Union Budget 2025: ಚುನಾವಣೆ ನಿಮಿತ್ತ ಬಿಹಾರ ರಾಜ್ಯಕ್ಕೆ ಬಜೆಟ್‌ನಲ್ಲಿ ಬಂಪರ್ ಕೊಡುಗೆ!
ಪ್ರಸಕ್ತ ವರ್ಷದಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ಬಜೆಟ್‌ನಲ್ಲಿ ಬಿಹಾರಕ್ಕೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಲವು ದೊಡ್ಡ ಉಡುಗೊರೆಗಳನ್ನು ನೀಡಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಲೋಕಸಭೆಯಲ್ಲಿ 2025ರ ಕೇಂದ್ರ ಬಜೆಟ್ ಅನ್ನು ಮಂಡಿಸಿದರು. ಪ್ರಸಕ್ತ ವರ್ಷದಲ್ಲಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ಬಜೆಟ್‌ನಲ್ಲಿ ಬಿಹಾರಕ್ಕೆ ಹಲವು ದೊಡ್ಡ ಉಡುಗೊರೆಗಳನ್ನು ನೀಡಿದ್ದಾರೆ. ಇದು ರಾಜ್ಯದ ಅಭಿವೃದ್ಧಿಗೆ ಮತ್ತು ಜನರ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಗೆ ಕಾರಣವಾಗುವ ನಿರೀಕ್ಷೆಯಿದೆ. ಈ ಘೋಷಯಿಂದ ಬಿಹಾರ ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ.
ಈ ವರ್ಷ ನವೆಂಬರ್‌ನಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನಿತೀಶ್ ಕುಮಾರ್ ಸಾರಥ್ಯದ ಜೆಡಿ (ಯು) ಹಾಗೂ ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿವೆ.
ಬಿಹಾರ ಮೂಲದ ಮಧುಬಾನಿ ಕಲಾ ಮುದ್ರೆಯ ಸೀರೆಯೊಂದಿಗೆ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025ರ ಬಜೆಟ್ ಅನ್ನು ಮಂಡಿಸಲು ಲೋಕಸಭೆಗೆ ಆಗಮಿಸಿದ್ದರು. ಬಿಹಾರ ಮೂಲದ ಮಿಥಿಲಾ ಪ್ರಾಂಥ್ಯದ ಮಧೂಬಾನಿ ಕಲೆ ಇದಾಗಿದೆ. ಪದ್ಮ ಶ್ರೀ ಪುರಷ್ಕೃತೆ ದುಲಾರಿ ದೇವಿ ಅವರು ಈ ಸೀರೆಯನ್ನು ನಿರ್ಮಲಾ ಸೀತಾರಾಮನ್‌ಗೆ ನೀಡಿದ್ದರು.
Agriculture Budget 2025: ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ ಘೋಷಿಸಿದ ಕೇಂದ್ರ
ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಘೋಷಣೆ
ಬಿಹಾರದಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ವಿಮಾನಯಾನ ಸಂಚಾರವನ್ನು ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಇದು ಪಾಟ್ನಾ ವಿಮಾನ ನಿಲ್ದಾಣ ಮತ್ತು ಬಿಹ್ತಾದಲ್ಲಿರುವ ಬ್ರೌನ್‌ಫೀಲ್ಡ್ ವಿಮಾನ ನಿಲ್ದಾಣದ ವಿಸ್ತರಣೆಯಾಗಿದೆ. ಉಡಾನ್ ಯೋಜನೆಯ ಯಶಸ್ಸನ್ನು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಿ ಹೊಸ ರೂಪದಲ್ಲಿ ಪ್ರಸ್ತುತಪಡಿಸಲಾಗಿದೆ.
ಐಐಟಿ ಪಾಟ್ನಾದ ವಿಸ್ತರಣೆ
ಐಐಟಿ ಪಾಟ್ನಾದ ಸಾಮರ್ಥ್ಯವನ್ನು ವಿಸ್ತರಿಸಲಾಗುವುದು, ಇದು ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ತಾಂತ್ರಿಕ ಶಿಕ್ಷಣವನ್ನು ಬಲಪಡಿಸುತ್ತದೆ. ಐಐಟಿ ಪಾಟ್ನಾದ ಹಾಸ್ಟೆಲ್ ಅನ್ನು ಸಹ ವಿಸ್ತರಿಸಲಾಗುವುದು.
