ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Amit Shah: ಕಾಶ್ಮೀರಕ್ಕೆ ಬಂದಿಳಿದ ಅಮಿತ್‌ ಶಾ; ಹೈವೋಲ್ಟೇಜ್‌ ಮೀಟಿಂಗ್‌ ಶುರು

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಈ ವರೆಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀನಗರಕ್ಕೆ ತೆರಳಿದ್ದಾರೆ. ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.

ಶ್ರೀನಗರದಲ್ಲಿ  ಅಮಿತ್‌ ಶಾ ನೇತೃತ್ವದಲ್ಲಿ ಹೈವೋಲ್ಟೇಜ್‌ ಸಭೆ

Profile Vishakha Bhat Apr 22, 2025 9:34 PM

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Amit Shah) ಭಯೋತ್ಪಾದಕ ದಾಳಿ ನಡೆದಿದ್ದು, ಈ ವರೆಗೆ ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ ಒಟ್ಟು 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶ್ರೀನಗರಕ್ಕೆ ತೆರಳಿದ್ದಾರೆ. ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಅಮಿತ್‌ ಶಾ ಅವರಿಗೆ ಕಾಶ್ಮೀರಕ್ಕೆ ತೆರಳುವಂತೆ ಸೂಚನೆ ನೀಡಿದ್ದರು.



ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರನ್ನು ಬೇಟೆಯಾಡುವುದಾಗಿ ಅವರು ತಿಳಿಸಿದ್ದಾರೆ. ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನನ್ನ ಆಲೋಚನೆಗಳು ಇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ ಮತ್ತು ದುಷ್ಕರ್ಮಿಗಳ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ" ಎಂದು ಅಮಿತ್ ಶಾ 'X' ನಲ್ಲಿ ಪೋಸ್ಟ್ ಮಾಡಿದ್ದಾರೆ.



ಈ ಸುದ್ದಿಯನ್ನೂ ಓದಿ: Pahalgam Terror Attack: ದಾಳಿಗೂ ಮುನ್ನ ಕಾಶ್ಮೀರ ಪ್ರವಾಸದ ವಿಡಿಯೋ ಶೇರ್‌ ಮಾಡಿದ್ದ ಶಿವಮೊಗ್ಗ ಉದ್ಯಮಿ ಪತ್ನಿ; ವಿಡಿಯೋ ನೋಡಿ

ಘಟನೆ ಕುರಿತು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ" ಎಂದು ಅವರು ಹೇಳಿದರು.