ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಾನೂನು ಹೋರಾಟದಲ್ಲಿ ಕಾಕ್ರೋಚ್ ಜನತಾ ಪಾರ್ಟಿಗೆ ಜಯ: ಎಕ್ಸ್ ಖಾತೆಯ ಮೇಲಿನ ನಿರ್ಬಂಧ ತೆಗೆದುಹಾಕಲು ದೆಹಲಿ ಹೈಕೋರ್ಟ್ ಆದೇಶ

Cockroach Janata Party: ಕಾಕ್ರೋಚ್ ಜನತಾ ಪಾರ್ಟಿಯ ಎಕ್ಸ್ ಖಾತೆಯ ಮೇಲಿನ ನಿರ್ಬಂಧವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ವಾದ-ಪ್ರತಿವಾದಗಳನ್ನು ಪರಿಗಣಿಸಿದ ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ, ಸಿಜೆಪಿಯ ಎಕ್ಸ್ ಖಾತೆಯನ್ನು ಮರುಸ್ಥಾಪಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ, ಖಾತೆ ನಿರ್ಬಂಧಿಸಲು ಕಾರಣವಾಗಿದ್ದ ಪ್ರಮುಖ ಆತಂಕ ಈಗ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ (ಸಂಗ್ರಹ ಚಿತ್ರ)

ನವದೆಹಲಿ, ಜು. 7: ಕಾಕ್ರೋಚ್ ಜನತಾ ಪಾರ್ಟಿಯ (Cockroach Janata Party) ಎಕ್ಸ್ ಖಾತೆಯ ಮೇಲಿನ ನಿರ್ಬಂಧವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ (Delhi High Court) ಆದೇಶ ಹೊರಡಿಸಿದೆ. ಈ ಮೂಲಕ ಪಾರ್ಟಿಗೆ ಮಹತ್ವದ ಜಯ ಸಿಕ್ಕಂತಾಗಿದೆ. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಖಾತೆಯನ್ನು ಏಕೆ ನಿರ್ಬಂಧಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಈ ಆದೇಶವನ್ನು ಹೊರಡಿಸಿದರು.

ನೀಟ್ ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಬಹುದು ಎನ್ನುವ ಕಾರಣಕ್ಕೆ ಖಾತೆಗೆ ನಿರ್ಬಂಧ ಹೇರಲಾಗಿತ್ತು ಎಂದು ಎಂದು ಮೆಹ್ತಾ ಹೇಳಿದರು. ಪರೀಕ್ಷೆ ಈಗ ಮುಗಿದಿರುವುದರಿಂದ, ಇನ್ನು ಮುಂದೆ ಯಾವುದೇ ಆತಂಕಗಳಿಲ್ಲ ಎಂದು ಅವರು ಬಳಿಕ ತಿಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ, ಸಿಜೆಪಿಯ ಎಕ್ಸ್ ಖಾತೆಯನ್ನು ಮರುಸ್ಥಾಪಿಸುವಂತೆ ಸೂಚಿಸಿದರು. ಅಲ್ಲದೆ, ಖಾತೆ ನಿರ್ಬಂಧಿಸಲು ಕಾರಣವಾಗಿದ್ದ ಪ್ರಮುಖ ಆತಂಕ ಈಗ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿತು.

ನೀಟ್ ಪರೀಕ್ಷೆ ಈಗಾಗಲೇ ಮುಗಿದಿರುವುದರಿಂದ, ಖಾತೆ ನಿರ್ಬಂಧಕ್ಕೆ ಕಾರಣವಾಗಿದ್ದ ಪ್ರಮುಖ ಆತಂಕಕ್ಕೆ ಈಗ ಯಾವುದೇ ಪ್ರಸ್ತುತತೆ ಉಳಿದಿಲ್ಲ. ಹೀಗಾಗಿ ನಿರ್ಬಂಧ ಆದೇಶವನ್ನು ಹಿಂಪಡೆಯಲಾಗುತ್ತದೆ. ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ತಿಳಿಸಿದರು.

"ಕಾಕ್ರೋಚ್ ಜನತಾ ಪಾರ್ಟಿ ದೇಶ ವಿಭಜನೆ ಶಕ್ತಿಗಳ 'ಬಿ ಟೀಮ್'ʼ: ಧರ್ಮೇಂದ್ರ ಪ್ರಧಾನ್‌ ವಾಗ್ದಾಳಿ

ಸಿಜೆಪಿಯ ಎಕ್ಸ್ ಖಾತೆಯನ್ನು ಏಕೆ ನಿರ್ಬಂಧಿಸಲಾಯಿತು?

ಕಾಕ್ರೋಚ್ ಜನತಾ ಪಾರ್ಟಿಯನ್ನು ವಿಡಂಬನಾತ್ಮಕ ಸಂಘಟನೆಯಾಗಿ ಪ್ರಾರಂಭಿಸಲಾಯಿತು. ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಈ ವರ್ಷ ಮೋದಲ ಬಾರಿ ನಡೆದಿದ್ದ ನೀಟ್ ಪರೀಕ್ಷೆ ರದ್ದಾದ ನಂತರ ಯುವ ಜನತೆಯ ಗಮನ ಸೆಳೆಯಿತು. ಸಾಮಾಜಿಕ ಜಾಲತಾಣಗಳಲ್ಲಿ ಸಿಜೆಪಿಗೆ ಭಾರಿ ಜನಬೆಂಬಲ ದೊರೆಯಲು ಆರಂಭವಾದ ಬೆನ್ನಲ್ಲೇ, ಮೇಯಲ್ಲಿ ಭಾರತದಲ್ಲಿ ಅದರ ಎಕ್ಸ್ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಎಕ್ಸ್‌ ಮೂಲಗಳ ಪ್ರಕಾರ, ಅಧಿಕಾರ ಹೊಂದಿರುವ ಸಂಸ್ಥೆಯಿಂದ ಸಮರ್ಪಕ ಮತ್ತು ಸೂಕ್ತ ಮನವಿ ಬಂದಾಗ ಅಥವಾ ನಿರ್ದಿಷ್ಟ ದೇಶದಲ್ಲಿ ಕೆಲವು ವಿಷಯಗಳಿಗೆ ಪ್ರವೇಶವನ್ನು ತಡೆಹಿಡಿಯುವುದು ಅಗತ್ಯವಾಗಬಹುದು ಎಂದು ಹೇಳಿದಾಗ ಅಂತಹ ಕ್ರಮ ತೆಗೆದುಕೊಳ್ಳಲಾಗುತ್ತದೆ.

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳನ್ನು ನಡೆಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 10ನೇ ದಿನಕ್ಕೆ ಕಾಲಿಟ್ಟಿದೆ.