Budget 2025: ಎಸ್‌ಸಿ, ಎಸ್‌ಟಿ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ಅವಧಿ ಸಾಲ ಘೋಷಣೆ!
ಮಖಾನಾ ಮಂಡಳಿಯ ರಚನೆ
ಬಿಹಾರದ ರೈತರ ಆದಾಯವನ್ನು ಹೆಚ್ಚಿಸಲು ಮಖಾನಾ ಮಂಡಳಿಯನ್ನು ಸ್ಥಾಪಿಸಲಾಗುವುದು. ಇದು ಮಖಾನಾದ ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆಯನ್ನು ಸುಧಾರಿಸುತ್ತದೆ. ಇದರೊಂದಿಗೆ ದೇಶದ 100 ಜಿಲ್ಲೆಗಳಿಗೆ ಕೃಷಿ ವಲಯಕ್ಕೆ ವಿಶೇಷ ಸಹಾಯ ಯೋಜನೆಯು ರೈತರ ಆದಾಯವನ್ನು ಹೆಚ್ಚಿಸುವುದರ ಜೊತೆಗೆ ದೇಶದ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತದೆ.
ರಾಷ್ಟ್ರೀಯ ತಂತ್ರಜ್ಞಾನ ಉದ್ಯಮಶೀಲತೆ ಮತ್ತು ನಿರ್ವಹಣಾ ಸಂಸ್ಥೆ (NIFTEM)
ಬಿಹಾರ ಪೂರ್ವ ಪ್ರದೇಶದಲ್ಲಿ ಆಹಾರ ಸಂಸ್ಕರಣಾ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣಾ ಸಂಸ್ಥೆಯನ್ನು ಸ್ಥಾಪಿಸಲಾಗುವುದು. ಇದು ಎರಡು ಪ್ರಮುಖ ಫಲಿತಾಂಶಗಳನ್ನು ನಿರೀಕ್ಷಿಸಬಹುದಾಗಿದೆ. ಮೊದಲನೆಯದಾಗಿ, ಇದು ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡುವ ಮೂಲಕ ಅವರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಎರಡನೆಯದಾಗಿ, ಇದು ಈ ಪ್ರದೇಶದ ಯುವಕರಿಗೆ ಕೌಶಲ, ಉದ್ಯಮಶೀಲತೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಬಡವರ ಸಬಲೀಕರಣದತ್ತ ಗಮನಹರಿಸುವ ಭಾಗವಾಗಿ ಆಹಾರ ಸಂಸ್ಕರಣೆಯನ್ನು ಬೆಂಬಲಿಸುವ ಸರ್ಕಾರದ ಬದ್ಧತೆಯನ್ನು ಹಣಕಾಸು ಸಚಿವರು ಎತ್ತಿ ಹಿಡಿದಿದ್ದಾರೆ.
Union Budget 2025: 'ಪ್ರಧಾನ ಮಂತ್ರಿ ಧನ್ ಧ್ಯಾನ್ ಕೃಷಿ ಯೋಜನೆ'; 1.7 ಕೋಟಿ ರೈತರಿಗೆ ಪ್ರಯೋಜನ
ಪಶ್ಚಿಮ ಕೋಸಿ ಕಾಲುವೆ ಯೋಜನೆ
ಪಶ್ಚಿಮ ಕೋಸಿ ಕಾಲುವೆ ಯೋಜನೆಗೆ ಮಿಥಿಲಾ ಸಹಾಯ ಪಡೆಯಲಿದೆ. ಇದು 50 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುವ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಮಿಥಿಲಾ ಪ್ರದೇಶದಲ್ಲಿ ಅಭಿವೃದ್ಧಿ ವೇಗ ಪಡೆಯಲಿದೆ.