ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tahawwur Rana: ತಹವ್ವುರ್ ರಾಣಾ ಭಾರತಕ್ಕೆ ಬರಲು ಕ್ಷಣಗಣನೆ; ಏರ್ಪೋರ್ಟ್‌ನಲ್ಲಿ ಬುಲೆಟ್‌ ಫ್ರೂಪ್‌ ಕಾರು, ಕಮಾಂಡೋಗಳು ಸಜ್ಜು

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಎನ್‌ಐಎ ಅಧಿಕಾರಿಗಳು ಆತನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಣಾ ಭಾರತಕ್ಕೆ ಆಗಮಿಸಲಿದ್ದಾನೆ. ಮುಖ್ಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತದೆ

ತಹವ್ವುರ್ ರಾಣಾ ಭಾರತಕ್ಕೆ ಬರಲು ಕ್ಷಣಗಣನೆ

Profile Vishakha Bhat Apr 10, 2025 12:43 PM

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಹವ್ವುರ್ ಹುಸೇನ್ ರಾಣಾನನ್ನು (Tahawwur Rana) ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ. ಎನ್‌ಐಎ ಅಧಿಕಾರಿಗಳು ಆತನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಣಾ ಭಾರತಕ್ಕೆ ಆಗಮಿಸಲಿದ್ದಾನೆ. ಮುಖ್ಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತದೆ. ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ ರಾಣಾ ಇಂದು ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾನೆ. ಅಲ್ಲಿಂದ ಆತನನ್ನು ವಿಶೇಷವಾದ ಬುಲೆಟ್‌ ಫ್ರೂಪ್‌ ವಾಹನದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಧಾನ ಕಚೇರಿಗೆ ಕರೆದೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸ್ ವಿಶೇಷ ಘಟಕವನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದ್ದು, SWAT (ವಿಶೇಷ ಶಸ್ತ್ರಾಸ್ತ್ರಗಳು ಮತ್ತು ತಂತ್ರಗಳು) ಕಮಾಂಡೋಗಳನ್ನು ಈಗಾಗಲೇ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿದೆ. ಬುಲೆಟ್‌ ಫ್ರೂಪ್‌ ವಾಹನದೊಂದಿಗೆ ಬೆಂಗಾವಲು ಪಡೆ ಆತನನ್ನು ಹಿಂಬಾಲಿಸಲಿವೆ. "ಮಾರ್ಕ್ಸ್‌ಮನ್" ವಾಹನವನ್ನು ಸಹ ಸಿದ್ಧವಾಗಿ ಇರಿಸಲಾಗಿದೆ. "ಮಾರ್ಕ್ಸ್‌ಮನ್" ವಾಹನವು ಅತ್ಯಂತ ಸುರಕ್ಷಿತ ಮತ್ತು ಶಸ್ತ್ರಸಜ್ಜಿತ ಕಾರಾಗಿದ್ದು, ಯಾವುದೇ ರೀತಿಯ ದಾಳಿಯನ್ನು ತಡೆದುಕೊಳ್ಳಬಲ್ಲದು. ನ್ಯಾಯಾಲಯದ ಮುಂದೆ ವರ್ಚುವಲ್ ಮೂಲಕ ಹಾಜರುಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುತ್ತದೆ. ರಾಣಾನನ್ನು ತಿಹಾರ್ ಜೈಲಿನಲ್ಲಿರುವ ಹೈ ಸೆಕ್ಯುರಿಟಿ ವಾರ್ಡ್‌ನಲ್ಲಿ ಇರಿಸಲಾಗುವುದು.

26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾ, ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದಾನೆ. ಈತ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆಯಾಗಿದ್ದಾನೆ. 2008 ರಲ್ಲಿ ಮುಂಬೈನ ತಾಜ್‌ ಹೋಟೆಲ್‌ ಮೇಲೆ ನಡೆದ ದಾಳಿಯಲ್ಲಿ 166 ಜನ ಅಮಾಯಕರು ಜೀವ ಬಿಟ್ಟಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪವನ್ನು ಹೊತ್ತಿದ್ದಾನೆ. ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳಲ್ಲಿ ಒಬ್ಬನಾಗಿದ್ದ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Tahawwur Rana : ತಹವ್ವುರ್ ರಾಣಾ ಗಡಿಪಾರಿನ ಹಿಂದಿರೋ ಮಾಸ್ಟರ್‌ ಮೈಂಡ್‌ ಯಾರು ಗೊತ್ತಾ? ಅವ್ರ ಹೆಸ್ರು ಕೇಳಿದ್ರೆ ಪಾಕ್‌ ಫುಲ್‌ ಗಡ ಗಡ!

2024ರಲ್ಲಿಯೇ ಭಾರತಕ್ಕೆ ತಹವ್ವುರ್ ಹುಸೇನ್ ರಾಣಾನನ್ನು ಹಸ್ತಾಂತರ ಮಾಡಲಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ ಈ ಪ್ರಕ್ರಿಯೆಗಳನ್ನು ಕೈಗೊಳ್ಳಲು ಅಮೆರಿಕ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿರಲಿಲ್ಲ. ಸೆಪ್ಟೆಂಬರ್‌ನಲ್ಲಿ ಗಡಿಪಾರು ಮಾಡದಂತೆ ಕೋರಿ ತಹವ್ವುರ್ ಹುಸೇನ್ ರಾಣಾ ಸಲ್ಲಿಕೆ ಮಾಡಿದ್ದ ಮನವಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹಸ್ತಾಂತರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಲು ಅವಕಾಶವಿದೆ ಎಂದು ಹೇಳಿತ್ತು.