ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಮಾತೃವಿಯೋಗ: ತಾಯಿ ಸಾವಿತ್ರಿ ದೇವಿ ವಿಧಿವಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ಶುಕ್ರವಾರ ಬೆಳಗ್ಗೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ಪೂರ್ವಜರ ನಿವಾಸದಲ್ಲಿ ನಿಧನರಾಗಿದ್ದಾರೆ. ಸಾವಿತ್ರಿ ದೇವಿ ಅವರ ಅಗಲಿಕೆಯಿಂದ ಪಂಚೂರ್ ಗ್ರಾಮ ಹಾಗೂ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಮಾತೃವಿಯೋಗ

ಸಿಎಂ ಯೋಗಿ ಆದಿತ್ಯನಾಥ್‌ ತಾಯಿ ವಿಧಿವಶ -

Vishakha Bhat Heggar
Vishakha Bhat Heggar Nov 20, 2026 2:05 PM

ಡೆಹ್ರಾಡೂನ್‌: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರ ತಾಯಿ ಸಾವಿತ್ರಿ ದೇವಿ (91) ಅವರು ಶುಕ್ರವಾರ ಬೆಳಗ್ಗೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ಪೂರ್ವಜರ ನಿವಾಸದಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ಬೆಳಗ್ಗೆ ಸುಮಾರು 11 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಸಾವಿತ್ರಿ ದೇವಿ ಅವರ ಅಗಲಿಕೆಯಿಂದ ಪಂಚೂರ್ ಗ್ರಾಮ ಹಾಗೂ ಕುಟುಂಬದಲ್ಲಿ ಶೋಕದ ಛಾಯೆ ಆವರಿಸಿದೆ. ಕುಟುಂಬದ ಮೂಲಗಳ ಪ್ರಕಾರ, ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶನಿವಾರ (ನ.21) ಪವಿತ್ರ ಕ್ಷೇತ್ರ ಹರಿದ್ವಾರದಲ್ಲಿ ನೆರವೇರುವ ಸಾಧ್ಯತೆಯಿದೆ. ಸಾವಿತ್ರಿ ದೇವಿ ಆಗಾಗ್ಗೆ ವಯೋಸಜಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ 2024ರ ಮೇ 14ರಂದು ರಿಷಿಕೇಶದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೃದ್ಧರ ಆರೈಕೆ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಯೋಗಿ ಆದಿತ್ಯನಾಥ್ ತಮ್ಮ ತಾಯಿಯ ಆರೈಕೆಗಾಗಿ ಏಮ್ಸ್ ರಿಷಿಕೇಶಕ್ಕೆ ಭೇಟಿ ನೀಡುತ್ತಿದ್ದರು.

ರಾಜಕೀಯ ಗಣ್ಯರ ಸಂತಾಪ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸಾವಿತ್ರಿ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರ ತಾಯಿ ಶ್ರೀಮತಿ ಸಾವಿತ್ರಿ ದೇವಿ ಅವರು ನಿಧನರಾದ ಸುದ್ದಿ ತೀವ್ರ ದುಃಖ ತರಿಸಿದೆ. ತಾಯಿಯ ಪ್ರೀತಿ ಮತ್ತು ವಾತ್ಸಲ್ಯವು ಜೀವನದ ಅತ್ಯಮೂಲ್ಯ ಸಂಪತ್ತು. ದಿವಂಗತರ ಆತ್ಮಕ್ಕೆ ಭಗವಾನ್ ಬಾಬಾ ಕೇದಾರನಾಥರು ತಮ್ಮ ಚರಣಗಳಲ್ಲಿ ಸ್ಥಾನ ನೀಡಲಿ. ಈ ದುಃಖ ಭರಿಸುವ ಶಕ್ತಿಯನ್ನು ಯೋಗಿ ಆದಿತ್ಯನಾಥ್ ಜೀ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವ ಪಂಕಜ್ ಚೌಧರಿ ಸಹ ಸಂತಾಪ ಸೂಚಿಸಿದ್ದಾರೆ.

ಸಮಾಜವಾದಿ ಸಂಸದೆ ಜೊತೆ ಮದುವೆ; ಸಿಎಂ ಯೋಗಿ ಆದಿತ್ಯನಾಥ್‌ಗೆ ಆಹ್ವಾನ ನೀಡಿದ ರಿಂಕು ಸಿಂಗ್ ಕುಟುಂಬ

1972ರಲ್ಲಿ ಪಂಚೂರ್ ಗ್ರಾಮದಲ್ಲಿ ಜನಿಸಿದ ಯೋಗಿ ಆದಿತ್ಯನಾಥ್ (ಅಜಯ್ ಸಿಂಗ್ ಬಿಷ್ಟ್) ಅವರು ಚಿಕ್ಕ ವಯಸ್ಸಿನಲ್ಲೇ ಮನೆ ತೊರೆದು ಗೋರಖ್‌ನಾಥ ಮಠದ ಮಹಂತ್ ಅವೈದ್ಯನಾಥರ ಶಿಷ್ಯರಾಗಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ ದೇಶದ ಅತಿದೊಡ್ಡ ರಾಜ್ಯದ ಮುಖ್ಯಮಂತ್ರಿಯಾದರೂ, ತಾಯಿ ಸಾವಿತ್ರಿ ದೇವಿ ಅವರು ಮಾತ್ರ ತಮ್ಮ ಹುಟ್ಟೂರಾದ ಪಂಚೂರ್ ಗ್ರಾಮದಲ್ಲೇ ಸಾಮಾನ್ಯ ಗೃಹಿಣಿಯಾಗಿ ಅತ್ಯಂತ ಸರಳ ಜೀವನ ನಡೆಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಲ್ಲಿ ಅವರ ಆರೋಗ್ಯ ಹದಗೆಟ್ಟಾಗ ಯೋಗಿ ಆದಿತ್ಯನಾಥ್ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದರು. 2020ರಲ್ಲಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಷ್ಟ್ ನಿಧನರಾಗಿದ್ದರು.