ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಎಂಡಬ್ಲ್ಯು ಕಾರ್‌ ಭೀಕರ ಅಪಘಾತ: ಶಾಕುನ್ ಗ್ರೂಪ್ ಎಂಡಿ ವಲ್ಲಭ ಮಹೇಶ್ವರಿ ನಿಧನ

ಶಾಕುನ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್ ವಲ್ಲಭ ಮಹೇಶ್ವರಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಜಸ್ಥಾನದ ಅಲ್ವಾರ್ ಬಳಿ ಅವರು ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ ಉದ್ಯಮಿ ವಲ್ಲಭ ಮಹೇಶ್ವರಿ

ನವದೆಹಲಿ, ಮಾ. 9: ಶಾಕುನ್ ಗ್ರೂಪ್‌ನ (Shakun Group) ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಖ್ಯಾತ ಉದ್ಯಮಿ ವಲ್ಲಭ ಮಹೇಶ್ವರಿ (Vallabh Maheshwari) ಭಾನುವಾರ (ಮಾರ್ಚ್‌ 8) ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ (Delhi-Mumbai Expressway)ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ರಾಜಸ್ಥಾನದ (Rajasthan) ಅಲ್ವಾರ್ (Alwar) ಬಳಿ ಅವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು (BMW) ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಮಹೇಶ್ವರಿ ಜೈಪುರದಿಂದ ಮಥುರಾಗೆ (Jaipur to Mathura) ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಲಾಯಿಸುತ್ತಿದ್ದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ, ವಾಹನವು ರಸ್ತೆಯ ಬದಿಯ ಬ್ಯಾರಿಕೇಡ್‌ಗಳನ್ನು ಮುರಿದು, ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಪಕ್ಕದಲ್ಲಿದ್ದ ಕಲ್ವರ್ಟ್‌ ಗೋಡೆಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಐಷಾರಾಮಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

62 ವರ್ಷದ ಉದ್ಯಮಿ ಮಹೇಶ್ವರಿ ಮತ್ತು ಅವರ ಚಾಲಕನನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲೇ ಮಹೇಶ್ವರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಅದೃಷ್ಟವಶಾತ್ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ. ಅತಿ ವೇಗ ಅಥವಾ ತಾಂತ್ರಿಕ ದೋಷವು ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಶೋಕ್ ಗೆಹ್ಲೋಟ್ ಅಚರ ಎಕ್ಸ್‌ ಪೋಸ್ಟ್‌:



2000ರ ದಶಕದ ಆರಂಭದಲ್ಲಿ ಸ್ಥಾಪನೆಯಾದ ಶಾಕುನ್ ಗ್ರೂಪ್‌ನ ವಿವಿಧ ಘಟಕಗಳಲ್ಲಿ ಮಹೇಶ್ವರಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಸಂಸ್ಥೆಯು ಕೈಗಾರಿಕೆಗಳ ಸ್ಥಾಪನೆ, ಸಂಪನ್ಮೂಲಗಳ ಸಂಸ್ಕರಣೆ ಮತ್ತು ಸಾರಿಗೆ ಕ್ಷೇತ್ರದಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಚಾಲಕ ಸಜೀವ ದಹನ

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಕ್ಸ್ (X) ಮೂಲಕ ಸಂತಾಪ ಸೂಚಿಸಿದ್ದು, "ಖ್ಯಾತ ಉದ್ಯಮಿ ವಲ್ಲಭ ಮಹೇಶ್ವರಿ ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ಅತ್ಯಂತ ಹೃದಯವಿದ್ರಾವಕವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ.