ಅಮೆರಿಕದ ವ್ಯಾಪಾರ ಒಪ್ಪಂದ ಬೆಳೆಯುತ್ತಿರುವ ವಿಶ್ವಾಸದ ಪ್ರತಿಬಿಂಬ: ಪ್ರಧಾನಿ ಮೋದಿ
ಭಾರತ ಮತ್ತು ಅಮೆರಿಕ ಒಪ್ಪಂದದ ಕುರಿತು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವೈಯಕ್ತಿಕ ಬದ್ಧತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಒಪ್ಪಂದವು ಭಾರತ ಮತ್ತು ಅಮೆರಿಕ ನಡುವೆ ಬೆಳೆಯುತ್ತಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ -
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ (India- Us trade deal) ಒಪ್ಪಂದವು ಎರಡು ದೇಶಗಳ ನಡುವೆ ಬೆಳೆಯುತ್ತಿರುವ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಈ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರ ವೈಯಕ್ತಿಕ ಬದ್ಧತೆಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದ ಘೋಷಣೆಯ ಬಳಿಕ ಮೊದಲ ಬಾರಿಗೆ ಈ ಕುರಿತು ಹೇಳಿಕೆ ನೀಡಿರುವ ಪ್ರಧಾನಿ ಮೋದಿ, ಇದು ದ್ವಿಪಕ್ಷೀಯ ಸಂಬಂಧಗಳಿಗೆ ಪ್ರಮುಖ ಉತ್ತೇಜನ, ಭಾರತೀಯ ಕಾರ್ಮಿಕರು, ರೈತರ ವ್ಯವಹಾರಗಳಿಗೆ ಹೊಸ ಅವಕಾಶಗಳನ್ನು ತೆರೆಯುವ ಹೆಜ್ಜೆಯಾಗಿದೆ ಎಂದು ಹೇಳಿದರು.
ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ಭಾರತೀಯ ಸರಕುಗಳಿಗೆ ಅಮೆರಿಕವು ಸುಂಕಗಳನ್ನು ಶೇಕಡಾ 18ಕ್ಕೆ ಇಳಿಸಿದೆ. ಇದನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಎರಡೂ ದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದದ ರಚನೆ ಬಗ್ಗೆ ಒಪ್ಪಿಕೊಂಡಿವೆ. ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ಬಲವಾದ ಸಂಬಂಧಗಳಿಗೆ ಡೊನಾಲ್ಡ್ ಟ್ರಂಪ್ ಅವರು ವೈಯಕ್ತಿಕ ಬದ್ಧತೆಯನ್ನು ತೋರಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ಹೇಳಿದರು.
ಭಾರತ ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ; ಮೋದಿ ಹೇಳಿದ್ದೇನು? ಯಾರಿಗೆ ಹೆಚ್ಚು ಲಾಭ?
Great news for India and USA!
— Narendra Modi (@narendramodi) February 7, 2026
We have agreed on a framework for an Interim Trade Agreement between our two great nations. I thank President Trump for his personal commitment to robust ties between our countries.
This framework reflects the growing depth, trust and dynamism of… https://t.co/zs1ZLzamhd
ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಅವರು ಈ ಕುರಿತು ಪೋಸ್ಟ್ ಮಾಡಿದ್ದು, ಎರಡು ಮಹಾನ್ ರಾಷ್ಟ್ರಗಳ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಚೌಕಟ್ಟು ನಮ್ಮ ಪಾಲುದಾರಿಕೆಯ ಬೆಳೆಯುತ್ತಿರುವ ಆಳ, ನಂಬಿಕೆ ಮತ್ತು ಚೈತನ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
ಭಾರತದ ರೈತರು, ಉದ್ಯಮಿಗಳು, ಎಂಎಸ್ಎಂಇಗಳು, ಹೊಸ ಸ್ಟಾರ್ಟ್ಅಪ್ ಮಾಡುವವರು, ಮೀನುಗಾರರು ಮತ್ತು ಇತರರಿಗೆ ಇದು ಹೊಸ ಅವಕಾಶಗಳನ್ನು ತೆರೆಯಲಿದೆ. ಈ ಮೂಲಕ ಮೇಕ್ ಇನ್ ಇಂಡಿಯಾಕ್ಕೆ ಬಲ ಬರಲಿದೆ. ಇದು ಮಹಿಳೆಯರು ಮತ್ತು ಯುವಕರಿಗೆ ದೊಡ್ಡ ಪ್ರಮಾಣದ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದರು.
ಅಗ್ನಿ-3 ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಭಾರತ; 3500 ಕಿ.ಮೀಟರ್‌ವರೆಗೆ ನಿಖರ ದಾಳಿ ಸಾಮರ್ಥ್ಯ
ಇದು ಜಾಗತಿಕ ಬೆಳವಣಿಗೆಗೆ ಕೊಡುಗೆ ನೀಡುತ್ತದೆ. ಅಲ್ಲದೇ ಭಾರತವು ವಿಕಸಿತ ಭಾರತವನ್ನು ನಿರ್ಮಿಸಲು ಭವಿಷ್ಯ ಆಧಾರಿತ ಜಾಗತಿಕ ಪಾಲುದಾರಿಕೆಗಳ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಹೇಳಿದರು.