Ambedkar Jayanti 2025: ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು: ಸಮಾನತೆಯ ಹರಿಕಾರ ಅಂಬೇಡ್ಕರ್ ನುಡಿಮುತ್ತು
Dr Bhimrao Ambedkar: ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ, ಹೊಸ ಭಾರತದ ನಿರ್ಮಾತೃ, ದೇಶ ಕಂಡ ಮಹಾನ್ ಚೇತನ ಡಾ. ಅಂಬೇಡ್ಕರ್ ಅವರ ಜನ್ಮ ದಿನ ಇಂದು (ಏ. 14). ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬದುಕೇ ಎಲ್ಲರಿಗೂ ಸ್ಫೂರ್ತಿ. ದೇಶ ಕಂಡ ಈ ಮಹಾನ್ ನಾಯಕರ ಅದ್ಭುತ ಸಂದೇಶಗಳು ಇಲ್ಲಿವೆ.

ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್.

ಹೊಸದಿಲ್ಲಿ: ಭಾರತದ ಸಂವಿಧಾನ ಶಿಲ್ಪಿ(Father of the Indian Constitution) ಡಾ. ಭೀಮರಾವ್ ರಾಮ್ (Dr Bhimrao Ambedkar) ಅಂಬೇಡ್ಕರ್ ಜಯಂತಿ (Ambedkar Jayanti)ಯನ್ನು ಪ್ರತಿ ವರ್ಷ ಏ. 14ರಂದು ಭಾರತದಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಭಾರತದ ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.
ಅನ್ಯಾಯ, ಶೋಷಣೆ, ಅಸ್ಪೃಶ್ಯತೆ ಮೊದಲಾದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದ ಹಾಗೂ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದು, ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಕರ್ತೃ ಹಾಗೂ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿದೀಪ.
ಅಂಬೇಡ್ಕರ್ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆಯಲ್ಲಿ ರಾಮ್‌ಜಿ ಸಕ್ಪಾಲ್ ಹಾಗೂ ಭೀಮಬಾಯಿ ದಂಪತಿಯ 14ನೇ ಮಗನಾಗಿ 1891ರ ಏ. 14ರಂದು ಜನಿಸಿದರು. ಅದು ಅಸ್ಪೃಶ್ಯತೆ ಬಲವಾಗಿ ಬೇರೂರಿದ್ದ ಕಾಲ. ಹೀಗಾಗಿ ಬಾಲ್ಯದಲ್ಲಿ ಅಂಬೇಡ್ಕರ್ ಅವರು ಬಹಳ ಕಷ್ಟದ ದಿನಗಳನ್ನು ಕಂಡಿದ್ದರು. ಆದರೆ ತಮ್ಮ ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅದ್ಭುತ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಅವರು. ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಈ ಮಹಾನ್ ನಾಯಕರ ಕೊಡುಗೆಯನ್ನು ಸ್ಮರಿಸಲು ಏ. 14ರಂದು ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ.
ಹೀಗೆ ಛಲದಿಂದ ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅಪೂರ್ವ ನಾಯಕರಲ್ಲಿ ಒಬ್ಬರಾದರು. ಅದೆಷ್ಟೋ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದರು, ಸಂವಿಧಾನ ಶಿಲ್ಪಿಯಾಗಿ ರೂಪುಗೊಂಡಿದ್ದರು. ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ. ಈ ಪವಿತ್ರ ಗ್ರಂಥದ ಗಂಧದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್. ಅವರ ಜಯಂತಿಯಾದ ಈ ದಿನದಂದು ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನೀಡಿದ ಸ್ಫೂರ್ತಿದಾಯಕ ಮಾತುಗಳು ಇಲ್ಲಿವೆ.
ಅಂಬೇಡ್ಕರ್ ಅವರ ಸ್ಫೂರ್ತಿದಾಯಕ ಮಾತುಗಳು
* ಸಂವಿಧಾನದ ದುರ್ಬಳಕೆಯಾಗುತ್ತಿದೆ ಎಂದು ಗೊತ್ತಾದರೆ ಅದನ್ನು ಸುಡುವ ಮೊದಲಿಗ ನಾನಾಗಿರುತ್ತೇನೆ.
* ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಕಲಿಸುವ ಧರ್ಮ ನನಗೆ ಇಷ್ಟ.
* ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯವೊಂದರ ಪ್ರಗತಿಯನ್ನು ಅಳೆಯುತ್ತೇನೆ.
* ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು.
* ಕಾನೂನು ಮತ್ತು ಸುವ್ಯವಸ್ಥೆ ರಾಜಕೀಯ ದೇಹಕ್ಕೆ ಔಷಧ ಇದ್ದಂತೆ. ರಾಜಕೀಯ ದೇಹ ಅನಾರೋಗ್ಯಕ್ಕೊಳಗಾದರೆ ಖಂಡಿತವಾಗಿಯೂ ಔಷಧಿ ನೀಡಬೇಕಾಗುತ್ತದೆ.
* ಇತಿಹಾಸವನ್ನು ಮರೆತವರು ಇತಿಹಾಸ ನಿರ್ಮಿಸಲಾರರು.
* ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ ಅದನ್ನು ಅನುಷ್ಠಾನಕ್ಕೆ ತರುವವರು ಒಳ್ಳೆಯವರಲ್ಲದಿದ್ದರೆ ಪ್ರಬಲ ಸಂವಿಧಾನವೂ ದುರ್ಬಲ ಎನಿಸಿಕೊಳ್ಳುತ್ತದೆ. ಸಂವಿಧಾನವನ್ನು ಜಾರಿಗೆ ತರುವವರು ಉತ್ತಮರಾಗಿದ್ದರೆ ದುರ್ಬಲ ಸಂವಿಧಾನವೂ ಒಳ್ಳೆಯ ಸಂವಿಧಾನ ಎನಿಸಿಕೊಳ್ಳುತ್ತದೆ.
* ಎಲ್ಲಿಯ ತನಕ ನೀವು ಸಾಮಾಜಿಕ ಸ್ವಾತಂತ್ರ್ಯವನ್ನು ಸಾಧಿಸುವುದಿಲ್ಲವೋ, ಅಲ್ಲಿಯ ತನಕ ಕಾನೂನು ಒದಗಿಸುವ ಯಾವುದೇ ಸ್ವಾತಂತ್ರ್ಯವನ್ನು ಪಡೆದರೂ ಅದರ ಪ್ರಯೋಜನ ಬರುವುದಿಲ್ಲ
* ಒಬ್ಬ ಮಹಾನ್ ವ್ಯಕ್ತಿ ಒಬ್ಬ ಪ್ರಸಿದ್ಧ ವ್ಯಕ್ತಿಯಿಂದ ಭಿನ್ನವಾಗಿರುತ್ತಾನೆ. ಯಾಕೆಂದರೆ, ಅವನು ಸಮಾಜದ ಸೇವಕನಾಗಲು ಸಿದ್ಧನಾಗಿರುತ್ತಾನೆ
* ಮನಸ್ಸನ್ನು ಬೆಳೆಸುವುದು ಮಾನವ ಅಸ್ತಿತ್ವದ ಅಂತಿಮ ಗುರಿಯಾಗಬೇಕು