ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijay's Rally Stampede: ಕರೂರು ಕಾಲ್ತುಳಿತ ಪ್ರಕರಣ; ಟಿವಿಕೆ ನಾಯಕನ ಬಂಧನ

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ನಲವತ್ತೆಂಟು ಗಂಟೆಗಳ ನಂತರ, ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್ ಅವರನ್ನು ಬಂಧಿಸಿದ್ದು, ದುರಂತಕ್ಕೆ ಕಾರಣವಾದ ಲೋಪಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ.

ಚೆನ್ನೈ: ತಮಿಳುನಾಡಿನ (Tamilnadu) ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ್ಯಾಲಿಯಲ್ಲಿ (Vijay's Rally Stampede) ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ನಲವತ್ತೆಂಟು ಗಂಟೆಗಳ ನಂತರ, ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್ ಅವರನ್ನು ಬಂಧಿಸಿದ್ದು, ದುರಂತಕ್ಕೆ ಕಾರಣವಾದ ಲೋಪಗಳಿಗೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ.ಪೊಲೀಸರು ಈ ಹಿಂದೆ ಆತನ ವಿರುದ್ಧ ಕೊಲೆಯತ್ನ, ಕೊಲೆಗೆ ಸಮನಾಗದ ಅಪರಾಧಿಕ ನರಹತ್ಯೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಟಿವಿಕೆ ಪ್ರಧಾನ ಕಾರ್ಯದರ್ಶಿ ಬಸ್ಸಿ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ನಿರ್ಮಲ್ ಶೇಖರ್ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.

ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸಲ್ಲಿಸಲಾದ ಎಫ್‌ಐಆರ್ ಪ್ರಕಾರ, ಉದ್ದೇಶಪೂರ್ವಕ ಕೃತ್ಯಗಳಿಗೆ ವಿಜಯ್ ಅವರನ್ನೇ ಹೆಸರಿಸಲಾಗಿದೆ. ರಾಜಕೀಯ ಶಕ್ತಿಯನ್ನು ಪ್ರದರ್ಶಿಸಲು ಜಿಲ್ಲೆಗೆ ಬಂದ ನಂತರ ವಿಜಯ್ ಉದ್ದೇಶಪೂರ್ವಕವಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ರ್ಯಾಲಿಗೆ ತಡವಾಗಿ ಬಂದರು. ಜನರು ನಟರನ್ನು ನೋಡಲು ಮುಗಿಬಿದ್ದಿದ್ದಾರೆ. ಅಧಿಕಾರಿಗಳು ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಿ ವಿಜಯ್ ಅನುಮತಿಯಿಲ್ಲದೆ ರೋಡ್ ಶೋ ನಡೆಸಿದರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ "ಅನಗತ್ಯ ನಿರೀಕ್ಷೆಗಳನ್ನು" ಸೃಷ್ಟಿಸಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಟಿವಿಕೆಯ ಇತರ ಹಿರಿಯ ನಾಯಕರು ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅಧಿಕೃತ ಷರತ್ತುಗಳನ್ನು ಉಲ್ಲಂಘಿಸಿ ಟಿವಿಕೆ ವಿಜಯ್ ಅವರ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಆರೋಪಿಸಿ, ಸಂಚಾರ ಅಡಚಣೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಬಗ್ಗೆಯೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಟಿವಿಕೆ ನಾಯಕ ಆಧವ್ ಅರ್ಜುನ ಅವರು ಕಾಲ್ತುಳಿತದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡುವುದನ್ನು ತಡೆಯದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ಈ ಬಂಧನ ನಡೆದಿದೆ.

ಈ ಸುದ್ದಿಯನ್ನೂ ಓದಿ: Vijay's Rally Stampede: ವಿಜಯ್ ಪ್ರಚಾರ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ ಕಾರಣವಾಯಿತೇ ಸಾರ್ವಜನಿಕ ಆಕ್ರೋಶ?

ಅಷ್ಟೇ ಅಲ್ಲದೇ ಕಾರ್ಯಕ್ರಮಕ್ಕೂ ಮೊದಲು 10 ಸಾವಿರ ಜನರು ಸೇರುತ್ತಾರೆ ಎಂದು ಪಕ್ಷ ಹೇಳಿತ್ತು. ನಂತರ ಏಕಾಏಕಿ 30 ಸಾವಿರ ಜನರು ಸೇರಿದ್ದಾರೆ. ನಟ ತಡವಾಗಿ ಬಂದರಿಂದ ಅವರನ್ನು ನೋಡಲು ಏಕಾಏಕಿ ಜನರು ನುಗ್ಗಿದ್ದಾರೆ. ಒಂದೇ ಸಮನೆ ನೂಕಾಟ ತಳ್ಳಾಟಕ್ಕೆ ಕಾಲ್ತುಳಿತ ಸಂಭವಿಸಿದೆ. 10 ಮಕ್ಕಳು ಮತ್ತು 18 ಮಹಿಳೆಯರು ಸೇರಿದಂತೆ ಒಟ್ಟು 41 ಜನರು ಮೃತಪಟ್ಟಿದ್ದಾರೆ. ಈ ದುರಂತದಿಂದ ತಾವು "ದುಃಖಿತರಾಗಿದ್ದೇವೆ ಮತ್ತು ವಿವರಿಸಲಾಗದ ನೋವನ್ನು ಅನುಭವಿಸುತ್ತಿದ್ದೇವೆ" ಎಂದು ವಿಜಯ್ ಹೇಳಿದರು. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು, ಬದುಕುಳಿದವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.