ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೆಹಲಿ ಚಾವರಿ ಬಜಾರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಹಳೆ ದೆಹಲಿಯ ಅತ್ಯಂತ ಜನನಿಬಿಡ ಮಾರುಕಟ್ಟೆ ಪ್ರದೇಶವಾದ ಚಾವರಿ ಬಜಾರ್‌ನಲ್ಲಿ ಇಂದು (ನವೆಂಬರ್ 5) ಭೀಕರ ದುರಂತವೊಂದು ಸಂಭವಿಸಿದೆ. ಗಲಿ ಸಿತಾರಾದ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.

ದೆಹಲಿ ಚಾವರಿ ಬಜಾರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು

ದೆಹಲಿ ಚಾವರಿ ಬಜಾರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ -

Vishakha Bhat Heggar
Vishakha Bhat Heggar Nov 5, 2026 12:31 PM

ನವದೆಹಲಿ: ಹಳೆ ದೆಹಲಿಯ ಅತ್ಯಂತ ಜನನಿಬಿಡ ಮಾರುಕಟ್ಟೆ ಪ್ರದೇಶವಾದ ಚಾವರಿ ಬಜಾರ್‌ನಲ್ಲಿ ಇಂದು (ನವೆಂಬರ್ 5) ಭೀಕರ ದುರಂತವೊಂದು ಸಂಭವಿಸಿದೆ. ಗಲಿ ಸಿತಾರಾದ ನಿರ್ಮಾಣ (Building Collapses In Delhi) ಹಂತದಲ್ಲಿದ್ದ ಮೂರು ಅಂತಸ್ತಿನ ಹಳೆಯ ಕಟ್ಟಡವೊಂದು ದಿಢೀರನೆ ಕುಸಿದು ಬಿದ್ದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಸುಮಾರು 9:50 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕಟ್ಟಡ ಕುಸಿತದ ಬಗ್ಗೆ ತುರ್ತು ಕರೆ ಬಂದ ತಕ್ಷಣ, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕಟ್ಟಡದ ಅವಶೇಷಗಳಡಿಯಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಿ ಸಿತಾರಾ ಪ್ರದೇಶವು ಅತ್ಯಂತ ಕಿರಿದಾದ ಗಲ್ಲಿಗಳನ್ನು ಹೊಂದಿರುವ ಕಾರಣ, ಜೆಸಿಬಿ ಸೇರಿದಂತೆ ರಕ್ಷಣಾ ಉಪಕರಣಗಳನ್ನು ಸ್ಥಳಕ್ಕೆ ಕೊಂಡೊಯ್ಯಲು ಅಗ್ನಿಶಾಮಕ ಸಿಬ್ಬಂದಿ ತೀವ್ರ ಹರಸಾಹಸ ಪಡುತ್ತಿದ್ದಾರೆ. ಹಬ್ಬದ ಸೀಸನ್ ಆಗಿರುವುದರಿಂದ ಚಾವರಿ ಬಜಾರ್ ಮತ್ತು ಸುತ್ತಮುತ್ತಲಿನ ಸಗಟು ಮಾರುಕಟ್ಟೆಗಳಲ್ಲಿ ಭಾರಿ ಜನದಟ್ಟಣೆ ಇತ್ತು. ಕಟ್ಟಡವು ಹಳೆಯದಾಗಿದ್ದು, ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ದೆಹಲಿಯ ಕೇಂದ್ರ ಗೃಹ ಸಚಿವಾಲಯ ಕಟ್ಟಡದಲ್ಲಿ ಬೆಂಕಿ ಅವಘಡ; ಸ್ಥಳದಲ್ಲಿ ದಟ್ಟವಾಗಿ ಆವರಿಸಿದ ಹೊಗೆ

ಭಾರೀ ಮಳೆಯ ನಂತರ ಅಕ್ಟೋಬರ್ 31 ರಂದು ಚಾಂದನಿ ಚೌಕ್‌ನಲ್ಲಿರುವ 160 ವರ್ಷಗಳಿಗೂ ಹಳೆಯದಾದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಟೌನ್ ಹಾಲ್‌ನ ಒಂದು ಭಾಗ ಕುಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.