Terrorist Arrest: ಕಾಶ್ಮೀರದ ಬುಡ್ಗಾಮ್ನ ಚೆಕ್ಪಾಯಿಂಟ್ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಗ್ರೇನೇಡ್ ಪಿಸ್ತೂಲ್ ವಶ
ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ನಾಕಾ-ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗೆ ಸಹಾಯಕಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರನ್ನು ಬಂಧಿಸಿವೆ. ಶಂಕಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ನಾಕಾ-ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗೆ (Terrorist Arrest) ಸಹಾಯಕಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರನ್ನು ಬಂಧಿಸಿವೆ. ಶಂಕಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಬಳಿಕ ಕಣಿವೆ ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಕಾಶ್ಮೀರದ ಸುತ್ತಮುತ್ತಲಿನ ಪ್ರದೇಶವನ್ನು ಸೇನೆ ಸುತ್ತವರಿದಿದ್ದು, ಉಗ್ರರಿಗಾಗಿ ಶೋಧ ನಡೆಸಲಾಗುತ್ತಿದೆ. ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ಕೇಂದ್ರ ಗೃಹ ಸಚಿವಾಲಯ ಇಂದು ಆದೇಶ ನೀಡಿದ್ದು, ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ಮಾಡಿಸಿ. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ. ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಸಿದ್ಧತೆಯನ್ನು ಪರೀಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಮೇ 7ರ ಬುಧವಾರ ಸಮಗ್ರ ನಾಗರಿಕ ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಗೃಹ ಸಚಿವಾಲಯ (MHA) ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಭಾರತ ಪಾಕಿಸ್ತಾನದ ನಡುವೆ ಇರುವ ಉದ್ವಗ್ನತೆಯನ್ನು ಕಡಿಮೆ ಮಾಡಲು ವಿಶ್ವಸಂಸ್ಥೆ ಮುಂದಾಗಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಾರಕ ಭಯೋತ್ಪಾದಕ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತ ಮತ್ತು ಪಾಕಿಸ್ತಾನ ಸಂಯಮವನ್ನು ವಹಿಸಬೇಕು ಮತ್ತು ಮಿಲಿಟರಿ ಸಂಘರ್ಷವನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ಅವರು ಉಗ್ರರ ದಾಳಿಯನ್ನು ಖಂಡಿಸಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದ್ದಾರೆ. ಎಲ್ಲದಕ್ಕೂ ಯುದ್ಧವೇ ಪರಿಹಾರವಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಪೊಲೀಸ್ ಚೇಸಿಂಗ್ ವೇಳೆ ನದಿಗೆ ಹಾರಿ ಸಾವು
ಎರಡೂ ದೇಶಗಳ ಸರ್ಕಾರಗಳು ಮತ್ತು ಜನರು ವಿಶ್ವಸಂಸ್ಥೆಯ ಕೆಲಸಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಅದನ್ನು ನಾನು ಗೌರವಿಸುತ್ತೇನೆ ಮತ್ತು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ದೇಶ-ದೇಶಗಳ ನಡುವಿನ ಸಂಬಂಧಗಳು ಕುದಿಯುವ ಹಂತವನ್ನು ತಲುಪುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.