ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೇರಳದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ವಿ.ಡಿ. ಸತೀಶನ್

ಕೇರಳದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್‌ ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ.

ಕೇರಳದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ವಿ.ಡಿ. ಸತೀಶನ್

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 18, 2026 9:20 AM

ತಿರುವನಂತಪುರಂ: ಕೇರಳದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ವಿ.ಡಿ ಸತೀಶನ್‌ (VD Satheesan) ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನೇತೃತ್ವದ (Kerala Cabinet) ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದ ಎರಡು ವಾರಗಳ ನಂತರ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. 21 ಸದಸ್ಯರ ಹೊಸ ಸಚಿವ ಸಂಪುಟದಲ್ಲಿ 14 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಅಧಿಕಾರ ವಹಿಸಿಕೊಳ್ಳುವ ಮೊದಲೇ ಸತೀಶನ್ ಸರ್ಕಾರದೊಳಗೆ ಕೆಲವು ಖಾತೆಗಳನ್ನು ಹಂಚಿಕೆ ಮಾಡಿದರು. ಹಣಕಾಸು ಇಲಾಖೆಯನ್ನು ವೈಯಕ್ತಿಕವಾಗಿ ನಿರ್ವಹಿಸಿದರೆ, ಪ್ರಭಾವಿ ಗೃಹ ಮತ್ತು ವಿಜಿಲೆನ್ಸ್ ಖಾತೆಗಳು ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರಿಗೆ ಹೋಗಿವೆ. ಸಂಪುಟದಲ್ಲಿ ಇಬ್ಬರು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಇಬ್ಬರು ಸದಸ್ಯರು ಸೇರಿದ್ದಾರೆ.

ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ಐವರು, ಕೇರಳ ಕಾಂಗ್ರೆಸ್ (ಜೋಸೆಫ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ (ಸಿಎಂಪಿ) ಗಳು ತಲಾ ಒಂದು ಸ್ಥಾನ ಪಡೆದಿವೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು. ಇಡೀ ಯುಡಿಎಫ್ ಸಚಿವಾಲಯ ಇಂದು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಯುಡಿಎಫ್ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ.

ಕೆ.ಸಿ. ವೇಣುಗೋಪಾಲ್‌ಗೆ ಕೇರಳದ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದೇಗೆ? ಇಲ್ಲಿದೆ ನೋಡಿ ಕಾರಣ

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸುಖು, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ನಾಯಕರು ಭಾಗವಹಿಸಲಿದ್ದಾರೆ.