ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: "ನಿಜವಾದ ಭಾರತೀಯ ಹೀಗೆ ಹೇಳುವುದಿಲ್ಲ"; ರಾಹುಲ್‌ ಗಾಂಧಿ ಹೇಳಿಕೆಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್‌

ಭಾರತದ 2,000 ಕಿಲೋಮೀಟರ್‌ಗಿಂತಲೂ ಹೆಚ್ಚು ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಸೋಮವಾರ ಸುಪ್ರೀಂ ಕೋರ್ಟ್ (Supreme Court) ಛೀಮಾರಿ ಹಾಕಿದ್ದು, "ನಿಜವಾದ ಭಾರತೀಯ" ಅಂತಹ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹೇಳಿದೆ.

ನವದೆಹಲಿ: ಭಾರತದ 2,000 ಕಿಲೋಮೀಟರ್‌ಗಿಂತಲೂ ಹೆಚ್ಚು ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಹೇಳಿಕೆಗೆ ಸೋಮವಾರ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು, "ನಿಜವಾದ ಭಾರತೀಯ" ಅಂತಹ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹೇಳಿದೆ. ಆದಾಗ್ಯೂ, ಈ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. 2023 ರ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ, ಕಾಂಗ್ರೆಸ್ ನಾಯಕ, ಮಾಜಿ ಸೇನಾ ಅಧಿಕಾರಿಯೊಬ್ಬರು ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಹೇಳಿಕೆ ನೀಡಿದ್ದರು.

ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ, "2,000 ಕಿ.ಮೀ. ಪ್ರದೇಶವನ್ನು ಚೀನೀಯರು ವಶಪಡಿಸಿಕೊಂಡಿದ್ದಾರೆಂದು ನಿಮಗೆ ಹೇಗೆ ಗೊತ್ತಾಯಿತು?" ಎಂದು ಸುಪ್ರೀಂ ಕೋರ್ಟ್ ಕೇಳಿತು. "ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಅದನ್ನು ಹೇಳುತ್ತಿರಲಿಲ್ಲ". ಇಂತಹ ಸೂಕ್ಷ್ಮ ವಿಚಾರವನ್ನು ಹೇಳುವಾಗ ಮಾಹಿತಿ ಇಲ್ಲದೆ ಹೇಳಬೇಡಿ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಹೇಳಿಕೆಯನ್ನು ಖಂಡಿಸಿ, "ನೀವು ವಿರೋಧ ಪಕ್ಷದ ನಾಯಕರಾಗಿರುವಾಗ, ಈ ರೀತಿ ಏಕೆ ಹೇಳುತ್ತೀರಿ? ನೀವು ಸಂಸತ್ತಿನಲ್ಲಿ ಈ ಪ್ರಶ್ನೆಗಳನ್ನು ಏಕೆ ಕೇಳುವುದಿಲ್ಲ?" ಎಂದು ಪ್ರಶ್ನೆ ಮಾಡಿದೆ.

ಮೇ 29 ರಂದು ಅಲಹಾಬಾದ್ ಹೈಕೋರ್ಟ್ ಸಮನ್ಸ್ ಆದೇಶ ಮತ್ತು ಕ್ರಿಮಿನಲ್ ದೂರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನಂತರ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ಈ ಪ್ರಕರಣವು ರಾಜಕೀಯ ಪ್ರೇರಿತವಾಗಿದ್ದು, ದುರುದ್ದೇಶಪೂರಿತ ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಅವರು ವಾದಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ವಾಕ್ ಸ್ವಾತಂತ್ರ್ಯವು ಸೇನೆಯನ್ನು ಮಾನಹಾನಿ ಮಾಡುವವರೆಗೆ ಅಲ್ಲ ಎಂದು ಹೇಳಿದೆ. ದೂರುದಾರ, ಉದಯ್ ಶಂಕರ್ ಶ್ರೀವಾಸ್ತವ ಅವರು, ಡಿಸೆಂಬರ್ 2022 ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿಯವರು ಭಾರತೀಯ ಸೇನೆಯ ವಿರುದ್ಧ ಹಲವಾರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Rahul Gandhi: ಕೃಷಿ ಕಾನೂನು ಹೋರಾಟಕ್ಕೆ ಸಂಬಂಧಿಸಿದಂತೆ ಅರುಣ್‌ ಜೇಟ್ಲಿಯಿಂದ ನನಗೆ ಬೆದರಿಕೆ ಇತ್ತು; ರಾಹುಲ್‌ ಗಾಂಧಿ

ರಾಹುಲ್ ಗಾಂಧಿ ಹೇಳಿದ್ದೇನು?

2022 ರಲ್ಲಿ ರಾಜಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ರಾಹುಲ್ ಗಾಂಧಿ ಅವರು ಚೀನಾವು 2,000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ವಶಪಡಿಸಿಕೊಂಡು ಭಾರತೀಯ ಸೇನೆಯ ವಿರುದ್ಧ ಆಕ್ರಮಣ ನಡೆಸಿದ ಬಗ್ಗೆ ಮೌನವಾಗಿರುವುದಕ್ಕೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ವಶಪಡಿಸಿಕೊಂಡು, 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿದ ಬಗ್ಗೆ ಬಿಜೆಪಿ ಮೌನ ವಹಿಸಿದೆ ಎಂದು ಹೇಳಿದ್ದರು.