ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pak Ceasefire: ಅದರ ಚಾಳಿಯೇ ಅದು...... ಶಾಯರಿ ಮೂಲಕ ಪಾಕಿಸ್ತಾನದ ನೀಚ ಬುದ್ಧಿಯನ್ನು ಹೇಳಿದ ಶಶಿ ತರೂರ್‌

ಭಾರತದೊಂದಿಗೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಕಾವ್ಯಾತ್ಮಕವಾಗಿ ವಾಗ್ದಾಳಿ ನಡೆಸಿದ್ದಾರೆ. ನಾಲ್ಕು ದಿನಗಳ ಸತತ ಸಂಘರ್ಷದ ಬಳಿಕ ಶನಿವಾರ 5 ಗಂಟೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿ ಕದನ ವಿರಾಮ ಘೋಷಣೆ ಆಗಿತ್ತು.

ಶಾಯರಿ ಮೂಲಕ ಪಾಕಿಸ್ತಾನದ ನೀಚ ಬುದ್ಧಿಯನ್ನು ಹೇಳಿದ ಶಶಿ ತರೂರ್‌

Profile Vishakha Bhat May 11, 2025 8:41 AM

ನವದೆಹಲಿ: ಭಾರತದೊಂದಿಗೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನದ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಕಾವ್ಯಾತ್ಮಕವಾಗಿ ವಾಗ್ದಾಳಿ ನಡೆಸಿದ್ದಾರೆ. ನಾಲ್ಕು ದಿನಗಳ ಸತತ ಸಂಘರ್ಷದ ಬಳಿಕ ಶನಿವಾರ 5 ಗಂಟೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೇತೃತ್ವದಲ್ಲಿ ಕದನ ವಿರಾಮ ಘೋಷಣೆ ಆಗಿತ್ತು. ಇದೀಗ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದೆ. ನಿನ್ನೆ ರಾತ್ರಿಯಿಂದ ಮತ್ತೆ ತನ್ನ ನೀಚ ಬುದ್ಧಿಯನ್ನು ತೋರಿಸಿದೆ. ಶ್ರೀನಗರದ ಕೆಲವು ಕಡೆ ಮತ್ತೆ ಶೆಲ್‌ ದಾಳಿಯನ್ನು ನಡೆಸಲಾಗಿದೆ.

X ನಲ್ಲಿ ತಡರಾತ್ರಿಯ ಪೋಸ್ಟ್‌ನಲ್ಲಿ, ಶಶಿ ತರೂರ್ ಅವರು ಹಿಂದಿ ದ್ವಿಪದಿಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಪಾಕಿಸ್ತಾನದ ದುಷ್ಟ ಬುದ್ಧಿಯ ಕುರಿತು ಬರೆದಿದ್ದಾರೆ. ನಂಬಿಕೆ ಮುರಿಯುವುದು ಅವರ ಚಾಳಿ; ಹೀಗಿದ್ದರೂ ನಾವು ಅವರನ್ನು ಹೇಗೆ ನಂಬಿದೆವು ಎಂದು ಹೇಳಿದ್ದಾರೆ. ಅವರು #ceasefireviolated ಎಂಬ ಹ್ಯಾಶ್‌ಟ್ಯಾಗ್ ಅನ್ನು ಸಹ ಬಳಸಿದ್ದಾರೆ. ಕದನ ವಿರಾಮ ಘೋಷಣೆಯ ನಂತರದ ಕಾರ್ಯಕ್ರಮವೊಂದರಲ್ಲಿ, ಕಾಂಗ್ರೆಸ್ ನ ಹಿರಿಯ ನಾಯಕ ಹೇಳಿದ್ದಾರೆ.ನನಗೆ ತುಂಬಾ ಸಂತೋಷವಾಗಿದೆ. ಭಾರತ ಎಂದಿಗೂ ದೀರ್ಘಾವಧಿಯ ಯುದ್ಧವನ್ನು ಬಯಸಲಿಲ್ಲ ಆದರೆ ಭಾರತ ಭಯೋತ್ಪಾದಕರಿಗೆ ಪಾಠ ಕಲಿಸಲು ಬಯಸಿತು, ಆ ಪಾಠ ಕಲಿಸಲಾಗಿದೆ ಎಂದು ನಾನು ನಂಬುತ್ತೇನೆ" ಎಂದು ಅವರು ಹೇಳಿದ್ದಾರೆ.



ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಡ್ರೋನ್‌ಗಳನ್ನು ಪತ್ತೆ ಹಚ್ಚಿ ತಡೆದ ನಂತರ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಶನಿವಾರ ಸಂಜೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತಿವೆ ಎಂದು ಹೇಳಿದರು . ಸಶಸ್ತ್ರ ಪಡೆಗಳು ಈ ಉಲ್ಲಂಘನೆಗಳಿಗೆ ಸಮರ್ಪಕ ಮತ್ತು ಸೂಕ್ತ ಪ್ರತಿಕ್ರಿಯೆಯನ್ನು ನೀಡುತ್ತಿವೆ ಮತ್ತು ನಾವು ಈ ಉಲ್ಲಂಘನೆಗಳನ್ನು ಬಹಳ ಗಂಭೀರವಾಗಿ ಗಮನಿಸುತ್ತೇವೆ" ಎಂದು ಅವರು ರಾತ್ರಿ 11:20 ರ ಸುಮಾರಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.