ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Tunnel Collapses: ತೆಲಂಗಾಣ ಸುರಂಗ ಕುಸಿತ; ನೀರು, ಕೆಸರು, ಕುಸಿದ ಅವಶೇಷಗಳೇ ಕಾರ್ಯಾಚರಣೆಗೆ ದೊಡ್ಡ ಸವಾಲು

ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಕನಿಷ್ಠ ಎಂಟು ಮಂದಿ ಕಾರ್ಮಿಕರು ಸಿಲುಕಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಮಿಕರನ್ನು ಹೊರತರಲು ಪ್ರಯತ್ನಿಸುತ್ತಿರುವ ರಕ್ಷಣಾ ತಂಡಕ್ಕೆ ಸವಾಲು ಎದುರಾಗಿದ್ದು, ನೀರಿನ ಜೊತೆಯಲ್ಲಿ ಕೆಸರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ.

ತೆಲಂಗಾಣ ಸುರಂಗ ಕುಸಿತ; ಮುಂದುವರಿದ ಕಾರ್ಯಾಚರಣೆ

ತೆಲಂಗಾಣದಲ್ಲಿ ಸುರಂಗ ಕುಸಿತ

Profile Vishakha Bhat Feb 23, 2025 1:17 PM

ಹೈದರಾಬಾದ್‌: ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗದ (Tunnel Collapses) ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿಯಲ್ಲಿ ಕನಿಷ್ಠ ಎಂಟು ಮಂದಿ ಕಾರ್ಮಿಕರು ಸಿಲುಕಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದ ಒಳಗೆ ಸೋರಿಕೆಯನ್ನು ಸರಿಪಡಿಸಲು ಕಾರ್ಮಿಕರು ತೆರಳಿದ್ದಾಗ, ಸುರಂಗದ ಒಂದು ಭಾಗ ಕುಸಿದಿದೆ. ಈ ವೇಳೆ ಮೂವರು ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಮಿಕರನ್ನು ಹೊರತರಲು ಪ್ರಯತ್ನಿಸುತ್ತಿರುವ ರಕ್ಷಣಾ ತಂಡಕ್ಕೆ ಸವಾಲು ಎದುರಾಗಿದ್ದು, ನೀರಿನ ಜೊತೆಯಲ್ಲಿ ಕೆಸರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ.

ಶ್ರೀಶೈಲಂ ಅಣೆಕಟ್ಟಿನ ಹಿಂದೆ ಇರುವ 44 ಕಿ.ಮೀ ಉದ್ದದ ಸುರಂಗದ ಛಾವಣಿಯ ಭಾಗ ನಿನ್ನೆ ಬೆಳಿಗ್ಗೆ 8.30 ರ ಸುಮಾರಿಗೆ ಕುಸಿದಿದೆ. ಎನ್‌ಡಿಆರ್‌ಎಫ್‌ನ ನಾಲ್ಕು ತಂಡಗಳು ಕುಸಿತದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ. ವರದಿಯ ಪ್ರಕಾರ, ಸುರಂಗ ಗೋಡೆಯ ಬದಿಯಲ್ಲಿನ ಬಿರುಕುಗಳಿಂದ ನೀರು ಹೊರಬರುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಮೊದಲು ನೀರನ್ನು ತೆಗೆದುಹಾಕುವ ಅಗತ್ಯವಿದೆ. ಕುಸಿದ ಛಾವಣಿಯ ವ್ಯಾಪ್ತಿಯು 200 ಮೀಟರ್ ಆಗಿದ್ದು, ಸುರಂಗದ ಬಾಯಿಯಿಂದ ಸುಮಾರು 13 ಕಿ.ಮೀ ದೂರದಲ್ಲಿದೆ ಎಂದು ಅಂದಾಜಿಸಲಾಗಿದೆ.

NDRF ಅಧಿಕಾರಿಯೊಬ್ಬರು ಕಾರ್ಯಚರಣೆ ಬಗ್ಗೆ ಮಾಹಿತಿ ನೀಡಿ, ನಾವು ಸುರಂಗ ಕೊರೆಯುವ ಯಂತ್ರದ ತುದಿಯನ್ನು ತಲುಪಿದಾಗ, ಕಾರ್ಮಿಕರ ಹೆಸರುಗಳನ್ನು ಕರೆದಿದ್ದೇವೆ, ಆದರೆ ಉತ್ತರ ಸಿಗಲಿಲ್ಲ ಎಂದು ಅವರು ಹೇಳಿದ್ದಾರೆ. ಸುರಂಗವು ನೀರಿನಿಂದ ತುಂಬಿದ್ದು, ಅವಶೇಷಗಳನ್ನು ಸ್ವಚ್ಛಗೊಳಿಸುವವರೆಗೆ ಕಾರ್ಮಿಕರನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Tunnel Collapses: ಡ್ಯಾಮ್‌ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್‌

ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಪರಿಸ್ಥಿತಿಯನ್ನು ದಿನದ 24 ಗಂಟೆಗಳೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯವು ಸಹಾಯಕ್ಕಾಗಿ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದೆ. ನಿನ್ನೆ ನಡೆದ ಪರಿಶೀಲನಾ ಸಭೆಯಲ್ಲಿ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ಅವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ.