ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Encounter: ಕುಪ್ವಾರಾದ LOC ಬಳಿ ಗುಂಡಿನ ಚಕಮಕಿ; ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಸೇನೆ

ಸೋಮವಾರ ತಡರಾತ್ರಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಹೊಸ ಉದ್ವಿಗ್ನತೆ ಉಂಟಾಗಿದ್ದು, ಜಮ್ಮು ಮತ್ತು ಕಾಶ್ಮೀರದ (Jammu Kashmir) ಕುಪ್ವಾರಾ ಜಿಲ್ಲೆಯ ಮಚಿಲ್ ಮತ್ತು ದುಡ್ನಿಯಾಲ್ ವಲಯಗಳ ಎರಡು ಸ್ಥಳಗಳಿಂದ ಗುಂಡಿನ ದಾಳಿ ಮತ್ತು ಸ್ಫೋಟಗಳು ವರದಿಯಾಗಿವೆ.

ಇಬ್ಬರು ಉಗ್ರರರನ್ನು ಹೊಡೆದುರುಳಿಸಿದ ಸೇನೆ

-

Vishakha Bhat Vishakha Bhat Oct 14, 2025 9:22 AM

ಶ್ರೀನಗರ: ಸೋಮವಾರ ತಡರಾತ್ರಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಹೊಸ ಉದ್ವಿಗ್ನತೆ ಉಂಟಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಮತ್ತು ದುಡ್ನಿಯಾಲ್ ವಲಯಗಳ ಎರಡು ಸ್ಥಳಗಳಿಂದ ಗುಂಡಿನ ದಾಳಿ ಮತ್ತು ಸ್ಫೋಟಗಳು ವರದಿಯಾಗಿವೆ. ಇದನ್ನು ಸಂಭಾವ್ಯ (Terrorist Encounter) ಒಳನುಸುಳುವಿಕೆ ಪ್ರಯತ್ನ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಮೂಲಗಳ ಪ್ರಕಾರ, ಮಾಚಿಲ್ ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಪಡೆಗಳು ಪತ್ತೆಹಚ್ಚಿದ್ದು ಕಾರ್ಯಾಚರಣೆ ಪ್ರಾರಂಭಿಸಿವೆ.

ಸೈನ್ಯವು ಶಂಕಿತ ನುಸುಳುಕೋರರನ್ನು ಪತ್ತೆ ಮಾಡಿದ್ದು, ಇದು ಗುಂಡಿನ ಚಕಮಕಿಗೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಸೆಕ್ಟರ್‌ನಲ್ಲಿ, ಭಾರತೀಯ ಸೇನಾ ಪಡೆಗಳು ನಿಯಂತ್ರಣ ರೇಖೆಯ ಉದ್ದಕ್ಕೂ ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಸಂಜೆ 7 ಗಂಟೆ ಸುಮಾರಿಗೆ ಗುಂಡು ಹಾರಿಸಿದವು. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ" ಎಂದು ಭಾರತೀಯ ಸೇನಾ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಏತನ್ಮಧ್ಯೆ, ಮತ್ತೊಂದು ಘಟನೆಯಲ್ಲಿ, ದುಡ್ನಿಯಾಲ್ ವಲಯದಲ್ಲಿ ಹಲವಾರು ಸ್ಫೋಟಗಳು ವರದಿಯಾಗಿವೆ, ಇದು ಸಂಘಟಿತ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದೆ. ಇತ್ತೀಚಿನ ಕದನ ವಿರಾಮ ಉಲ್ಲಂಘನೆ ಬಳಿಕ ಗಡಿಯುದ್ದಕ್ಕೂ ಉಗ್ರಗಾಮಿ ಚಟುವಟಿಕೆ ಹೆಚ್ಚಾಗಿದೆ. ಎಲ್‌ಒಸಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ) ಕಟ್ಟೆಚ್ಚರ ವಹಿಸಿದೆ.

ಈ ಸುದ್ದಿಯನ್ನೂ ಓದಿ:Afghanistan Vs Pak: 58 ಪಾಕ್‌ ಸೈನಿಕರನ್ನು ಕೊಂದ ತಾಲಿಬಾನ್‌; ಅಡಗಿರುವ ಉಗ್ರರನ್ನು ಹೊರದಬ್ಬುವಂತೆ ವಾರ್ನಿಂಗ್‌

ಗುಪ್ತಚರ ವರದಿ ಬೆನ್ನಲ್ಲೇ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬಿಎಸ್‌ಎಫ್‌ ಹಾಗೂ ಭಾರತೀಯ ಸೇನೆ ಸಂಪೂರ್ಣ ಸಿದ್ಧವಾಗಿದ್ದು, ಜಂಟಿಯಾಗಿ ಕಣ್ಗಾವಲು ನಿಯೋಜಿಸಲಾಗಿದೆ. ಚಳಿಗಾಲದಲ್ಲಿ ಹಿಮಪಾತದಿಂದಾಗಿ ಕಾಶ್ಮೀರ ಕಣಿವೆಯಲ್ಲಿ ಅನೇಕ ಮಾರ್ಗಗಳು ಮುಚ್ಚಿಕೊಳ್ಳುತ್ತವೆ. ಇದರ ಉಪಯೋಗ ಪಡೆದುಕೊಳ್ಳುವ ಭಯೋತ್ಪಾದಕರು ಒಳಗೆ ನುಸುಳಲು ಯತ್ನಿಸುತ್ತಾರೆ. ಹೀಗಾಗಿ ಬಿಎಸ್‌ಎಫ್‌ ಹಗಲು ಮತ್ತು ರಾತ್ರಿ ಕಣ್ಗಾವಲು ಇರಿಸಿದೆ. ಡ್ರೋನ್‌ಗಳನ್ನು ಸಹ ನಿಯೋಜನೆ ಮಾಡಲಾಗಿದೆ.