ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Naxal Attack: ಛತ್ತೀಸ್‌ಗಢದ ಬಿಜಾಪುರಲ್ಲಿ ಐಇಡಿ ಸ್ಫೋಟ; ಇಬ್ಬರು ಎಸ್‌ಟಿಎಫ್ ಸಿಬ್ಬಂದಿಗೆ ಗಾಯ

ಛತ್ತೀಸ್‌ಗಢದ ಬಿಜಾಪುರದಲ್ಲಿ ಭಾನುವಾರ ಐಇಡಿ ಸ್ಫೋಟಗೊಂಡಿದ್ದರಿಂದ ಇಬ್ಬರು ಎಸ್‌ಟಿಎಫ್ ಜವಾನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಘಟಕವಾದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಕ್ಸಲೀಯ ವಿರೋಧಿ ಕಾರ್ಯಾಚರಣೆಯಿಂದ ಹಿಂತಿರುಗುತ್ತಿದ್ದಾಗ ವಾಹನ ಬಳಿ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

ಛತ್ತೀಸ್‌ಗಢದ ಬಿಜಾಪುರಲ್ಲಿ ಐಇಡಿ ಸ್ಫೋಟ; ಎಸ್‌ಟಿಎಫ್‌ ಸಿಬ್ಬಂದಿಗೆ ಗಾಯ

Profile Vishakha Bhat Mar 24, 2025 1:13 PM

ರಾಯ್ಪುರ್‌: ಛತ್ತೀಸ್‌ಗಢದ ಬಿಜಾಪುರದಲ್ಲಿ ಭಾನುವಾರ ಐಇಡಿ ಸ್ಫೋಟಗೊಂಡಿದ್ದರಿಂದ ಇಬ್ಬರು ಎಸ್‌ಟಿಎಫ್ ಜವಾನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಘಟಕವಾದ (Naxal Attack) ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಕ್ಸಲೀಯ ವಿರೋಧಿ ಕಾರ್ಯಾಚರಣೆಯಿಂದ ಹಿಂತಿರುಗುತ್ತಿದ್ದಾಗ ವಾಹನ ಬಳಿ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಮಡ್ಡೆಡ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋರ್ಲಾ ನದಿಯ ಬಳಿ ಸಂಜೆ 5.45 ರ ಸುಮಾರಿಗೆ ಈ ಘಟನೆ ನಡೆದಿದೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ನಕ್ಸಲರು ಎಸ್‌ಟಿಎಫ್‌ನ ವಾಹನವನ್ನು ಗುರಿಯಾಗಿಸಿಕೊಂಡು ಸ್ಪೋಟ ಮಾಡಲು ಪ್ರಯತ್ನಿಸಿದ್ದಾರೆ. ದರೆ, ಸ್ಫೋಟವು ಸ್ವಲ್ಪ ದೂರದಲ್ಲಿ ಸಂಭವಿಸಿದ್ದು, ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ. ಸ್ಫೋಟದಿಂದಾಗಿ ಯಾವುದೇ ವಾಹನ ಅಥವಾ ಸಿಬ್ಬಂದಿಗೆ ಯಾವುದೇ ಗಂಭೀರ ಹಾನಿಯಾಗಿಲ್ಲ. ಐಇಡಿ ಸ್ಫೋಟದ ಆಘಾತದ ಅಲೆಗಳಿಂದಾಗಿ ಇಬ್ಬರು ಎಸ್‌ಟಿಎಫ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಗೊಂಡ ಸಿಬ್ಬಂದಿಗೆ ಮದ್ದೇಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಈಗ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಸ್ಫೋಟಗೊಂಡ ಸ್ಥಳದ ವಿಡಿಯೋ



ಮೂರು ದಿನದ ಹಿಂದೆ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದರು. ದಾಂತೇವಾಡ ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 18 ನಕ್ಸಲರು ಹತರಾಗಿದ್ದಾರೆ. 18 ನಕ್ಸಲರ ಬಳಿ ಇದ್ದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಕೂಡ ಹುತಾತ್ಮರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: Naxalites Surrender : ಛತ್ತೀಸ್‌ಗಢದಲ್ಲಿ 7 ಮಹಿಳೆಯರು ಸೇರಿದಂತೆ 29 ನಕ್ಸಲೈಟ್‌ಗಳ ಶರಣಾಗತಿ

ಇನ್ನೊಂದೆಡೆ ಬಿಜಾಪುರ ಜಿಲ್ಲೆಯಲ್ಲಿ 13 ನಕ್ಸಲರು ಶರಣಾತರಾಗಿದ್ದಾರೆ. ಈ ವರ್ಷ ಇಲ್ಲಿಯವರೆಗೆ 107 ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, 82 ಮಂದಿಯನ್ನು ಹೊಡೆದುರುಳಿಸಲಾಗಿದೆ. 143 ನಕ್ಸಲೀಯರನ್ನು ಬಿಜಾಪುರದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.