸಿಸಿಎಸ್ ಸಭೆ ಸೇರಲಿದೆ.

ಕೆಲವೇ ಕ್ಷಣಗಳಲ್ಲಿ ಮೋದಿ ನಿವಾಸದಲ್ಲಿ ಹೈವೋಲ್ಟೇಜ್‌ ಮೀಟಿಂಗ್‌

Profile Vishakha Bhat Apr 23, 2025 6:57 PM

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜೀವಗಳನ್ನು ಬಲಿ ಪಡೆದ ಆಘಾತಕಾರಿ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಿವಾಸದಲ್ಲಿ ಶೀಘ್ರದಲ್ಲೇ ಭದ್ರತಾ ಸಂಪುಟ ಸಮಿತಿ ಅಥವಾ ಸಿಸಿಎಸ್ ಸಭೆ ಸೇರಲಿದೆ. ನಿನ್ನೆ ಘಟನೆ ನಡೆದ ತಕ್ಷಣ ಪ್ರಧಾನಿಯವರ ಸೂಚನೆ ಮೇರೆಗೆ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀನಗರಕ್ಕೆ ತಲುಪಿದ್ದರು. ಇದೀಗ ಅವರು ದೆಹಲಿಗೆ ವಾಪಾಸಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಪ್ರಧಾನಿಯವರ ನಿವಾಸಕ್ಕೆ ತಲುಪಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಪಾಕಿಸ್ತಾನದ ಹೆಸರನ್ನು ಹೇಳದೆ, "ಭಾರತ ಸರ್ಕಾರವು ಅಗತ್ಯ ಮತ್ತು ಸೂಕ್ತವಾದ ಪ್ರತಿಯೊಂದು ಹೆಜ್ಜೆಯನ್ನು ತೆಗೆದುಕೊಳ್ಳುತ್ತದೆ. ಈ ಘಟನೆಯನ್ನು ನಡೆಸಿದವರನ್ನು ನಾವು ಸುಮ್ಮನೇ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ಇಂದು ಬೆಳಿಗ್ಗೆ ದೆಹಲಿಗೆ ಮರಳಿದ್ದಾರೆ. ದಾಳಿಯನ್ನು ಖಂಡಿಸಿ, ತಪ್ಪಿತಸ್ಥರನ್ನು ಶಿಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಉರಿ ಮತ್ತು ಪುಲ್ವಾಮಾ ದಾಳಿಯ ನಂತರ ಭಾರತವು ಈಗಾಗಲೇ ಎರಡು ಸರ್ಜಿಕಲ್ ಸ್ಟ್ರೈಕ್ ಮತ್ತು ನಿಯಂತ್ರಣ ರೇಖೆಯಾಚೆಗಿನ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿಗಳನ್ನು ನಡೆಸಿ ಉಗ್ರರಿಗೆ ಪ್ರತ್ಯುತ್ತರ ನೀಡಿದೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Amit Shah) ಭಯೋತ್ಪಾದಕ ದಾಳಿ ನಡೆದಿದ್ದು, ಈ ವರೆಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀನಗರಕ್ಕೆ ತೆರಳಿದ್ದರು. ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ: Robert Vadra: "ಮುಸ್ಲಿಮರಿಗೆ ದುರ್ಬಲ ಅನ್ನೋ ಭಾವನೆ ಇದೆ"; ಪಹಲ್ಗಾಮ್‌ ದಾಳಿ ಕುರಿತು ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ ಅಳಿಯ

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರನ್ನು ಬೇಟೆಯಾಡುವುದಾಗಿ ಅವರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.